ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಿ

KannadaprabhaNewsNetwork |  
Published : Jul 24, 2024, 12:19 AM IST
 ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಸುಶೀಲಾ  ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಜರುಗಿತು. | Kannada Prabha

ಸಾರಾಂಶ

ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆಗಳನ್ನು ದುರಸ್ತಿ ಪಡಿಸಿ. ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ, ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ರಸ್ತೆಗಳನ್ನು ದುರಸ್ತಿ ಪಡಿಸಿ. ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಿ, ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳಿಂದ ಅನೇಕ ಸಾವು-ನೋವು ಉಂಟಾಗುತ್ತಿವೆ. ಅವುಗಳ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜಾಗೃತಿ ಅಭಿಯಾನಗಳನ್ನು ನಡೆಸಿ, ಅಪಘಾತ ಪ್ರಕರಣ ನಿಯಂತ್ರಕ್ಕೆ ಕ್ರಮವಹಿಸುವಂತೆ ತಿಳಿಸಿದರು.ರಸ್ತೆಗಳಲ್ಲಿ ಅನಗತ್ಯವಾಗಿ ಹಾಕಿರುವ ಹಂಪ್‌ಗಳನ್ನು ತೆರವುಗೊಳಿಸಬೇಕು. ನಗರದಲ್ಲಿನ ಮುಖ್ಯ ವೃತ್ತಗಳು ಸೇರಿದಂತೆ, ಮುಖ್ಯರಸ್ತೆ ಮಧ್ಯದಲ್ಲಿರುವ ರಸ್ತೆ ಗುಂಡಿಗಳ ದುರಸ್ತಿ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಬೇಕು. ವೇಗಮಿತಿ ತಪಾಸಣೆ ಕಾರ್ಯ ಕ್ರಮಬದ್ಧವಾಗಿ ನಡೆಸಬೇಕು ಎಂದರು.ಅಪಘಾತ ವಿಭಜಕಗಳು, ಬ್ಯಾನರ್‌ಗಳನ್ನು ನಿಯಮಾನುಸಾರ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಅವಧಿ ಪೂರ್ಣಗೊಂಡ ವಾಹನಗಳು ಸಂಚರಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅದರಲ್ಲೂ ಶಾಲೆ ವಾಹನಗಳು ಸುಸ್ಥಿತಿಯಲ್ಲಿರಬೇಕು. ಶಾಲೆ ವಾಹನದಲ್ಲಿ ಕಡ್ಡಾಯವಾಗಿ ಶಾಲೆ ಸಿಬ್ಬಂದಿ ನಿಯೋಜಿಸಬೇಕು ಎಂದರು.ನಗರಗಳಲ್ಲಿ ಬಿಡಾಡಿ ದನಗಳು ರಸ್ತೆಗಳಲ್ಲಿ ತಿರುಗಾಡುತ್ತಿದ್ದು, ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಬಿಡಾಡಿ ದನಗಳ ಕಾರಣದಿಂದ ಸಾಕಷ್ಟು ಬೈಕ್ ಸವಾರರು, ಆಟೋ, ಕಾರ್ ಚಾಲಕರು ದನಗಳಿಂದ ನಿಯಂತ್ರಣ ತಪ್ಪಿ ಅಪಘಾತವಾಗಿ ಸಾವು-ನೋವುಗಳಾಗಿವೆ. ದನಗಳು ಒಂದಕ್ಕೊಂದು ಜಗಳವಾಡುವಾಗ ಪಾದಚಾರಿಗಳಿಗೆ ಡಿಕ್ಕಿಯಾಗಿ ಗಾಯಗೊಂಡ ಪ್ರಕರಣಗಳು ಆಗುತ್ತಿವೆ. ಎಲ್ಲಾ ದನಗಳ ವಾರಸುದಾರರು ತಮ್ಮ ದನಗಳನ್ನು ರಸ್ತೆಗೆ ಬರದಂತೆ ಮನೆಯಲ್ಲಿ ಕಟ್ಟಿಹಾಬೇಕು ಹಾಗೂ ಮಾಲೀಕರು ಇಲ್ಲದ ಜಾನುವಾರುಗಳನ್ನು ಸಂಬಂಧಿಸಿದ ಅಧಿಕಾರಿಗಳು ವಶಕ್ಕೆ ಪಡೆದು ಗೋಶಾಲೆಗೆ ಸಾಗಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.ವಲಯ ಅರಣ್ಯ ಉಪ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಅಭಿಮನ್ಯು, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲಿಂದಕುಮಾರ ಎಸ್.ಎಸ್. ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ
ಬಿಜೆಪಿ ಶಾಸಕ ಬೈರತಿ ವಿರುದ್ಧ ಲುಕ್‌ ಔಟ್‌ ನೋಟಿಸ್‌ ಜಾರಿ?