ರಾಕ್ಷಸೀ ಪ್ರವೃತ್ತಿ ಹೊಂದಿದವರಿಂದ ಮಾತ್ರ ಗೋ ದೌರ್ಜನ್ಯ ಸಾಧ್ಯ: ನ. ಸೀತಾರಾಮ್

KannadaprabhaNewsNetwork | Published : Jan 21, 2025 12:30 AM

ಸಾರಾಂಶ

ಗೋಮಾತೆಯ ಕೆಚ್ಚಲು ಕತ್ತರಿಸಿದ ವಿಕೃತ ಮನಸ್ಸುಗಳನ್ನು ಖಂಡಿಸಿ ಪುತ್ತೂರು ಜಿಲ್ಲಾ ಗೋ ಸಂರಕ್ಷಣಾ ಸಮಿತಿ ವತಿಯಿಂದ ಸೋಮವಾರ ಪುತ್ತೂರಿನಲ್ಲಿ ಪ್ರತಿಭಟನಾ ಮೆರವಣಿಗೆ, ಬಳಿಕ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಪ್ರತಿಭಟನಾ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ಸ್ಥಾನ ಪಡೆಯುವ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎನ್ನುವ ಒತ್ತಾಯ ಈಗಾಗಲೇ ಇದೆ. ಆದರೆ ಗೋವನ್ನು ರಾಷ್ಟ್ರೀಯ ಸಂಪತ್ತು ಎಂದು ಘೋಷಿಸುವಂತೆ ಆಗ್ರಹಿಸಬೇಕಾಗಿದೆ. ತಾಯಿ ಸಮಾನಾದ ಗೋವಿನ ಮೇಲೆ ಕ್ರೌರ್ಯ ಮಾನಸಿಕತೆ ಪ್ರದರ್ಶಿಸುವವರು ಮನುಷ್ಯರೇ ಅಲ್ಲ ಎಂದು ರಾಷ್ಟೀಯ ಸ್ವಯಂ ಸೇವಕ ಸಂಘದ ಪ್ರಾಂತ ಸಹ ಸೇವಾ ಪ್ರಮುಖ್ ನ. ಸೀತಾರಾಮ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೋಮಾತೆಯ ಕೆಚ್ಚಲು ಕತ್ತರಿಸಿದ ವಿಕೃತ ಮನಸ್ಸುಗಳನ್ನು ಖಂಡಿಸಿ ಪುತ್ತೂರು ಜಿಲ್ಲಾ ಗೋ ಸಂರಕ್ಷಣಾ ಸಮಿತಿ ವತಿಯಿಂದ ಸೋಮವಾರ ಪುತ್ತೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಬಳಿಕ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್ ಮಾತನಾಡಿ, ಗೋವು ಕೇವಲ ಪ್ರಾಣಿಯಲ್ಲ, ತಾಯಿಗಿಂತಲೂ ಮಿಗಿಲು. ಆದರೆ ಮತಾಂಧರು ಹಿಂದೂ ಸಮಾಜದ ಅಸ್ಮಿತೆಯಾದ ಗೋಮಾತೆಯ ದೌರ್ಜನ್ಯಕ್ಕೆ ಮುಂದಾಗಿದ್ದಾರೆ. ಇದಕ್ಕೆ ಸೂಕ್ತ ಉತ್ತರವನ್ನು ಹಿಂದೂ ಸಮಾಜ ನೀಡಲಿದೆ ಎಂದರು.

ವಿಹಿಂಪ ಜಿಲ್ಲಾಧ್ಯಕ್ಷ ಕೃಷ್ಣಪ್ರಸನ್ನ ಮಾತನಾಡಿದರು. ಸಂಘಟನೆಯ ವಿಶಾಖ್ ಸಸಿಹಿತ್ಲು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

ಪ್ರತಿಭಟನ ಮೆರವಣಿಗೆ:

ನೆಲ್ಲಿಕಟ್ಟೆ ಖಾಸಗಿ ಬಸ್‌ ನಿಲ್ದಾಣದ ಬಳಿ ಗೋ ಪೂಜೆ ನೆರವೇರಿಸುವ ಮೂಲಕ ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಲಾಯಿತು. ಬಳಿಕ ಮೆರವಣಿಗೆ ಹೊರಟು ಕೆ.ಎಸ್.ಆರ್.ಟಿ.ಸಿ. ನಿಲ್ದಾಣ, ಗಾಂಧಿಕಟ್ಟೆ, ಕೋರ್ಟು ರಸ್ತೆಯ ಮೂಲಕ ಸಾಗಿ ತಾಲೂಕು ಆಡಳಿತ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವ ಕುಮಾರ್, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ, ನಗರ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು, ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ ನಾಯ್ಕ್, ಮಾಜಿ ಅಧ್ಯಕ್ಷ ಜೀವಂಧರ್ ಜೈನ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡವು, ಬಿಜೆಪಿ ನಗರ ಮಂಡಲ ಉಪಾಧ್ಯಕ್ಷ ಯುವರಾಜ್ ಪೆರ್ವತೋಡಿ, ಸುರೇಶ್ ಆಳ್ವ, ಸಾಜ ರಾಧಾಕೃಷ್ಣ ಆಳ್ವ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಉಮೇಶ್ ಕೊಡಿಯಡ್ಕ, ಚಂದ್ರಶೇಖರ ರಾವ್ ಬಪ್ಪಳಿಗೆ, ಹಿರಿಯರಾದ ಅಪ್ಪಯ್ಯ ಮಣಿಯಾಣಿ ರಾಜೇಶ್ ಬನ್ನೂರು, ಸುಜಿಂದ್ರ ಪ್ರಭು, ವಿದ್ಯಾಗೌರಿ, ಪುರುಷೋತ್ತಮ ಮುಂಗ್ಲಿಮನೆ, ಮುರಳಿಕೃಷ್ಣ ಹಸಂತಡ್ಕ, ಶಶಿಧರ್ ನಾಯಕ್, ಅನಿಲ್ ತೆಂಕಿಲ, ನಾಗೇಂದ್ರ ಬಾಳಿಗ, ವಿಶಾಖ್ ಸಸಿಹಿತ್ಲು ಮತ್ತಿತರರು ಸಭೆಯಲ್ಲಿ ಪಾಲ್ಗೊಂಡರು.

Share this article