ಬೆಲೆ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ

KannadaprabhaNewsNetwork |  
Published : Apr 05, 2025, 12:46 AM IST
04ಬಿಜಿಪಿ-1 | Kannada Prabha

ಸಾರಾಂಶ

ಬಡವರನ್ನ ಉದ್ದಾರ ಮಾಡುವುದಾಗಿ ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಹಾಲು, ಮೊಸರು, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಬಡವರನ್ನು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿಸುವಂತಹ ಕೆಲಸಕ್ಕೆ ಮುಂದಾಗಿದೆ. ಎಲ್ಲ ಅಗತ್ಯತೆಗಳ ಸೇವೆ, ಸರಕುಗಳ ಮೇಲೆ ದರ ಏರಿಕೆ ಮಾಡಲಾಗಿದೆ

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ಹಾಲು, ಮೊಸರು, ಡೀಸಲ್, ಟೋಲ್‌ ಶುಲ್ಕ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಎಂ ಕಾರ್ಯಕರ್ತರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಪಿಎಂ ಮುಖಂಡರು, ಬಡವರನ್ನ ಉದ್ದಾರ ಮಾಡುವುದಾಗಿ ಭರವಸೆ ನೀಡಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಹಾಲು, ಮೊಸರು, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಬಡವರನ್ನು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿಸುವಂತಹ ಕೆಲಸಕ್ಕೆ ಮುಂದಾಗಿದೆ ಎಂದು ಆಕೋಶ ವ್ಯಕ್ತಪಡಿಸಿದರು.

ಉತ್ಪಾದಕ- ಗ್ರಾಹಕಗೆ ಮೋಸ

ರಾಜ್ಯ ಸರ್ಕಾರ ಏಪ್ರಿಲ್ ತಿಂಗಳಿನಿಂದ ಪ್ರತಿ ಲೀಟರ್ ಹಾಲಿಗೆ 4 ರೂ.ಗಳನ್ನು ಹೆಚ್ಚಿಸಿದೆ. ಇದರಿಂದಾಗಿ ಗ್ರಾಹಕ ಹಾಲನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಈ ಹೆಚ್ಚಳದ ದರದಲ್ಲಿ ರೈತರಿಗೂ ಸಹ ನೀಡುತ್ತಿಲ್ಲ. ಹಾಲು ಉತ್ಪಾದಕನಿಗೂ ಮತ್ತು ಹಾಲು ಖರೀದಿಸುವ ಗ್ರಾಹಕರಿಗೂ ಸರ್ಕಾರ ಮೋಸ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸಿದರು.

ನಾವು ರೈತರ ಪರ ಎಂದ ಕಾಂಗ್ರೆಸ್ಸಿಗರು ರೈತರ ಕೊಳವೆ ಬಾವಿಗಳ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡುವ ಬದಲು ಸ್ಮಾರ್ಟ್‌ ಮೀಟರ್ ಗಳನ್ನು ಅಳವಡಿಸಿ ಪ್ರೀಪೈಡ್ ರೀತಿಯಲ್ಲಿ ದುಡ್ಡು ಕಟ್ಟಿದವನಿಗೆ ವಿದ್ಯುತ್ ಎಂದು ರೈತನಿಗೆ ಮೋಸ ಮಾಡಲು ಹೊರಟಿದ್ದಾರೆ. ವಿದ್ಯುತ್ ನ ಪ್ರತಿ ಯುನಿಟ್ ಗೆ 36 ಪೈಸೆ ಹೆಚ್ಚಳ ಮಾಡಿದ್ದಾರೆ. ಇಂಧನ ಸೇರಿದಂತೆ ಎಲ್ಲ ಅಗತ್ಯತೆಗಳ ಸೇವೆ, ಸರಕುಗಳ ಮೇಲೆ ದರ ಏರಿಕೆಯನ್ನು ಮಾಡಿ ಬಡ, ಮಧ್ಯಮ ವರ್ಗದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಾಗುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಬಿಜೆಪಿಗೆ ನೈತಿಕತೆ ಇಲ್ಲ

ಟೋಲ್ ಶುಲ್ಕದಲ್ಲಿ ಶೇ.5 ರಷ್ಟು ಏರಿಕೆ ಮಾಡಲಾಗಿದೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗಿದೆ. ರೂಪಾಯಿ ಮೌಲ್ಯದವು ಡಾಲರ್ ಎದುರಿಗೆ ಮಲಗಿದೆ ಆದರೆ ರಾಜ್ಯ ಬಿಜೆಪಿ ನಾಯಕರಿಗೆ ಇವುಯಾವುದು ಏಕೆ ಕಾಣಿಸುತ್ತಿಲ್ಲ ಎಂದು ಪ್ರಶ್ನಿಸಿದ ಅವರು ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡುತ್ತೇವೆಂದು ಹೊರಟಿರುವ ಯಡಿಯೂರಪ್ಪ ಮತ್ತು ಅವರ ಮಗ ವಿಜೇಂದ್ರರವರಿಗೆ ಹೋರಾಟ ಮಾಡುವ ನೈತಿಕತೆ ನಿಮಗಿಲ್ಲ. ನಿಮ್ಮ ಕೇಂದ್ರ ಸರ್ಕಾರ ಮಾಡುತ್ತಿರುವ ಜನವಿರೋಧಿ ನೀತಿಗಳನ್ನು ನಿಯಂತ್ರಿಸಿ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಈ ಸಂದರ್ಭದಲ್ಲಿ ಸಿಪಿಎಂ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ