ಕನ್ನಡಪ್ರಭ ವಾರ್ತೆ ರಾಮನಗರ
ನಗರದ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಏಡ್ಸ್ ಸುರಕ್ಷಾ ಅಭಿಯಾನದ (ಎಂಎಎಸ್) ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಏಡ್ಸ್ ಸುರಕ್ಷಣಾ ಅಭಿಯಾನದಡಿ ಆಗಸ್ಟ್ 12ರ ಅಂತಾರಾಷ್ಟ್ರೀಯ ಯುವ ದಿನದಂದು ರಾಜ್ಯಾದ್ಯಂತ ತೀವ್ರಗೊಳಿಸಿದ ಐಇಸಿ ಪ್ರಚಾರಾಂದೋಲನಕ್ಕೆ ಚಾಲನೆ ನೀಡಲಾಗುತ್ತಿದೆ. ಇದರ ಅಂಗವಾಗಿ ಜಿಲ್ಲೆಯ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಗ್ರಾಮ ಮಟ್ಟದಲ್ಲಿ ಹಾಗೂ ಗ್ರಾಮ ಸಭೆಗಳಲ್ಲಿ 135ಕ್ಕೂ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.ಎಚ್.ಐ.ವಿ ಅಪಾಯವಿರುವ ಪ್ರದೇಶಗಳಲ್ಲಿ ಜಾನಪದ ಕಲಾ ತಂಡಗಳಿಂದ ಕಲಾ ಪ್ರದರ್ಶನ ಏರ್ಪಡಿಸಬೇಕು. ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಮ್ಯಾರಥಾನ್ , ಬೈಕ್ ರ‍್ಯಾಲಿ, ರಕ್ತದಾನ ಶಿಬಿರಗಳ ಆಯೋಜನೆ, ಸಮಗ್ರ ಆರೋಗ್ಯ ಶಿಬಿರ ಆಯೋಜನೆ ಸೇರಿದಂತೆ ಇನ್ನಿತರೆ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದು ತಿಳಿಸಿದರು.
ಸೋಂಕಿತರಿಗೆ ಕಳಂಕ ರಹಿತ ಜೀವನ ನಡೆಸಲು ಅನುವು ಮಾಡಿಕೊಡಬೇಕು. ಆಪ್ತ ಸಮಾಲೋಚನೆ ನಡೆಸಿ, ಗೌಪ್ಯತೆ ಕಾಪಾಡುತ್ತಾ, ಸೇವೆಗಳನ್ನು ಒದಗಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಎಚ್.ಐ.ವಿ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಜಿಲ್ಲೆಯ ವೈದ್ಯರು ನಿಯಮಿತವಾಗಿ ಕಾಲೇಜು, ಹಾಸ್ಟೆಲ್, ಕೈಗಾರಿಕಾ ಪ್ರದೇಶಗಳು ಸೇರಿದಂತೆ ಇತರೆಡೆಗೆ ಭೇಟಿ ನೀಡಿ, ಆರೋಗ್ಯ ಶಿಬಿರ ಹಾಗೂ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಎಚ್.ಐ.ವಿ ಸೋಂಕಿತ ಸಂಪರ್ಕಿತರ ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ನಡೆಸಬೇಕು ಎಂದು ಚಂದ್ರಯ್ಯ ಹೇಳಿದರು.