ಕನ್ನಡಪ್ರಭ ವಾರ್ತೆ ಔರಾದ್
ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗಡಿ ಭಾಗದ ತಾಂಡಾಗಳಲ್ಲಿ ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯ ಕೂಲಿಕಕಾರ್ಮಿರಿಗೆ ಕೆಲಸ ದೊರೆಯುವಂತೆ ಕಾಮಗಾರಿಗಳನ್ನು ಕೈಗೊಳ್ಳಬೇಕು. ಗ್ರಾಮದಲ್ಲಿಯೇ ನಿರಂತರ ಉದ್ಯೋಗ ಲಭ್ಯವಾದರೆ ಕಾರ್ಮಿಕರ ವಲಸೆಯನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗುತ್ತದೆ ಎಂದರು.
ನಿಷ್ಕ್ರಿಯ ಜಾಬ್ ಕಾರ್ಡ್‌ಗಳನ್ನು ಪರಿಶೀಲಿಸಿ, ಅರ್ಹ ಫಲಾನುಭವಿಗಳ ಜಾಬ್ ಕಾರ್ಡ್‌ಗಳನ್ನು ಸಕ್ರಿಯವಾಗಿ ಮಾಡಿಸಬೇಕೆಂದು ಸೂಚಿಸಿದರು. ಅರ್ಹ ಕೂಲಿ ಕಾರ್ಮಿಕರಿಂದ ಉದ್ಯೋಗದ ಬೇಡಿಕೆ ಪಡೆದು, ಅವರಿಗೆ ಸಮಯಕ್ಕೆ ಸರಿಯಾಗಿ ಕೆಲಸ ಒದಗಿಸುವ ಮೂಲಕ ಯೋಜನೆಯ ಪ್ರಯೋಜನವನ್ನು ಸಮರ್ಪಕವಾಗಿ ತಲುಪಿಸಬೇಕೆಂದರು.ಜಿ.ಪಂ. ಸಹಾಯಕ ನಿರ್ದೇಶಕ (ಆಡಳಿತ) ಜಯಪ್ರಕಾಶ, ತಾ.ಪಂ ಅಧಿಕಾರಿ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಎಡಿಪಿಸಿ ದೀಪಕ ಕಡಿಮನಿ, ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಲೂಕಿನ ಎಲ್ಲ ಪಿಡಿಒ, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕ, ಎನ್ಆರ್ ಎಲ್ಎಂ ಸಿಬ್ಬಂದಿಯವರು ಹಾಜರಿದ್ದರು.