ಕೊಟ್ಪಾ ಕಾಯ್ದೆ ಕುರಿತು ಜನಜಾಗೃತಿ ಮೂಡಿಸಿ

KannadaprabhaNewsNetwork |  
Published : Jul 24, 2024, 12:17 AM IST
ಸಿಕೆಬಿ-1 ಜಿಲ್ಲಾ ಮಟ್ಟದ ಕೊಟ್ಪಾ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್ ಮಾತನಾಡಿದರು | Kannada Prabha

ಸಾರಾಂಶ

ಬಾಗೇಪಲ್ಲಿ ತಾಲ್ಲೂಕಿನ ಶಾಲೆಗಳಲ್ಲಿ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳು ಮನೆಯಲ್ಲಿ ಪೋಷಕರಿಗೆ ತಂಬಾಕು ಸೇವನೆಯ ಕೆಟ್ಟ ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಹದಿಹರೆಯದವರು ಧೂಮಪಾನ ಮತ್ತು ತಂಬಾಕು ಸೇವನೆಯ ವ್ಯಸನಕ್ಕೆ ಬಲಿಯಾಗದಂತೆ, ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಹಾಗೂ ಕೊಟ್ಪಾ ಕಾಯ್ದೆ ಉಲ್ಲಂಘನೆ ಮಾಡದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್ ಭಾಸ್ಕರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ

ಜಿಲ್ಲೆಯ ಎಲ್ಲ ಶಾಲಾ ಕಾಲೇಜು ಹಾಗೂ ವಿದ್ಯಾರ್ಥಿನಿಲಯಗಳ ಆವರಣ 100 ಮೀಟರ್ ಅಂತರದ ಅಂಗಡಿ ಮುಂಗಟ್ಟುಗಳು ಸೇರಿ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ತಂಬಾಕು ಸೇವನೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಿ, ತಂಬಾಕು ಮುಕ್ತಗೊಳಿಸುವ ಜೊತೆಗೆ ತಂಬಾಕು ಉತ್ಪನ್ನಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಅದರಲ್ಲೂ ಬಾಗೇಪಲ್ಲಿ ತಾಲ್ಲೂಕಿನ ಶಾಲೆಗಳಲ್ಲಿ ಹೆಚ್ಚು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಮಕ್ಕಳು ಮನೆಯಲ್ಲಿ ಪೋಷಕರಿಗೆ ತಂಬಾಕು ಸೇವನೆಯ ಕೆಟ್ಟ ಪರಿಣಾಮಗಳ ಬಗ್ಗೆ ಅರಿವು ಮೂಡಿಸುತ್ತಾರೆ ಎಂದು ತಿಳಿಸಿದರು.

ಅಂಗನವಾಡಿ ಕೇಂದ್ರಗಳನ್ನು ತಂಬಾಕು ಮುಕ್ತ ಎಂದು ಘೋಷಿಸಬೇಕು, ಜಾಗೃತಿ ಬ್ಯಾನರ್, ಪೋಸ್ಟರ್ ಗಳನ್ನು ಹಾಕಿಸಬೇಕು, ಜಿಲ್ಲೆಯಾದ್ಯಂತ ಜನಸಂದಣಿ ಸ್ಥಳಗಳಲ್ಲಿ, ಜಿಲ್ಲಾ ಕೇಂದ್ರದ ಅಂಬೇಡ್ಕರ್ ವೃತ್ತ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ, ಜಿಲ್ಲಾಸ್ಪತ್ರೆ, ಖಾಸಗಿ ಬಸ್ ನಿಲ್ದಾಣ, ಇಂತಹ ಸುರಕ್ಷತಾ ಸ್ಥಳಗಳಲ್ಲಿ ಎಲ್.ಇ.ಡಿ ಬೋರ್ಡ್ ಗಳನ್ನು ಹಾಕುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

ಸೂಚನಾ ಫಲಕ ಅಳವಡಿಸಿಪ್ರವಾಸಿ ತಾಣಗಳಲ್ಲಿ ಕಡ್ಡಾಯವಾಗಿ ಧೂಮಪಾನ ನಿಷೇಧದ ಕುರಿತು ನಾಮಫಲಕಗಳನ್ನು ಅಳವಡಿಸಿ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕು. ಪೌರಕಾರ್ಮಿಕರಿಗೆ ತಂಬಾಕು ಉತ್ಪನ್ನಗಳ ವ್ಯಸನದಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯ ಮಾಡಬೇಕು. ಚಿಕ್ಕ ಚಿಕ್ಕ ಹಳ್ಳಿಗಳನ್ನು ಆಯ್ಕೆ ಮಾಡಿ ಆ ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿಸಲು ಸೂಚಿಸಿದರು.ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಧೂಮಪಾನ ವಲಯ ಪ್ರದೇಶ ಮಾಡಬೇಕು ಮತ್ತು ಬ್ಯಾನರ್ ಗಳನ್ನು ಹಾಕಿಸಬೇಕು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ವಲಯ ಪ್ರದೇಶ ಮಾಡಬೇಕು, ಪರವಾನಗಿ ನೀಡಿದ ಬಾರ್ ಗಳಲ್ಲಿ ಮಾತ್ರ ತಂಬಾಕು ಮಾರಾಟ ಮಾಡಲು ಅವಕಾಶ ನೀಡಬೇಕು. ಉಲ್ಲಂಘನೆ ಮಾಡಿದ್ದಲ್ಲಿ ಕಾನೂನು ಸೂಕ್ತ ಕ್ರಮವನ್ನು ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಂಬಾಕು ಮುಕ್ತ ಗ್ರಾಮವನ್ನಾಗಿಸಿ

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್ ಮಹೇಶ್ ಕುಮಾರ್ ಮಾತನಾಡಿ, ತಂಬಾಕು ಮುಕ್ತ ಗ್ರಾಮವನ್ನಾಗಿಸಲು ತಾಲೂಕಿನ ಹೋಬಳಿ ಮತ್ತು ಗ್ರಾಮವನ್ನು ಆಯ್ಕೆ ಮಾಡಿ ತಂಬಾಕು ಸೇವನೆ ಹಾಗೂ ಮಾರಾಟವನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ರಾಷ್ಟ್ರೀಯ ತಂಬಾಕು ನಿಯಂತ್ರಣ ಈ ಕಾರ್ಯ ಪ್ರಗತಿಯಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಪ್ರಧಾನ ಕಾರ್ಯದರ್ಶಿ ಈಶ್ವರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ಧೇಶಕ ವೆಂಕಟೇಶ್ ರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕೃಷ್ಣ ಪ್ರಸಾದ್, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಜಿ.ಹರೀಶ್, ಟಿಹೆಚ್ಓ ಕೆ. ಮಂಜುಳಾ, ನಗರಸಭೆ ಪ್ರಭಾರ ಪೌರಾಯುಕ್ತ ಉಮಾಶಂಕರ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ