ಶಾಲೆಗಳಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

KannadaprabhaNewsNetwork |  
Published : Feb 24, 2025, 12:30 AM IST
23ಡಿಡಬ್ಲೂಡಿ4,5ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಆದರ್ಶ ವಿದ್ಯಾಲಯದಲ್ಲಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಪಲಿತಾಂಶ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ತಾಲೂಕಿನ ವಿವಿಧ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ, ಎಸ್‌ಡಿಎಂಸಿ ಅಧ್ಯಕ್ಷರ, ಪಾಲಕರ ಸಭೆ.  | Kannada Prabha

ಸಾರಾಂಶ

ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಆದರ್ಶ ವಿದ್ಯಾಲಯದಲ್ಲಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸಂವಾದ ಆಯೋಜಿಸಲಾಗಿತ್ತು.

ಧಾರವಾಡ: ವಿದ್ಯಾರ್ಥಿ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಮಹತ್ವದ ಘಟ್ಟ. ಮಕ್ಕಳಲ್ಲಿ ಸಮರ್ಥವಾಗಿ ಮತ್ತು ಸಮರ್ಪಕವಾಗಿ ಎದುರಿಸುವ ಆತ್ಮವಿಶ್ವಾಸ ಮೂಡಿಸಬೇಕು. ಶಾಲೆಯಲ್ಲಿ ಮಕ್ಕಳು ಪರೀಕ್ಷೆಯ ಬಗ್ಗೆ ಗೊಂದಲ, ಭಯ ಇಲ್ಲದೇ ಪರೀಕ್ಷೆಗಳನ್ನು ಬರೆಯುವ ಪರೀಕ್ಷಾಸ್ನೇಹಿ ಪರಿಸರ ನಿರ್ಮಾಣವಾಗಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಆದರ್ಶ ವಿದ್ಯಾಲಯದಲ್ಲಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ತಾಲೂಕಿನ ವಿವಿಧ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ, ಎಸ್‌ಡಿಎಂಸಿ ಅಧ್ಯಕ್ಷರ, ಪಾಲಕರ ಸಭೆ ಮತ್ತು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸಂವಾದ ಉದ್ಘಾಟಿಸಿ ಮಾತನಾಡಿದರು.

ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿ, ಸಾಕಷ್ಟು ಅನುದಾನವನ್ನು ಮತ್ತು ವಿನೂತನ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಶಿಕ್ಷಕರಿಗೆ ವೇತನ, ಶಾಲೆಗಳಿಗೆ ಮೂಲ ಸೌಕರ್ಯಗಳನ್ನು ಪೂರೈಸುತ್ತಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಶೈಕ್ಷಣಿ ಸುಧಾರಣೆ ಹಾಗೂ ಬೋಧನಾ ಗುಣಮಟ್ಟ ಸುಧಾರಿಸುತ್ತಿಲ್ಲ. ಈ ಕುರಿತು ಶಿಕ್ಷಕರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದರು.

ಮಕ್ಕಳ ಮೂಲಭೂತ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಪ್ರಾಥಮಿಕ ಹಂತದಿಂದ ಪ್ರತಿ ಮಗು ನಿಗದಿಪಡಿಸಿದ ಶೈಕ್ಷಣಿಕ ಸಾಧನೆ ಮಾಡಬೇಕು ಮತ್ತು ಉತ್ತಮ್ಮ ರೀತಿಯಲ್ಲಿ ಓದು ಬರಹ ಕಲಿಯಬೇಕು. ಈ ಕರ್ತವ್ಯ ನಿರ್ವಹಣೆಯಲ್ಲಿ ಶಿಕ್ಷಕರು ಮತ್ತು ಪಾಲಕರು ಜಂಟಿಯಾಗಿ ಪಾತ್ರ ನಿರ್ವಹಿಸಬೇಕು. ಅಂದಾಗ ನಾವು ನಿರೀಕ್ಷಿತ ಗುರಿ ಸಾಧಿಸಲು ಸಾಧ್ಯವಾಗುತ್ತದೆ. ಮಿಶನ್ ವಿದ್ಯಾಕಾಶಿ ಯೋಜನೆಯಡಿ ಎಲ್ಲ ತರಗತಿಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಆದ್ಯತೆ ನೀಡಲಾಗಿದೆ ಎಂದರು.

ಸಭೆಯಲ್ಲಿ ವಿದ್ಯಾರ್ಥಿಗಳು ತಮ್ಮ ಆತಂಕ, ಆಕಾಂಕ್ಷೆ, ಗೊಂದಲಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ವಿವಿಧ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ತಮ್ಮ ಶಾಲೆಯ ಪ್ರಗತಿ ವರದಿಯನ್ನು ಜಿಲ್ಲಾಧಿಕಾರಗಳಿಗೆ ಸಲ್ಲಿಸಿದರು.

ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ಪಾಲಕರು ಮಿಶನ್ ವಿದ್ಯಾಕಾಶಿ ಯೋಜನೆಯಡಿ ಕೈಗೊಂಡ ಕ್ರಮಗಳಿಂದ ತಮ್ಮ ಮಕ್ಕಳಲ್ಲಿ ಉಂಟಾಗಿರುವ ಒದು ಬರಹಗಳಲ್ಲಿ ಬದಲಾವಣೆ ಮತ್ತು ಶೈಕ್ಷಣಿಕ ಸುಧಾರಣೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ದಾಸ್ತಿಕೊಪ್ಪ ಆದರ್ಶ ವಿದ್ಯಾಲಯದ ಪ್ರಾಂಶುಪಾಲ ತಿಮ್ಮಾರಡ್ಡಿ ಎನ್. ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ರುಬಿನಾ ಮುಲ್ಲಾ ಸ್ವಾಗತಿಸಿದರು. ಲೀನಾ ಮೇರಿ ಆಲೂರ ನಿರೂಪಿಸಿದರು. ಕಲಘಟಗಿ ತಹಶೀಲ್ದಾರ ವಿರೇಶ ಮುಳಗುಂದ ಮಠ ವಂದಿಸಿದರು. ಶಿಕ್ಷಣ ಇಲಾಖೆ ಅಧಿಕಾರಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ