ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಪಂನೂತನ ಸಭಾಂಗಣದಲ್ಲಿ ಗುರುವಾರ ಜರುಗಿದ 2025-26ನೇ ಸಾಲಿನ ಎರಡನೇ ತ್ರೈಮಾಸಿಕ ದಿಶಾ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಮೊದಲಿಗಿಂತ ಅಧಿಕ ಪ್ರಮಾಣದಲ್ಲಿ ಈರುಳ್ಳಿ, ದಾಳಿಂಬೆ ಬೆಳೆಯಲಾಗಿದ್ದು, ರೈತರು ಮೊದಲೇ ಬೆಳೆವಿಮೆ ಮಾಡಿಸಿಕೊಂಡಿದ್ದಲ್ಲಿ, ಬೆಳೆ ಹಾನಿಯಂತಹ ಅಪಾಯ ಸಮರ್ಥವಾಗಿ ಎದುರಿಸಬಹುದಾಗಿದೆ ಎಂದು ಹೇಳಿದರು.
ಬಾಗಲಕೋಟೆ-ಕುಡಚಿ ರೈಲು ಮಾರ್ಗ ಕಾಮಗಾರಿ ಸ್ಥಿತಿಗತಿ ಪರಿಶೀಲಿಸಿ, ಕೇಂದ್ರದಲ್ಲಿ ಇದಕ್ಕೆ ಸಂಬಂಧಿಸಿದಂತೆ ಅನುದಾನ ಮತ್ತು ಸಂಪನ್ಮೂಲಕ್ಕೆ ಕೊರತೆ ಇರುವುದಿಲ್ಲ. ಆದರೆ ಭೂ ಮಾಲೀಕರ ಕುಟುಂಬ ವಾಜ್ಯ ಮತ್ತು ಇತರೆ ಕೇಸ್ ವಿಚಾರದಿಂದ ಈಗಾಗಲೇ ಯೋಜನೆ ವಿಳಂಬವಾಗಿದೆ. ಸ್ಥಳಿಯ ಸಮಸ್ಯೆಗಳನ್ನ ಬೇಗ ಪರಿಹರಿಸಿಕೊಳ್ಳುವಂತೆ ಅವರು ಜಿಲ್ಲಾಡಳಿತ ಮತ್ತು ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಲಜೀವನ್ ಮೀಶನ್ ಯೋಜನೆಯಡಿ ಪೂರ್ಣಗೊಳಿಸಿದ 608 ಕಾಮಗಾರಿಗಳಲ್ಲಿ ಯಾವುದಾದರೂ ಒಂದರ ಪೈಕಿ ದೂರು ಬಂದರೂ ಕೂಡ ತಕ್ಷಣ ಪರಿಶೀಲಿಸುವ ಕಾರ್ಯವಾಗಬೇಕು. ಪ್ರಧಾನಮಂತ್ರಿ ಆವಾಸ್ ಯೋಜನೆಗಳ ಮೊತ್ತ ಹೆಚ್ಚಳಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಎರಡನೇ ಹಂತದಲ್ಲಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ ಫಲಾನುಭವಿಗಳ ಅಂಕಿ ಸಂಖ್ಯೆಗಳ ಕುರಿತು ಮಾಹಿತಿ ನೀಡುವಂತೆ ತಿಳಿಸಿದರು.
ಸಭೆಯಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಕೆ. ಭಾಂಡಗೆ, ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶಿಧರ ಕುರೇರ್ ಇನ್ನಿತರರು ಉಪಸ್ಥಿತರಿದ್ದರು.