ರೈತರು ಪರ್ಯಾಯ ಬೆಳೆ ಬೆಳೆಯಲು ಅರಿವು ಮೂಡಿಸಿ: ಮನೋಜ್ ಕುಮಾರ್ ಮೀನಾ

KannadaprabhaNewsNetwork |  
Published : Jul 07, 2026, 02:15 AM IST
3ಕೆಎಂಎನ್ ಡಿ25 | Kannada Prabha

ಸಾರಾಂಶ

ಪೌತಿ ಖಾತೆ ಆಂದೋಲನ ಪ್ರಕ್ರಿಯೆಯನ್ನು ಯಾವುದೇ ವಿಳಂಬವಿಲ್ಲದೆ, ಸಮರ್ಪಕ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು. ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸೇವೆ ಒದಗಿಸಲು ಸಕಾಲ ಯೋಜನೆಯನ್ನು ಜಾರಿಗೆ ತಂದಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಮುಂಗಾರು ವಿಳಂಬ ಮತ್ತು ಬರ ಪರಿಸ್ಥಿತಿಯನ್ನು ನಿರ್ವಹಿಸಲು ಜಿಲ್ಲೆಯಲ್ಲಿ ರೈತರು ಪರ್ಯಾಯ ಬೆಳೆ ಬೆಳೆಯಲು ಅರಿವು ಮೂಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆ, ಮುಂಗಾರು ಪರಿಸ್ಥಿತಿ ಹಾಗೂ ಇತರೆ ಪ್ರಮುಖ ವಿಷಯಗಳ ಕುರಿತು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಪರ್ಯಾಯ ಬೆಳೆ ಬೆಳೆಯುವುದು, ಬಿತ್ತನೆ ಸಲಹೆ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ, ಬೆಳೆ ವಿಮೆ, ಪೌತಿ ಖಾತೆ ಆಂದೋಲನ ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚಿಸಿದರು.

ಅರ್ಹ ರೈತರು ಬೆಳೆ ವಿಮೆಯನ್ನು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು, ಗರಿಷ್ಠ ಪ್ರಮಾಣದ ರೈತರು ಯೋಜನೆಯ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಲು ಕೃಷಿ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಪೌತಿ ಖಾತೆ ಆಂದೋಲನ ಪ್ರಕ್ರಿಯೆಯನ್ನು ಯಾವುದೇ ವಿಳಂಬವಿಲ್ಲದೆ, ಸಮರ್ಪಕ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು. ಸಾರ್ವಜನಿಕರಿಗೆ ನಿಗದಿತ ಅವಧಿಯೊಳಗೆ ಸೇವೆ ಒದಗಿಸಲು ಸಕಾಲ ಯೋಜನೆಯನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ನಿಗದಿತ ಕಾಲಮಿತಿಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದರೆ ಅಧಿಕಾರಿಗಳು ಜವಾಬ್ದಾರರಾಗುತ್ತಾರೆ ಎಂದು ಎಚ್ಚರಿಸಿದರು.

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆರಂಭವಾಗಿದೆ. ಜುಲೈ 29ರವರೆಗೆ ನಡೆಯಲಿದೆ. ಮನೆ-ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ, ಎನುಮರೇಷನ್ ಅರ್ಜಿಗಳನ್ನು ಭರ್ತಿ ಮಾಡಿಕೊಡುವಂತೆ ತಿಳಿಸಲು ಅಗತ್ಯ ಅರಿವು ಮೂಡಿಸಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು.

ಡೀಸಿ ಡಾ.ಕುಮಾರ ಮಾತನಾಡಿ, ಮುಂಗಾರು ಮಳೆ ವೈಫಲ್ಯದಿಂದ ಜಿಲ್ಲೆಯಾದ್ಯಂತ ಸುಮಾರು ಶೇ.28 ರಷ್ಟು ಮಳೆ ಕೊರತೆ ಉಂಟಾಗಿದೆ.ಈ ಕಾರಣ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಮಳೆ ಕೊರತೆಯಾಗಿದೆ. ಅಲಸಂದೆ, ತೊಗರಿ, ಹೆಸರು ಮುಂತಾದ ಬೆಳೆಗಳ ಬಿತ್ತನೆಗೂ ಸಹಾ ನೀರಿನ ಕೊರತೆಯಾಗಿದೆ. ದ್ವಿದಳ ಧಾನ್ಯ ಮತ್ತು ಎಣ್ಣೆಕಾಳುಗಳಾದ ಮುಸುಕಿನಜೋಳ, ತೊಗರಿ, ಉದ್ದು, ಹೆಸರು, ಅಲಸಂದೆ, ಎಳ್ಳು, ಹರಳು ಮುಂತಾದ ಬೆಳೆಗಳ ನಿಗದಿತ ಬಿತ್ತನೆ ಕ್ಷೇತ್ರದ ಗುರಿಯನ್ನು ತಲುಪಲು ಸಾಧ್ಯವಾಗಿಲ್ಲ ಎಂದರು.

ಕೃಷ್ಣರಾಜಸಾಗರ (ಕೆ.ಆರ್.ಎಸ್) ಅಣೆಕಟ್ಟೆಯಲ್ಲಿ ನೀರಿನ ಮಟ್ಟ 81 ಅಡಿಗೆ ಇಳಿಕೆಯಾಗಿದೆ. ಹಿಂದಿನ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿದಿತ್ತು. ಅಣೆಕಟ್ಟೆಯಲ್ಲಿ ಸಾಕಷ್ಟು ನೀರು ಇಲ್ಲದ ಕಾರಣ ಕೃಷಿ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಈಗ ಲಭ್ಯವಿರುವ ನೀರನ್ನು ಕುಡಿಯಲು ಮಾತ್ರ ಬಳಸಲಾಗುತ್ತಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು ಕೃಷಿ ಇಲಾಖೆಯು ಪರ್ಯಾಯ ಬೆಳೆಗಳನ್ನು ಬೆಳೆಯಲು ರೈತರಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಮುಂಗಾರು ಮಳೆ ವೈಫಲ್ಯ ಹಿನ್ನೆಲೆಯಲ್ಲಿ ರೈತರಿಗೆ ಆರ್ಥಿಕ ನಷ್ಟವಾಗದಂತೆ ತಡೆಯಲು ಪರ್ಯಾಯ ಬೆಳೆಗಳನ್ನು ಬೆಳೆಯಲು ರೈತರಿಗೆ ಅರಿವು ಮೂಡಿಸಲು ಕೃಷಿ ಇಲಾಖೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ 289 ಗ್ರಾಮಗಳಿಗೆ ಎದುರುಗಬಹುದು. ಪೂರ್ವಭಾವಿಯಾಗಿ ಖಾಸಗಿ ಬೋರ್ ವೆಲ್ ಗಳ ಮೂಲಕ ನೀರು ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ. 167 ಬೋರ್ ವೆಲ್ ಗಳಲ್ಲಿ ನೀರಿನ ಇಳುವರಿ ಕಡಿಮೆ ಆಗುತ್ತಿದೆ. ಅದಕ್ಕೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬೇಸಿಗೆಯಲ್ಲಿ ನೀರಿನ ಅಭಾವ ಎದುರಿಸಬಹುದಾದ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲು ಉದ್ದೇಶಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಸಾರ್ವಜನಿಕರು ನೀರಿಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಬಹುದು. ಮತ್ತು ಪರಿಹರಿಸಿಕೊಳ್ಳಬಹುದು. ಶುದ್ಧ ಕುಡಿಯುವ ನೀರಿನ ಘಟಕಗಳನಿರ್ವಹಣೆ ಸರಿಯಾಗಿ ನಡೆಯುವಂತೆ ಮತ್ತು ನೀರು ಪೂರೈಕೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಗ್ರಾಪಂ ಪಿಡಿಒಗಳಿಗೆ ನಿರ್ದೇಶಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮುಂದುವರಿದ ‘ಸಾಮೂಹಿಕ’ SIR ಪ್ರಕ್ರಿಯೆ!
ಸಾಮಾಜಿಕ ನ್ಯಾಯ, ಸಮಾನ ಅವಕಾಶಗಳಿಂದ ಮಾತ್ರ ಸ್ವಾತಂತ್ರ್ಯಕ್ಕೆ ಅರ್ಥ: ಅರುಣ್‌ಕುಮಾರ್‌