ಬಾಲಕಾರ್ಮಿಕರ ರಕ್ಷಣಾ ಕಾಯ್ದೆ ಜಾಗೃತಿ ಮೂಡಿಸಿ

KannadaprabhaNewsNetwork |  
Published : Jun 02, 2024, 01:46 AM IST
ಜಿಲ್ಲಾ ಬಾಲಕಾರ್ಮಿಕ ಯೋಜನೆ ಕಾರ್ಯಕಾರಿ ಸಮಿತಿ ಸಭೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯಿತು | Kannada Prabha

ಸಾರಾಂಶ

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಹಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಜಿಲ್ಲೆಯಲ್ಲಿ ಬಾಲಕಾರ್ಮಿಕರ ರಕ್ಷಣೆ ಹಾಗೂ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಬಾಲಕಾರ್ಮಿಕರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು. ಆಗಾಗ ಅನೀರಿಕ್ಷಿತ ಭೇಟಿ ಮಾಡುವುದರಿಂದ ಬಾಲಕಾರ್ಮಿಕರ ರಕ್ಷಣಾ ಕಾರ್ಯ ಪರಿಣಾಮಕಾರಿಯಾಗಲಿದೆ ಎಂದರು.ಕಾಯ್ದೆ ಜಾಗೃತಿಗೆ ನಿರ್ದೇಶನ:

ಬಾಲಕಾರ್ಮಿಕ ಕಾಯ್ದೆ ಅನುಷ್ಠಾನ, ತಪಾಸಣೆ, ಮೊಕದ್ದಮೆ ದಾಖಲಿಸುವುದು, ದಂಡ ವಸೂಲಾತಿ ಜತೆಗೆ ಕಾಯ್ದೆ ಕುರಿತು ಅರಿವು ಮೂಡಿಸಲು ಗೋಡೆಬರಹಗಳನ್ನು ಬರೆಸಬೇಕು ಎಂದ ಅವರು, ಬಾಲಕಾರ್ಮಿಕರ ರಕ್ಷಣೆ ಕುರಿತು ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳ ಗೋಡೆಗಳ ಮೇಲೆ ಬರಹ ಬರೆಸಬೇಕು ಎಂದರು.ಬಾಲಕಾರ್ಮಿಕರ ರಕ್ಷಣೆ ಹಾಗೂ ಪುನರ್ವಸತಿ ಅಭಿಯಾನದ ಅಂಗವಾಗಿ ಜೂನ್ 1 ರಿಂದ 30ರವರೆಗೆ ಪ್ಯಾನ್ ಇಂಡಿಯಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-1986ರ ಕರ್ನಾಟಕ ನಿಯಮಗಳನ್ವಯ ಮಕ್ಕಳು ಬಾಲ ನಟ/ನಟಿಯಾಗಿ ನಟನಾ ಕೆಲಸ ಮಾಡಲು ಇರುವ ಕಾನೂನಾತ್ಮಕ ಅಂಶಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಹೇಳಿದರು.ಕಾರ್ಯಕಾರಿ ಸಮಿತಿಗಳ ನವೀಕರಣ:

ನಿಯಮಾನುಸಾರ ಜಿಲ್ಲಾ ಹಾಗೂ ತಾಲೂಕುಮಟ್ಟದ ಕಾರ್ಯಕಾರಿ ಸಮಿತಿಗಳನ್ನು ನವೀಕರಣಗೊಳಿಸಲು ಜಿಲ್ಲಾಧಿಕಾರಿಗಳು ಸಭೆಯಲ್ಲಿ ಅನುಮೋದನೆ ನೀಡಿದರು. ಕಳೆದ ವರ್ಷದಂತೆ ರಂಗಮಂದಿರದಲ್ಲಿ ಜೂ.12ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಹೊರಗುತ್ತಿಗೆ ನೌಕರರಿಗೆ ಸಂಬಳ ಕಡಿತ ಮಾಡಿ ನೀಡಲಾಗುತ್ತಿದೆ ಎಂದು ವ್ಯಾಪಕ ದೂರುಗಳು ಬರುತ್ತಿವೆ. ಆದ್ದರಿಂದ ಕನಿಷ್ಠ ವೇತನ ನಿಯಮಗಳಡಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಸಂಬಳವನ್ನು ಗುತ್ತಿಗೆದಾರರು ಕಡಿತಗೊಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಕೆಲ ಪ್ರಮುಖ ಸರ್ಕಾರಿ ಇಲಾಖೆಗಳಲ್ಲಿ, ಆಸ್ಪತ್ರೆಗಳಲ್ಲಿ ಹಾಗೂ ಗಾರ್ಮೆಂಟ್ ಮತ್ತಿತರ ಕಡೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವವರಿಗೆ ಕನಿಷ್ಠ ವೇತನದಲ್ಲಿಯೇ ಅಕ್ರಮವಾಗಿ ಕಡಿತ ಮಾಡಲಾಗುತ್ತಿದೆ ಎಂಬ ದೂರುಗಳಿದ್ದು, ಈ ಬಗ್ಗೆ ನಿರಂತರವಾಗಿ ಪರಿಶೀಲಿಸಬೇಕು. ಒಂದು ವೇಳೆ ಗುತ್ತಿಗೆದಾರರು ಕನಿಷ್ಠ ವೇತನ ನೀಡದಿರುವುದು ಕಂಡುಬಂದಲ್ಲಿ ಅಂತಹ ಗುತ್ತಿಗೆದಾರರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.ಬಾಲಕಾರ್ಮಿಕ ಯೋಜನಾ ನಿರ್ದೇಶಕಿ ಜ್ಯೋತಿ ಕಾಂತೆ, ಜಿಲ್ಲೆಯಲ್ಲಿ ಬಾಲಕಾರ್ಮಿಕರ ರಕ್ಷಣೆ, ಪುನರ್ವಸತಿ ಹಾಗೂ ಕಾಯ್ದೆ ಅನುಷ್ಠಾನದ ಕುರಿತು ಮಾಹಿತಿ ಒದಗಿಸಿದರು. ಜಿಲ್ಲೆಯಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಾಲಕಾರ್ಮಿಕರ ಪತ್ತೆ ಹಾಗೂ ರಕ್ಷಣೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಶೃತಿ, ಜಿಪಂ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ಮಹ್ಮದ್‌ ಬಶೀರ್ ಅನ್ಸಾರಿ, ಕಾರ್ಮಿಕ ಅಧಿಕಾರಿಗಳಾದ ತರನ್ನುಮ್, ಮಲ್ಲಿಕಾರ್ಜುನ ಜೋಗುರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

---------

31ಬಿಇಎಲ್‌5

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ