ಬಿಜೆಪಿ ಮೈತ್ರಿಕೂಟ ಸೋಲಿಸಲು ಕಾಂಗ್ರೆಸ್ಸಿಗೆ ಸಿಪಿಐ ಬೆಂಬಲ

KannadaprabhaNewsNetwork |  
Published : Apr 18, 2024, 02:20 AM IST
16ಕೆಡಿವಿಜಿ2-ದಾವಣಗೆರೆಯಲ್ಲಿ ಮಂಗಳವಾರ ಸಿಪಿಐ ರಾಜ್ಯ ಮುಖಂಡ ಡಾ.ಸಿದ್ದನಗೌಡ ಪಾಟೀಲ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಪಿಐ ಬೆಂಬಲ ಸೂಚಿಸಲಿದೆ. ಮತದಾರರು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರಿಗೆ ಮತ ನೀಡುವ ಗೆಲ್ಲಿಸಬೇಕು ಎಂದು ಪಕ್ಷದ ರಾಜ್ಯ ಮುಖಂಡ ಡಾ.ಸಿದ್ದನಗೌಡ ಪಾಟೀಲ್ ದಾವಣಗೆರೆಯಲ್ಲಿ ಮನವಿ ಮಾಡಿದರು.

- ದಾವಣಗೆರೆ ಕ್ಷೇತ್ರದಲ್ಲಿ ಡಾ.ಪ್ರಭಾ ಗೆಲ್ಲಿಸಲು ಡಾ.ಸಿದ್ದನಗೌಡ ಪಾಟೀಲ್ ಮನವಿ - - - ಕನ್ನಡಪ್ರಭ ವಾರ್ತೆ, ದಾವಣಗೆರೆ

ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಪಿಐ ಬೆಂಬಲ ಸೂಚಿಸಲಿದೆ. ಮತದಾರರು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರಿಗೆ ಮತ ನೀಡುವ ಗೆಲ್ಲಿಸಬೇಕು ಎಂದು ಪಕ್ಷದ ರಾಜ್ಯ ಮುಖಂಡ ಡಾ.ಸಿದ್ದನಗೌಡ ಪಾಟೀಲ್ ಮನವಿ ಮಾಡಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮತದಾನದ ಹಕ್ಕು ಉಳಿಸಿಕೊಳ್ಳಲು ನಾವು ಚುನಾವಣೆಯನ್ನು ಉಳಿಸಿಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ದೇಶದಲ್ಲಿ ಚುನಾವಣೆಯೇ ಎಂಬ ಪದ್ಧತಿಯೇ ಇಲ್ಲವಾಗುತ್ತದೆ . ಚುನಾವಣೆಯು ದೇಶದ ಪ್ರಜಾಪ್ರಭುತ್ವದಡಿ ನಡೆಯುತ್ತದೆ. ಒಂದು ವೇಳೆ ಚುನಾವಣೆ ಇಲ್ಲವೆಂದರೆ ನಾವು ಮುಂದಿನ ದಿನಗಳನ್ನು ಊಹಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಒಂದು ದೇಶ ಒಬ್ಬ ನಾಯಕ ಎಂಬ ಪರಿಸ್ಥಿತಿ ಎದುರಾಗಿ, ಹಿಟ್ಲರ್ ಆಡಳಿತ ಬರಲಿದೆ. ಒಂದುವೇಳೆ ಬಿಜೆಪಿ ಅಧಿಕಾರಕ್ಕೆ ಬಂದರೆ ಪಾರ್ಲಿಮೆಂಟ್ ಕಾಯುವ ಬದಲು ಕಾರ್ಪೋರೇಟ್ ಕಂಪನಿಗಳನ್ನು ಕಾಯಲು ಅವಕಾಶ ಮಾಡಿಕೊಡುತ್ತದೆ. ಅಲ್ಲದೇ, ದೇಶದ ಬಹುತ್ವ ಒಡೆದು ಹಾಕಿ, ಏಕವ್ಯಕ್ತಿ ಆಡಳಿತ ಬರಲಿದೆ. ಅಲ್ಲದೇ, ವಿಪಕ್ಷಗಳನ್ನು ದಮನ ಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಅವರು ದೂರಿದರು.

ಚುನಾವಣೆಯಲ್ಲಿ ಹೇಳಿಕೊಳ್ಳಲು ಯಾವುದೇ ವಿಷಯ ಇಲ್ಲದ ಕಾರಣಕ್ಕೆ ದೇವಸ್ಥಾನದಲ್ಲಿ ಇರಬೇಕಾದ ಶ್ರೀರಾಮನನ್ನು ಬೀದಿಗೆ ತಂದಿದ್ದಾರೆ. ಲೋಕಸಭೆಯಲ್ಲಿ ಇರಬೇಕಾದ ಮೋದಿ ದೇವಸ್ಥಾನಗಳಲ್ಲಿ ಕುಳಿತು ಭಜನೆ ಮಾಡುತ್ತಿದ್ದಾರೆ. ರೈತವಿರೋಧಿ, ಕೃಷಿವಿರೋಧಿ, ಕಾರ್ಮಿಕ ವಿರೋಧಿ ಕಾನೂನು ಜಾರಿಗೆ ತಂದು, ದೇಶದ ಕಾರ್ಮಿಕರು, ರೈತರ ಬದುಕನ್ನೇ ನಾಶ ಮಾಡುತ್ತಿದ್ದಾರೆ. ಆಡಳಿತ ವಿರೋಧಿ ಅಭಿಪ್ರಾಯಗಳು ಪ್ರಸಾರವಾಗದಂತೆ ತಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಬಿಎಸ್ಆರ್‌ಬಿ ಕಾಯ್ದೆ ಜಾರಿಗೆ ಬಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡಿದಂತಾಗುತ್ತದೆ. ಇಂತಹ ಅಪಾಯಕಾರಿ ಹೆಜ್ಜೆ ಇಡುತ್ತಿರುವ ಬಿಜೆಪಿಯನ್ನು ದೂರ ಇಡಲು ಪ್ರಜಾಸತ್ತೆಯ ಅಳಿವು ಉಳಿವಿನ ಪ್ರಶ್ನೆಯಾಗಿರುವ ಲೋಕಸಭೆ ಚುನಾವಣೆಯಲ್ಲಿ ದೇಶದ ಜನತೆ ಬಿಜೆಯನ್ನು ಸೋಲಿಸಬೇಕು ಎಂದು ಸಿದ್ದನಗೌಡ ಪಾಟೀಲ ತಿಳಿಸಿದರು.

ಸಿಪಿಐ ಜಿಲ್ಲಾ ಮುಖಂಡರಾದ ಆನಂದರಾಜ, ಆವರಗೆರೆ ಎಚ್‌.ಜಿ.ಉಮೇಶ, ಆವರಗೆರೆ ಚಂದ್ರು, ವಿ.ಲಕ್ಷ್ಮಣ, ಟಿ.ಎಸ್.ನಾಗರಾಜ, ಎಂ.ಬಿ.ಶಾರದಮ್ಮ ಇತರರು ಇದ್ದರು.

- - - -16ಕೆಡಿವಿಜಿ2:

ದಾವಣಗೆರೆಯಲ್ಲಿ ಮಂಗಳವಾರ ಸಿಪಿಐ ರಾಜ್ಯ ಮುಖಂಡ ಡಾ.ಸಿದ್ದನಗೌಡ ಪಾಟೀಲ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನ್ಯಕೋಮಿನವನ ಜತೆ ಮದುವೆ: ಮೊಮ್ಮಗಳ ಶಿಶು ಕೊಂ*ದ ಅಜ್ಜಿ!
ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ