ಹರಪನಹಳ್ಳಿ: ವಿವಿಧ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಸಿಪಿಐ ಪಕ್ಷದ ಕಾರ್ಯಕರ್ತರು ಕೆರೆಗುಡಿಹಳ್ಳಿ ಗ್ರಾಮದಿಂದ ಚಿಕ್ಕಬ್ಬಳ್ಳಿ ಮೂಲಕ ಹೊಸಕೋಟೆ ಗ್ರಾಪಂ ವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.
ಹರಪನಹಳ್ಳಿ ಅತ್ಯಂತ ಬರ ಪೀಡಿತ ಪ್ರದೇಶವಾಗಿದ್ದು, ಧನಾತ್ಮಕ ಮಾಹಿತಿ ಪಡೆದು ಅಭಿವೃದ್ಧಿ ಪಡಿಸಬೇಕು ಎಂದರು.
ಸಿಪಿಐ ಪಕ್ಷದ ತಾಲೂಕು ಕಾರ್ಯದರ್ಶಿ ರಮೇಶ್ ನಾಯ್ಕ ಮಾತನಾಡಿ, ದುಡಿಯುವ ಕೈಗಳಿಗೆ ಕೆಲಸ ನೀಡಲು ಜಾರಿಗೆ ತಂದಿದ್ದ ಉದ್ಯೋಗ ಖಾತರಿ ಯೋಜನೆಯ ಮೂಲ ಸ್ವರೂಪವನ್ನು ಕೇಂದ್ರ ಸರ್ಕಾರ ಬದಲಾಯಿಸಿ ಯೋಜನೆ ತಡೆಯುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ರುದ್ರಭೂಮಿ ಇಲ್ಲ. ಆದ್ದರಿಂದ ಆ ಸಂಬಂಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.ಕಿಸಾನ್ ಸಭಾದ ಜಿಲ್ಲಾಧ್ಯಕ್ಷ ಗುಡಿಹಳ್ಳಿ ಹಾಲೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಸ್ತೆ, ಸಮುದಾಯ ಭವನ, ವಸತಿ, ಆರೋಗ್ಯ, ಪಡಿತರ ವ್ಯತ್ಯಯ, ರೈತರಿಗೆ ವಿಮೆ, ರುದ್ರಭೂಮಿ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೂರಿವೆ. ಆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಇ ಸ್ವತ್ತು ತಂತ್ರಾಂಶದ ಲೋಪದೋಷ ಸರಿಪಡಿಸುವ ಕೆಲಸ ಸರ್ಕಾರದ ಮಟ್ಟದಲ್ಲಿ ನಡೆದಿದೆ. 20 ದಿನದ ಒಳಗಾಗಿ ಸರಿ ಪಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿಪಿಐ ಪಕ್ಷದ ಶಿವರಾಮ್, ಚನ್ನವೀರ ಸ್ವಾಮಿ, ಸಲಾಂ ಸಾಬ್, ಚಮನ್ ಸಾಬ್, ಶರಣಪ್ಪ, ದ್ವಾರಕೀಶ್, ಕರಿಬಸವರಾಜ, ಪಿಎಸ್‌ಐ ವಿಜಯ್ ಕೃಷ್ಣ, ಪಿಡಿಒ ಹೇಮಂತ್ ಕುಮಾರ್, ಕಾರ್ಯದರ್ಶಿ ಚನ್ನಬಸಪ್ಪ, ಮುಖಂಡ ಬೊಮ್ಮಲಿಂಗಪ್ಪ, ಜ್ಯಾತಪ್ಪ, ಭರಮಣ್ಣ, ನಾಗರಾಜ್, ಚಂದ್ರಪ್ಪ, ಸೇರಿದಂತೆ ಇತರರು ಇದ್ದರು.