ಪೋಕ್ಸೋ ಕಾಯಿದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ನ್ಯಾ. ಯೋಗೀಶ್

KannadaprabhaNewsNetwork |  
Published : Jan 29, 2025, 01:30 AM IST
18ಫೋಕ್ಸೋ | Kannada Prabha

ಸಾರಾಂಶ

ಜಿಲ್ಲೆಯ ಸರ್ಕಾರಿ ವೈದ್ಯಾಧಿಕಾರಿಗಳು ಮತ್ತು ಶುಶ್ರೂಷಾಧಿಕಾರಿಗಳಿಗೆ ಪೋಕ್ಸೋ ಕಾಯಿದೆ ಕುರಿತು ನಡೆದ ಕಾರ್ಯಾಗಾರ ಉದ್ಘಾಟಿಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್‌ ಪಿ. ಆರ್‌. ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಪೋಕ್ಸೋ ಕಾಯಿದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದಾಗ ಅಪ್ರಾಪ್ತ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್. ಹೇಳಿದರು.

ಅವರು ಮಂಗಳವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಸಹಯೋಗದಲ್ಲಿ ಜಿಲ್ಲೆಯ ಸರ್ಕಾರಿ ವೈದ್ಯಾಧಿಕಾರಿಗಳು ಮತ್ತು ಶುಶ್ರೂಷಾಧಿಕಾರಿಗಳಿಗೆ ಪೋಕ್ಸೋ ಕಾಯಿದೆ ಕುರಿತು ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ಸಾಬೀತಾದಲ್ಲಿ ಅಂತಹವರ ಮೇಲೆ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದರು.

ದೇಶದ ಪ್ರತಿಯೊಬ್ಬರೂ ಈ ನೆಲದ ಕಾನೂನನ್ನು ಗೌರವಿಸಬೇಕು. ನಾವು ಕಾನೂನು ಪಾಲನೆ ಮಾಡಿದರೆ ಕಾನೂನು ನಮ್ಮನ್ನು ರಕ್ಷಣೆ ಮಾಡುತ್ತದೆ. ಕಾನೂನಿನ ಬಗ್ಗೆ ಅರಿವು ಹೊಂದಿಲ್ಲದೇ ಇದ್ದಾಗ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಭಾರ) ಡಾ. ನಾಗರತ್ನ ಶಾಸ್ತ್ರೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೋಕ್ಸೋ ಕಾಯಿದೆ ಕುರಿತು ಮಾಹಿತಿ ಹೊಂದಿ, ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದಾಗ ಮಾತ್ರ ದೌಜ್ಯನ್ಯಕ್ಕೆ ಒಳಗಾದ ಅಪ್ರಾಪ್ತರಿಗೆ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗುತ್ತದೆ ಎಂದರು.

ಕೆ.ಎಂ.ಸಿ ಮಣಿಪಾಲದ ಪ್ರಸೂತಿ ತಜ್ಞೆ ಡಾ. ರಾಜೇಶ್ವರಿ, ಫೋರೆನ್ಸಿಕ್ ತಜ್ಞೆ ಡಾ. ಅಪರ್ಣ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ, ಪಿ.ಸಿ.ಪಿ.ಎನ್.ಡಿ.ಟಿ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಡಾ. ಪ್ರತಾಪ್ ಕುಮಾರ್, ಕೆ.ಎಂ.ಸಿ. ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನ್ ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಜ್ಯೋತ್ಸ್ನ ಸ್ವಾಗತಿಸಿದರು. ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು. ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್ ಕೆ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ