ಕನ್ನಡಪ್ರಭ ವಾರ್ತೆ ಮಂಗಳೂರು
ಭ್ರಷ್ಟ ಲೂಟಿಕೊರ ಆಯುಕ್ತರು ತೊಲಗಲೇಬೇಕೆಂದು ಸೇರಿದ್ದ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. ಬಳಿಕ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಬಿ.ಕೆ ಇಮ್ತಿಯಾಜ್, ಪಾಲಿಕೆ ಆಯುಕ್ತರು ಸ್ಮಾರ್ಟ್ ಸಿಟಿ ಸಹಿತ ಇತರೆ ಯೋಜನೆಯ ನೂರಾರೂ ಕೋಟಿ ರು. ಅನುದಾನವನ್ನು ನಗರದ ಅಭಿವೃದ್ಧಿಗೆ ಬಳಸುವ ಬದಲಾಗಿ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ. ಲೋಕಾಯುಕ್ತ ಬಲೆಗೆ ಬಿದ್ದ ಆಯುಕ್ತರನ್ನು ಬಂಧಿಸದೆ ಇರಲು ಪಾಲಿಕೆ ಆಡಳಿತ ಬಿಜೆಪಿ, ಶಾಸಕರು ಹಾಗೂ ರಾಜ್ಯ ಸರ್ಕಾರ ಶಾಮೀಲಾಗಿದೆ. ಆಯುಕ್ತರನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನೀಲ್ ಕುಮಾರ್ ಬಜಾಲ್ ಮಾತನಾಡಿ, ಸ್ವತಃ ಆಯುಕ್ತರು ಅಕ್ರಮ ಆಸ್ತಿ ಸಂಪಾದನೆ ಮಾಡುವ ಮೂಲಕ ಬೇಲಿಯೇ ಎದ್ದು ಹೊಲ ಮೇಯ್ದ ಹಾಗೆ ಅಗಿದೆ. ಕೋಟ್ಯಂತರ ಬೆಲೆ ಬಾಳುವ ಮೂರು ಮನೆಗಳನ್ನು ಹೊಂದಿರುವ ಈ ಭ್ರಷ್ಟ ಆಯುಕ್ತರಿಗೆ ತನ್ನ ಅಧಿಕಾರದ ಅವಧಿಯಲ್ಲಿ ಬಡವರಿಗೆ ಒಂದು ತುಂಡು ನಿವೇಶನ ನೀಡಲು ಸಾಧ್ಯವಾಗಿಲ್ಲ ಎಂದರು.ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಸ್ತಾವಿಕ ಮಾತನಾಡಿದರು.
ಪಾಲಿಕೆ ಕಚೇರಿಗೆ ನುಗ್ಗಿ ಮುತ್ತಿಗೆ ಹಾಕಲು ಪ್ರಯತ್ನಿಸಿದ ಸಿಪಿಐಎಂ ಪ್ರತಿಭಟನಾಕಾರರನ್ನು ಪೊಲೀಸರು ಬಲಪ್ರಯೋಗದಿಂದ ತಡೆದರು. ನಂತರ ರಸ್ತೆ ತಡೆ ಮಾಡಿದ್ದು, ಕೂಡಲೇ ಕಾರ್ಯಪ್ರವ್ರತ್ತರಾದ ಪೋಲಿಸರು ಅವರನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.