ಮಕ್ಕಳ ಭವಿಷ್ಯಕ್ಕೆ ಪೂರಕ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸೂಚನೆ

KannadaprabhaNewsNetwork |  
Published : May 29, 2025, 01:21 AM IST
28ಭವಿಷ್ಯ | Kannada Prabha

ಸಾರಾಂಶ

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದರೊಂದಿಗೆ ಮಕ್ಕಳು ಸಮಾಜದಲ್ಲಿ ಆರೋಗ್ಯಯುತ ಜೀವನ ನಡೆಸಿ, ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಅಗತ್ಯವಿರುವ ಪೂರಕ ವಾತಾವರಣ ಅಧಿಕಾರಿಗಳು ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಹೇಳಿದ್ದಾರೆಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವಿವಿಧ ಸಮಿತಿ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಭಿಕ್ಷಾಟನೆ ಮಾಡುತ್ತಿರುವ ಮಕ್ಕಳು, ಬಾಲಕಾರ್ಮಿಕ ಮಕ್ಕಳು, ಕಾಣೆಯಾದ ಮಕ್ಕಳು, ಮಾದಕವ್ಯಸನಿಯ ಮಕ್ಕಳು, ಪರಿತ್ಯಕ್ತ ಮಕ್ಕಳು, ಬಾಲ್ಯವಿವಾಹವಾದ ಮಕ್ಕಳು, ಹಿಂಸೆ ಹಾಗೂ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಶಿಕ್ಷಣದಿಂದ ವಂಚಿತರಾದ ಮಕ್ಕಳು ಕಂಡುಬಂದಲ್ಲಿ ಅಂತಹ ಮಕ್ಕಳ ರಕ್ಷಣೆಗಾಗಿ ಮಕ್ಕಳ ರಕ್ಷಣಾ ಘಟಕದ ಸಹಾಯವಾಣಿ ಸಂಖ್ಯೆ 1098/ 112 ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು.ಮಕ್ಕಳನ್ನು ದತ್ತು ಪಡೆಯಲು ಇಚ್ಛಿಸುವವರು ವೆಬ್‌ಸೈಟ್ ಮುಖಾಂತರ ಅರ್ಜಿ ಸಲ್ಲಿಸಿ ಕಾನೂನು ಬದ್ಧವಾಗಿ ದತ್ತು ಪಡೆಯಲು ಅವಕಾಶಗಳಿವೆ. ಅನಧಿಕೃತ ದತ್ತು ಮಗುವನ್ನು ಪಡೆದುಕೊಂಡಲ್ಲಿ, ದತ್ತು ಪಡೆದುಕೊಂಡಿರುವ ಪೋಷಕರು, ದತ್ತು ನೀಡಿರುವ ಪೋಷಕರು ಹಾಗೂ ದತ್ತು ಪಡೆದುಕೊಳ್ಳಲು ಸಹಕರಿಸಿದವರಿಗೆ ಕಾನೂನಿನಡಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದರು.ಶಾಲಾ-ಕಾಲೇಜುಗಳಲ್ಲಿ ಬಾಲ್ಯವಿವಾಹ ಹಾಗೂ ಪೊಕ್ಸೋ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮ ಆಯೋಜಿಸಬೇಕು. ಶಾಲೆಯಲ್ಲಿ ಪೋಷಕರ ಸಭೆಯಲ್ಲಿಯೂ ಸಹ ಈ ಕುರಿತು ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಕ್ಕಳ ರಕ್ಷಣಾ ಸಮಿತಿ, ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಹಾಗೂ ಮಕ್ಕಳ ಕಾವಲು ಸಮಿತಿಯ ಸಭೆಗಳನ್ನು ನಿಯಮಿತವಾಗಿ ಪ್ರತಿ ತ್ರೈಮಾಸಿಕದಂತೆ ಕಡ್ಡಾಯವಾಗಿ ಮಾಡಬೇಕು ಎಂದ ಅವರು, ಮಲ್ಪೆ ಬಂದರಿನಲ್ಲಿ ಮೀನು ಆಯುವ ಮಕ್ಕಳ ರಕ್ಷಣೆಗೆ ಕಾರ್ಮಿಕ ಇಲಾಖೆಯಿಂದ ಕಾಲಕಾಲಕ್ಕೆ ಕಾರ್ಯಾಚರಣೆಯನ್ನು ನಡೆಸಿ, ಮಕ್ಕಳ ರಕ್ಷಣೆಗೆ ಮುಂದಾಗಬೇಕು ಸೂಚಿಸಿದರು.ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್., ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ಮತ್ತಿತರರುಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ