ಕನ್ನಡಪ್ರಭ ವಾರ್ತೆ ಕೋಲರ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪಘಾತ ಪ್ರಮಾಣ ಕಡಿಮೆ ಮಾಡಲು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಕುರಿತು ಅಧಿಕಾರಿಗಳು ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು.
ರಸ್ತೆಯ ಮಧ್ಯದಲ್ಲಿರುವ ವಿದ್ಯುತ್ ಕಂಬಗಳನ್ನು ತೆರವುಗೊಳಿಸಬೇಕು. ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವಲ್ಲಿ ರಸ್ತೆ ಸುಧಾರಣೆ ಹಾಗೂ ರಸ್ತೆ ಸುರಕ್ಷಾ ನಿಯಮ ಅನುಸರಿಸುವಂತೆ ಮತ್ತು ವೈಜ್ಞಾನಿಕ ರಸ್ತೆ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆ ಕ್ರಮ ಕೈಗೊಂಡು ಅಪಘಾತ ಕಡಿಮೆಯಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ಸೂಕ್ತ ಚಿಕಿತ್ಸೆ ನೀಡಲು ಅನುಕೂಲವಾಗುವ ಸಲುವಾಗಿ ಅಂಬುಲೆನ್ಸ್ ವ್ಯವಸ್ಥೆ ಮಾಡಬೇಕು ಎಂದರು.
ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನಗಳನ್ನು ಸಾರಿಗೆ ಇಲಾಖೆ ತಪಾಸಣೆ ನಡೆಸಬೇಕು. ಸಂಚಾರ ದಟ್ಟಣೆ ಹೆಚ್ಚುವ ಸ್ಥಳದಲ್ಲಿ ಅಗತ್ಯ ಮಾಹಿತಿ ಫಲಕ ಅಳವಡಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ, ಕೆ.ಜಿ.ಎಫ್ ಪೊಲೀಸ್ ವರಿಷ್ಠಾಧಿಕಾರಿ ಶಾಂತಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ನಯಾಜ್ ಪಾಷ, ಡಿಎಚ್‌ಓ ಡಾ. ಜಗದೀಶ್ ಇದ್ದರು.