ಗೋರಕ್ಷಕರ ಮೇಲೆ ಪೊಲೀಸ್ ಅಧಿಕಾರಿಯಿಂದ ದೌರ್ಜನ್ಯ: ಆರೋಪ

KannadaprabhaNewsNetwork |  
Published : Apr 02, 2026, 01:30 AM IST
1ಕೆಎಂಎನ್ ಡಿ18 | Kannada Prabha

ಸಾರಾಂಶ

ಕಳೆದ ಎರಡು ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಗೋವುಗಳ ಕಳ್ಳಸಾಗಾಣಿಕೆ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಈ ಬಗ್ಗೆ ಹಲವಾರು ಬಾರಿ ಜಿಲ್ಲಾದ್ಯಂತ ಗೋರಕ್ಷಕರು ಹಾಗೂ ಸಾರ್ವಜನಿಕರು ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಿದರೂ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಗೋರಕ್ಷಕರ ಮೇಲೆ ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಗೋ ರಕ್ಷಣಾ ಸಮಿತಿ ಹಾಗೂ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಬಳಿ ಸೇರಿದ ಗೋರಕ್ಷಕ ಕಾರ್ಯಕರ್ತರು, ಅಕ್ರಮವಾಗಿ ಗೋವುಗಳನ್ನು ಕಳ್ಳ ಸಾಗಾಣಿಕೆಗಾರರು ಹಾಗೂ ಅವರಿಗೆ ರಕ್ಷಣೆ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಕಳೆದ ಎರಡು ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಗೋವುಗಳ ಕಳ್ಳಸಾಗಾಣಿಕೆ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಈ ಬಗ್ಗೆ ಹಲವಾರು ಬಾರಿ ಜಿಲ್ಲಾದ್ಯಂತ ಗೋರಕ್ಷಕರು ಹಾಗೂ ಸಾರ್ವಜನಿಕರು ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಿದರೂ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ ಎಂದು ದೂರಿದರು.

ಕಳೆದ ಮಾ.20ರಂದು ಬೆಳಗ್ಗೆ ಶ್ರೀರಂಗಪಟ್ಟಣ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಸರಗುಪ್ಪೆ ಸಾರ್ವಜನಿಕರು, ಬೆಳ್ಳಾಳೆ ಕಡೆಯಿಂದ ಪಾಂಡವಪುರ ಕಿರಂಗೂರು, ಶ್ರೀರಂಗಪಟ್ಟಣ ಮಾರ್ಗವಾಗಿ ಮೈಸೂರು ಕಸಾಯಿಖಾನೆಗೆ ಅಕ್ರಮವಾಗಿ ಗೋಸಾಗಣೆ ಮಾಡುತ್ತಿರುವುದಾಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಿಸಿ ಗೋಕಳ್ಳರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದರು.

ಬಳಿಕ ಗೋಕಳ್ಳರ ಪರವಾಗಿ ಸುಮಾರು 20ಕ್ಕೂ ಹೆಚ್ಚು ಮಂದಿ ಧಾವಿಸಿ ಮಾಹಿತಿ ನೀಡಿದ ಕಾರ್ಯಕರ್ತರನ್ನು ನಿಂಧಿಸಿ ಧಮಕಿ ಹಾಕಿದ್ದಾರೆ. ಈ ವೇಳೆ ಸಾರ್ವಜನಿಕರು ಮತ್ತು ಹಿಂದೂ ಜಾಗರಣ ವೇದಿಕೆ ಮುಖಂಡರು ಪ್ರಶ್ನಿಸಿದಾಗ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೆ.ಆರ್.ಎಸ್. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಮೇಶ್ ಕರ್ಕಿಕಟ್ಟಿ ತಮ್ಮ ಕಾರ್ಯವಾಪ್ತಿ ಮೀರಿ ಬಂದು ಗೋಕಳ್ಳರ ಪರ ಮಾತನಾಡಿ, ಗೋರಕ್ಷಕರ ಮತ್ತು ಸಾರ್ವಜನಿಕರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು.

ಸಾಂವಿಧಾನ ಚೌಕಟ್ಟಿನಲ್ಲಿರುವ ಸಾಮಾಜಿಕ ಕಾರ್‍ಯನಿರ್ವಹಿಸುತ್ತಿರುವ ಗೋರಕ್ಷಕರ ಮತ್ತು ಸಾರ್ವಜನಿಕರ ವಿರುದ್ಧ ದೌರ್ಜನ್ಯ ಎಸಗಿ ಗೋರಕ್ಷಕರ ಮತ್ತು ಸಾರ್ವಜನಿಕರ ನೈತಿಕ ಬಲವನ್ನು ಕುಗ್ಗಿಸಿ, ಗೋಕಳ್ಳರಿಗೆ ಉತ್ತೇಜನ ನೀಡುವ ರೀತಿ ಮಾತನಾಡಿದ್ದಾರೆ. ಪೊಲೀಸರ ಈ ಕ್ರಮದಿಂದ ಜಿಲ್ಲಾದ್ಯಂತ ಕೆಲವು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಅಕ್ರಮ ಗೋಕಳ್ಳ ಸಾಗಣೆಯಲ್ಲಿ ಭಾಗಿಯಾಗಿರುವಂತೆ ಸಂಶಯ ವ್ಯಕ್ತವಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಕಾರಿ ಮತ್ತು ನೌಕರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಚಂದನ್, ಬಾಲರಾಜು, ವಸಂತ್‌ಕುಮಾರ್, ಸೃಜನ್, ವಿಶ್ವ, ನಿತ್ಯಾಂದ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅದ್ಧೂರಿಯಾಗಿ ನಡೆದ ಶ್ರೀಚೆಲುವನಾರಾಯಣಸ್ವಾಮಿ ತೆಪ್ಪೋತ್ಸವ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರದಲ್ಲಿ ಏರಿಕೆ