ಕನ್ನಡಪ್ರಭ ವಾರ್ತೆ ಬೆಂಗಳೂರು
ಮಹೇಶ್(50), ಭಾಸ್ಕರ್ ಕೃಷ್ಣ(50), ಅಭಿಷೇಕ್ ಗೌಡ(28), ಶಶಿ ಕುಮಾರ್(45) ಹಾಗೂ ಅರುಣ್(55) ಬಂಧಿತರು. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿದ್ದು, ವಂಚನೆಗೆ ಕೃತ್ಯಕ್ಕೆ ಬಳಸಿದ್ದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಜೆ.ಪಿ.ನಗರ 6ನೇ ಹಂತದ ನಿವಾಸಿ ಅಂಬುಜಾಕ್ಷಿ ನಾಗರಕಟ್ಟಿ(75) ಎಂಬುವವರು ಪುಟ್ಟೇನಹಳ್ಳಿ ಠಾಣೆಗೆ ದೂರು ನೀಡಿದ್ದರು. ಈ ಪ್ರಕರಣ ಸಿಸಿಬಿ ವರ್ಗಾವಣೆಯಾದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಏನಿದು ಪ್ರಕರಣ?:ದೂರುದಾರೆ ಅಂಬುಜಾಕ್ಷಿ ಅವರು ಜೆ.ಪಿ.ನಗರ 6ನೇ ಹಂತದಲ್ಲಿ 1350 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ ಡ್ಯೂಪ್ಲೆಕ್ಸ್ ಮನೆ ಕಟ್ಟಿಸಿಕೊಂಡು ಒಂಟಿಯಾಗಿ ನೆಲೆಸಿದ್ದಾರೆ. ಇವರಿಗೆ ಒಬ್ಬ ಮಗನಿದ್ದು, ಉದ್ಯೋಗ ನಿಮಿತ್ತ ವಿದೇಶದಲ್ಲಿ ನೆಲೆಸಿದ್ದಾರೆ. ಹೀಗಾಗಿ ಈ ಮನೆಯನ್ನು ಮಾರಾಟ ಮಾಡಿ ವಿದೇಶದಲ್ಲಿರುವ ಮಗನ ಜತೆಗೆ ನೆಲೆಸಲು ಅಂಬುಜಾಕ್ಷಿ ತೀರ್ಮಾನಿಸಿದ್ದರು. ಅದರಂತೆ ಮನೆ ಮಾರಾಟಕ್ಕಿಟ್ಟುರುವ ಬಗ್ಗೆ ಪರಿಚಿತರಿಗೆ ಹೇಳಿದ್ದಾರೆ.
ಬ್ಯಾಂಕ್ ಅಧಿಕಾರಿ ಸೋಗಲ್ಲಿ ಮನೆ ಪರಿಶೀಲನೆ:
ಬಳಿಕ ಕೆಲ ದಿನಗಳ ನಂತರ ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ, ಮನೆಯ ನಕಲಿ ದಾಖಲೆ ಸೃಷ್ಟಿಸಿ ಅಂಬುಜಾಕ್ಷಿ ಅವರ ಹೆಸರಿನಲ್ಲೇ ನಕಲಿ ಬ್ಯಾಂಕ್ ಖಾತೆ ತೆರೆದು ಬರೋಬ್ಬರಿ ₹3.85 ಕೋಟಿ ಸಾಲ ಪಡೆದಿರುವುದು ಬೆಳಕಿಗೆ ಬಂದಿದೆ. ಬಳಿಕ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ವಂಚನೆ ದೂರು ನೀಡಿದ್ದಾರೆ. ಈ ಪ್ರಕರಣ ಸಿಸಿಬಿ ವರ್ಗಾವಣೆಯಾದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನಕಲಿ ದಾಖಲೆ ಬಳಸಿ 3 ಬ್ಯಾಂಕ್‌ಗಳಲ್ಲಿ ಸಾಲ
ಬಂಧಿತ ಆರೋಪಿಗಳು ಹಲವು ವರ್ಷಗಳಿಂದ ಪರಸ್ಪರ ಪರಿಚಿತರು. ಆರೋಪಿ ಮಹೇಶ್ 2022ರಲ್ಲಿ ರಾಜಾಜಿನಗರ ಠಾಣಾ ವ್ಯಾಪ್ತಿಯಲ್ಲಿ ಒಂಟಿ ಮಹಿಳೆಯೊಬ್ಬರ ಮನೆಯ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ನಲ್ಲಿ ಅಡಮಾನವಿರಿಸಿ ₹85 ಲಕ್ಷ ಸಾಲ ಪಡೆದಿರುವುದು ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಗಳು, ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ವಂಚಿಸುವ ಪ್ರವೃತ್ತಿ ರೂಢಿಸಿಕೊಂಡಿದ್ದಾರೆ. ಈ ವಂಚನೆ ಗ್ಯಾಂಗ್‌ನಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆಯಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.