ಕಡಿಮೆ ಮತದಾನ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಿ: ಸಿಇಒ ಡಾ. ಗೋಪಾಲಕೃಷ್ಣ

KannadaprabhaNewsNetwork | Published : Apr 5, 2024 1:00 AM

ಸಾರಾಂಶ

ಭಾರತದ ಸಂವಿಧಾನ ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಭಾರತದ ಸಂವಿಧಾನ ರಾಷ್ಟ್ರದ ನಾಗರಿಕರಿಗೆ ನೀಡಿರುವ ಅಮೂಲ್ಯವಾದ ಹಕ್ಕು ಮತದಾನವಾಗಿದೆ. ತಪ್ಪದೇ ಮತದಾನ ಮಾಡುವುದು ಪ್ರತಿಯೊಬ್ಬ ವಯಸ್ಕ ಪ್ರಜೆಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಬಿ. ಗೋಪಾಲಕೃಷ್ಣ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಗ್ರಾಮೀಣ ಭಾಗದ ಎಲ್ಲಾ ಅರ್ಹ ಮತದಾರರು ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡುವಂತೆ ಅರಿವು ಮೂಡಿಸಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಗಳಿಗೆ ಗುಣಮಟ್ಟದ ಮೂಲ ಸೌಕರ್ಯವನ್ನು ಸಕಾಲಕ್ಕೆ ಒದಗಿಸಬೇಕು. ಮತಗಟ್ಟೆ ಅಧಿಕಾರಿಗಳ ಜೊತೆ ಚರ್ಚಿಸಿ ಅವರಿಗೆ ಅಗತ್ಯವಿರುವ ವಸ್ತುಗಳನ್ನು ನಿಗದಿತ ಸಮಯಕ್ಕೆ ಪೂರೈಸಲು ಕ್ರಮವಹಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿಗಳು ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ನಿರ್ದೇಶನ ನೀಡಬೇಕು ಎಂದರು.

ಮತಗಟ್ಟೆ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ನೆರಳು, ಪ್ರಾಥಮಿಕ ಚಿಕಿತ್ಸಾ ಪೆಟ್ಟಿಗೆ ಸೇರಿದಂತೆ ಅಗತ್ಯ ಸೌಲಭ್ಯಕ್ಕಾಗಿ ಮತಗಟ್ಟೆಗೆ ಭೇಟಿ ನೀಡಿ ಪರಿಶೀಲಿಸಬೇಕು. ವಿಶ್ರಾಂತಿ ಕೊಠಡಿ ಮೀಸಲಿರಿಸಲು ಕ್ರಮ ವಹಿಸಬೇಕು. ವಿಶೇಷ ಮತಗಟ್ಟೆಗಳನ್ನು ಆಕರ್ಷಕವಾಗಿ ಸಿದ್ದಪಡಿಸಬೇಕು ಅಲ್ಲದೆ ವಿಕಲಚೇತನರು, ವಯಸ್ಸಾದವರು ಮತಗಟ್ಟೆಗೆ ಬಂದು ಮತ ಚಲಾಯಿಸಲು ವಾಹನದ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ನಗರ ಪ್ರದೇಶದಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಎಲ್ಲ ಮನೆ ಮನೆಗೆ ಮತದಾನದ ಮಹತ್ವ ಸಾರುವ ಸಂದೇಶ ತಲುಪುವಂತೆ ಕ್ರಮವಹಿಸಿ ಎಂದ ಅವರು, ಪ್ರತಿಯೊಬ್ಬರೂ ಸಿ ವಿಸಿಲ್ ಆಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ತಿಳಿಸಬೇಕು. ಚುನಾವಣಾ ಅಕ್ರಮಗಳು ಕಂಡು ಬಂದರೆ ಕೂಡಲೇ ಆಪ್ ಮೂಲಕ ದೂರು ಸಲ್ಲಿಸಬೇಕು. ಅಂತಹವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದರು.

ಸಭೆಯಲ್ಲಿ ಜಿಪಂ ಮುಖ್ಯ ಲೆಕ್ಕಾಧಿಕಾರಿ ಶಿವಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಸ್ವೀಪ್ ಸಮಿತಿ ನೋಡಲ್ ಅಧಿಕಾರಿಗಳು ಹಾಜರಿದ್ದರು.----- ಬಾಕ್ಸ್‌ ----ಮದುವೆ ಮಂಟಪದಲ್ಲಿ ಮತದಾನ ಜಾಗೃತಿಚಿಕ್ಕಮಗಳೂರು,

ಜಿಲ್ಲಾ ಪಂಚಾಯಿತಿ ಮುಂಭಾಗದಲ್ಲಿರುವ ಕನಕ ಭವನ ಕಲ್ಯಾಣ ಮಂಟಪಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಅವರು ಗುರುವಾರ ಭೇಟಿ ನೀಡಿ ವಧು ವರರಾದ ಕಾವ್ಯ ಮತ್ತು ರಾಜೇಶ್ ರವರಿಗೆ ಮದುವೆಯ ಶುಭಾಷಯ ಕೋರಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವಂತೆ ಹಾಗೂ ಮತದಾನದ ಮಹತ್ವದ ಕುರಿತು ತಿಳಿಸಿದರು.

ಇದೇ ಸಂದರ್ಭದಲ್ಲಿ ಕಲ್ಯಾಣ ಮಂಟಪದಲ್ಲಿ ಮದುವೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೂ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.ಪೋಟೋ ಫೈಲ್‌ ನೇಮ್‌ 4 ಕೆಸಿಕೆಎಂ 5ಚಿಕ್ಕಮಗಳೂರಿನ ಕನಕ ಭವನ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಮತದಾನ ಜಾಗೃತಿ ಮೂಡಿಸಲಾಯಿತು.

Share this article