ರಾಣಿಬೆನ್ನೂರು: ಜನಸಂಖ್ಯಾ ಸ್ಫೋಟದ ತಿಳಿವಳಿಕೆ ಯುವಕರಲ್ಲಿ ಬರಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.ನಗರದ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೀರೇಶ ಮೊಟಗಿ, ನಗರಸಭೆ ಅಧ್ಯಕ್ಷ ಚಂಪಕ ಬಿಸಲಹಳ್ಳಿ, ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ವರಿ ಕದರಮಂಡಲಗಿ, ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ರಾಜು ಶಿರೂರ, ಶಹರ ಸಿಪಿಐ ಶಂಕರ ಜಿ.ಎಸ್. ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಪ್ರಾ. ಎಚ್.ಬಿ. ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿ.ಕೆ. ಚೌಡಣ್ಣನವರ, ನಾಗರಾಜ ಕುಡುಪಲಿ, ಶೋಭಾ ಬಸೇನಾಯ್ಕರ, ದೇವೇಂದ್ರಪ್ಪ ಡಿ.ಎಸ್., ಎಸ್.ಸಿ. ಕೋರಿ ಹಾಗೂ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಮಹಾವಿದ್ಯಾಲಯದ ಬಳಿಯಿಂದ ಕೋರ್ಟ್ ಸರ್ಕಲ್‌ವರೆಗೆ ವಿದ್ಯಾರ್ಥಿನಿಯರಿಂದ ಜಾಗೃತಿ ಜಾಥಾ ಜರುಗಿತು.
ಸಮಾಜ ಸೇವೆಯಿಂದ ವ್ಯಕ್ತಿತ್ವಕ್ಕೆ ಮೆರುಗುರಾಣಿಬೆನ್ನೂರು: ಸಮಾಜಮುಖಿ ಕಾರ್ಯಗಳು ಮನುಷ್ಯನ ವ್ಯಕ್ತಿತ್ವಕ್ಕೆ ಮೆರುಗು ನೀಡುತ್ತವೆ ಎಂದು ಸಂಸದ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ನಗರದ ಸಿದ್ಧೇಶ್ವರ ಕಲ್ಯಾಣ ಮಂಟಪದ ಸಭಾಭವನದಲ್ಲಿ ಮಂಗಳವಾರ ಎಪಿಎಂಸಿ ಮಾಜಿ ಸದಸ್ಯ ಪರಮೇಶಪ್ಪ ಗೂಳಣ್ಣನವರ ಜನ್ಮದಿನದ ಪ್ರಯುಕ್ತ ಆಟೋ ಚಾಲಕರು, ಮಾಲೀಕರಿಗೆ ಏರ್ಪಡಿಸಿದ್ದ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜನ್ಮದಿನದ ಆಚರಣೆಗೆ ದುಂದುವೆಚ್ಚ ಮಾಡುವುದಕ್ಕಿಂತ ಇಂತಹ ಕಾರ್ಯಗಳನ್ನು ಕೈಗೊಳ್ಳುವುದು ಅರ್ಥಪೂರ್ಣ. ಈ ನಿಟ್ಟಿನಲ್ಲಿ ಪರಮೇಶ ಮಾಡುತ್ತಿರುವ ಕಾರ್ಯ ಇತರರಿಗೆ ಮಾದರಿಯಾಗಿದೆ ಎಂದರು.
ಚಿಕ್ಕಮಗಳೂರು ಬಸವತತ್ವ ಪೀಠದ ಬಸವ ಮರುಳಸಿದ್ದ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಶಾಸಕ ಪ್ರಕಾಶ ಕೋಳಿವಾಡ, ಮಾಜಿ ಸಚಿವ ಬಿ.ಸಿ. ಪಾಟೀಲ, ಮಾಜಿ ಶಾಸಕ ಹಾಗೂ ಜಿಜೆಪಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕರಾದ ಅರುಣಕುಮಾರ ಪೂಜಾರ, ಶಿವರಾಜ ಸಜ್ಜನರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವೀರೇಶ ಮೋಟಗಿ, ನಗರಸಭೆ ಅಧ್ಯಕ್ಷೆ ಚಂಪಕ ಬಿಸಲಹಳ್ಳಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ, ಭರತ ಬೊಮ್ಮಾಯಿ, ಚೋಳಪ್ಪ ಕಸವಾಳ, ಗವಿಸಿದ್ದಪ್ಪ ದ್ಯಾಮಣ್ಣನವರ, ಭೋಜರಾಜ ಕರೂದಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಗೌರಮ್ಮ ಗೂಳಣ್ಣನವರ ಅಧ್ಯಕ್ಷತೆ ವಹಿಸಿದ್ದರು.ನಗರಸಭಾ ಸದಸ್ಯ ಮಲ್ಲಿಕಾರ್ಜುನ ಅಂಗಡಿ, ಜಿಪಂ ಮಾಜಿ ಸದಸ್ಯ ಶಿವಕುಮಾರ ಮುದ್ದಪ್ಪಳವರ, ಕೆ. ಶಿವಲಿಂಗಪ್ಪ, ಭಾರತಿ ಜಂಬಗಿ, ಜಟ್ಟೆಪ್ಪ ಕರೇಗೌಡ್ರ, ಎಸ್.ಎಸ್. ರಾಮಲಿಂಗಣ್ಣನವರ, ಮಂಜುನಾಥ ಕಾಟಿ, ಬಸವರಾಜ ಹುಚಗೊಂಡರ, ಕರಬಸಪ್ಪ ಮಾಕನೂರ, ಸೋಮಶೇಖರ ಗೌಡಶಿವಣ್ಣನವರ ಮತ್ತಿತರರಿದ್ದರು.