ಕೊಪ್ಪಳದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಿಪಿಎಂ ಪ್ರತಿಭಟನೆ

KannadaprabhaNewsNetwork |  
Published : Feb 09, 2024, 01:52 AM IST
8ಕೆಪಿಎಲ್22 ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಭಾರತ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪ ಬಲಗೊಳಿಸಲು ಈಗ ಒಕ್ಕೂಟ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕೊಪ್ಪಳ: ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹಸ್ತಕ್ಷೇಪಗಳನ್ನು ನಿಲ್ಲಿಸಲು ಒತ್ತಾಯಿಸಿ ನಗರದ ಅಶೋಕ ವೃತ್ತದಲ್ಲಿ ಗುರುವಾರ ಮಧ್ಯಾಹ್ನ ಕಮ್ಯೂನಿಸ್ಟ್ ಪಕ್ಷಗಳು ಮತ್ತು ವಿವಿಧ ಸಂಘಟನೆಗಳು ಜಂಟಿಯಾಗಿ ನಗರದ ಅಶೋಕ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಭಾರತ ಕಮ್ಯೂನಿಸ್ಟ್ ಪಕ್ಷ (ಎಂ) ಮುಖಂಡ ಜಿ. ನಾಗರಾಜ್, ಭಾರತ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪ ಬಲಗೊಳಿಸಲು ಈಗ ಒಕ್ಕೂಟ ಸರ್ಕಾರ ರಾಜ್ಯ ಸರ್ಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.ಕರ್ನಾಟಕ, ಕೇರಳ ಸರ್ಕಾರಗಳು ಒಕ್ಕೂಟ ಸರ್ಕಾರದ ಕಿರುಕುಳ ಹಾಗೂ ತಾರತಮ್ಯ ನೀತಿ ವಿರುದ್ಧ ಇದೇ ಫೆ.7, 8ರಂದು ನವದೆಹಲಿಯಲ್ಲಿ ನಡೆದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ ಅಡ್ಡಿಯಾಗಬಾರದು. ಕರ್ನಾಟಕಕ್ಕೆ ಬರಗಾಲದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಒಕ್ಕೂಟ ಸರ್ಕಾರ ತನ್ನ ಮನಸ್ಸಿಗೆ ತೋಚಿದಂತೆ ರಾಜ್ಯ ಸರ್ಕಾರಗಳು ಸಾಲ ಪಡೆಯುವಂತೆ ಮಾಡುವುದನ್ನು ನಿಲ್ಲಿಸಬೇಕು. ಕೇಂದ್ರ ಪ್ರಾಯೋಜಿತ ಯೋಜನೆಗಳ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಒಕ್ಕೂಟ ಸರ್ಕಾರದ ಮಧ್ಯಪ್ರವೇಶ ಮಾಡಬಾರದು. ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಒಕ್ಕೂಟ ಸರಕಾರ ಇಡಿ, ಸಿಬಿಐ, ಆದಾಯ ತೆರಿಗೆ ವಿಭಾಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು ಎಂದರು.ಎಐಟಿಯುಸಿ ಜಿಲ್ಲಾಧ್ಯಕ್ಷ ಬಸವರಾಜ್ ಶೀಲವಂತರ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಖಾಸೀಮ್ ಸರ್ದಾರ್, ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್, ಹಿರಿಯ ಮುಖಂಡ ಮಹಾಂತೇಶ ಕೊತಬಾಳ, ಶೇಖಪ್ಪ, ಮೆಹಬೂಬ ಪಾಶಾ ಮುಲ್ಲಾ, ಸಂಜಯದಾಸ್ ಕೌಜಗೇರಿ, ಷಣ್ಮುಖಪ್ಪ, ಆರ್.ಶಾಸ್ತ್ರಿಮಠ, ತಾಲೂಕು ಕಾರ್ಪೆಂಟರ್ ಸಂಘದ ಮಾಜಿ ಅಧ್ಯಕ್ಷ ಮರ್ದಾನಸಾಬ್ ಸಿದ್ದಿ ಮುಂತಾದವರು ಭಾಗವಹಿಸಿದ್ದರು.

PREV