ಮಕ್ಕಳಿಗೆ ಕಾನೂನಿನ ಅರಿವು ಮೂಡಿಸಿ: ನ್ಯಾ. ಜಿನ್ನಪ್ಪ ಚೌಗಲಾ

KannadaprabhaNewsNetwork |  
Published : Oct 31, 2026, 02:30 AM IST
ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. | Kannada Prabha

ಸಾರಾಂಶ

ಮಕ್ಕಳಿಗೆ ಕಾನೂನು ಅರಿವು ಇದ್ದರೆ, ಏನು ಮಾಡಬೇಕು ಏನು ಮಾಡಬಾರದು ಎನ್ನವ ಜ್ಞಾನವಿರುತ್ತದೆ. ಹಾಗಾಗಿ ಮಕ್ಕಳಿಗೆ ಕಾನೂನು ಅರಿವು ಮೂಡಿಸಬೇಕು.

ಸುರಕ್ಷಿತ ಬಚಪನ್ ಅಭಿಯಾನ -2026ರ ಅಡಿ ಕಾನೂನು ಅರಿವು-ನೆರವು ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ನರಗುಂದ

ಮಕ್ಕಳಿಗೆ ಕಾನೂನು ಅರಿವು ಇದ್ದರೆ, ಏನು ಮಾಡಬೇಕು ಏನು ಮಾಡಬಾರದು ಎನ್ನವ ಜ್ಞಾನವಿರುತ್ತದೆ. ಹಾಗಾಗಿ ಮಕ್ಕಳಿಗೆ ಕಾನೂನು ಅರಿವು ಮೂಡಿಸಬೇಕೆಂದು ನ್ಯಾಯಾಧೀಶ ಜಿನ್ನಪ್ಪ ಚೌಗಲಾ ಹೇಳಿದರು.

ತಾಲೂಕಿನ ಬೆನಕನಕೊಪ್ಪ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುರಕ್ಷಿತ ಬಚಪನ್ ಅಭಿಯಾನ -2026ರ ಅಡಿಯಲ್ಲಿ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿ, ಬಾಲ್ಯಾವಸ್ಥೆಯನ್ನು ಕಾಪಾಡಲು ಮಕ್ಕಳ ಹಕ್ಕುಗಳು ಜಾರಿಯಲ್ಲಿದ್ದು, ಅವುಗಳ ಅರಿವು ಮಕ್ಕಳಿಗೆ ಇದ್ದಾಗ ಮಾತ್ರ ಮಕ್ಕಳ ಹಕ್ಕುಗಳ ರಕ್ಷಣೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಪೋಕ್ಸೋ ಕಾಯ್ದೆಯನ್ನು 18 ವರ್ಷದೊಳಗಿನ ಮಕ್ಕಳ ರಕ್ಷಣೆಗಾಗಿ ವಿಶೇಷವಾಗಿ ಜಾರಿಗೆ ತರಲಾಗಿದ್ದು, ಈ ಕಾಯ್ದೆಯಡಿ ಅಪರಾಧಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ಇದ್ದು, ಅದನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಮಕ್ಕಳ ಸ್ನೇಹಿ ಪೋಲೀಸ್ ಠಾಣೆಗಳು, ಮಕ್ಕಳ ಸ್ನೇಹಿ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಹೆಣ್ಣುಮಕ್ಕಳು ಯಾವುದೇ ರೀತಿಯ ದೌರ್ಜನ್ಯಗಳನ್ನು ಸಹಿಸಿಕೊಳ್ಳದೇ ಧೈರ್ಯವಾಗಿ ಎದುರಿಸಬೇಕು, ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಬಳಸಲು ಮಾರ್ಗದರ್ಶನ ನೀಡಿ ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಕಾನೂನು ಅರಿವುನ ಬಗ್ಗೆ ತಿಳಿಸಿದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಎಸ್. ಹೂಲಿ, ಮೊರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲ ಡಿ.ಬಿ. ಅಡವಿ ಮಾತನಾಡಿದರು.

ದೇಸಾಯಿ ಶಾಲೆಯ ಸಿಬ್ಬಂದಿ ಎ.ಕೆ. ಅಲ್ಲಿಬಾಯಿ, ಸೇರಿದಂತೆ ಎಲ್ಲ ಸಿಬ್ಬಂದಿ ವರ್ಗ ಹಾಗೂ ಮಕ್ಕಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

71 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪುರಸ್ಕಾರ
ವಿಷ್ಣುವರ್ಧನ್‌, ಸರೋಜಾದೇವಿ ‘ಕರ್ನಾಟಕ ರತ್ನ’ ಗೌರವ