ಕಾರವಾರ: ಗೋವುಗಳನ್ನು ಸಾಕುವವರ ಸಂಖ್ಯೆ ಹೆಚ್ಚಬೇಕು. ಸಾಕಲು ಸಾಧ್ಯವಾಗದೇ ಇರುವವರು ಗೋಶಾಲೆಗಳಿಗೆ ಗೋವುಗಳನ್ನು ನೀಡಬೇಕು. ಗೋಶಾಲೆಗಳಲ್ಲಿ ಗೋವುಗಳನ್ನು ಜೋಪಾನವಾಗಿ, ಮೇವು ಹಾಕಿ ನೋಡಿಕೊಳ್ಳಲಾಗುವುದು ಎಂದು ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.ಅವರು ಶನಿವಾರ ಜಿಲ್ಲಾಡಳಿತ, ಉತ್ತರ ಕನ್ನಡ ಜಿಲ್ಲಾ ಪ್ರಾಣಿದಯಾ ಸಂಘ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ತಾಲೂಕಿನ ಸಾವಂತವಾಡ ಹೋಬಳಿ ಕಣಸಗಿರಿ ಗ್ರಾಮದಲ್ಲಿ ನಿರ್ಮಿಸಲಾದ ಸರ್ಕಾರಿ ಗೋಶಾಲೆ ಉದ್ಘಾಟಿಸಿ ಮಾತನಾಡಿದರು.
ಶಾಸಕ ಸತೀಶ್ ಕೆ ಸೈಲ್, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಕಾಂದೂ, ಪ್ರೋಬೇಷನರಿ ಐ.ಎ.ಎಸ್ ಅಧಿಕಾರಿ ಝುಪಿಶಾನ್ ಹಕ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ಮೋಹನ ಕುಮಾರ್, ಚಿತ್ತಾಕುಲಾ ಗ್ರಾಮ ಪಂಚಾಯತ ಅಧ್ಯಕ್ಷ ನಿತಿನ್ ಆನಂದ ಬಾಂದೇಕರ್ ಮತ್ತಿತರರು ಇದ್ದರು.