ಸ್ವಚ್ಛ, ಸುಂದರ ಪರಿಸರ ನಿರ್ಮಾಣ ನಮ್ಮ ಹೊಣೆ : ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ

KannadaprabhaNewsNetwork |  
Published : Jun 20, 2025, 12:34 AM ISTUpdated : Jun 20, 2025, 12:21 PM IST
ವಿಜಯಪುರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಸಮಾರಂಭವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ ಎ. ಉದ್ಘಾಟಿಸಿದರು | Kannada Prabha

ಸಾರಾಂಶ

 ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣದ ಹೊಣೆ ನಮ್ಮದಾಗಿದ್ದು, ಆರೋಗ್ಯಯುತ ಜೀವನಕ್ಕಾಗಿ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ ಹೇಳಿದರು.

  ವಿಜಯಪುರ :  ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣದ ಹೊಣೆ ನಮ್ಮದಾಗಿದ್ದು, ಆರೋಗ್ಯಯುತ ಜೀವನಕ್ಕಾಗಿ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹರೀಶ.ಎ ಹೇಳಿದರು.

ನಗರದ ಜಿಲ್ಲಾ ಪಂಚಾಯತಿ ಬಳಿಯ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸುವುದು ಎಂಬ ಘೋಷವಾಕ್ಯದಡಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 

ಉತ್ತಮ ಪರಿಸರ ಕಾಪಾಡಿಕೊಳ್ಳುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಬಹುದೊಡ್ಡ ಕೊಡುಗೆಯನ್ನು ನೀಡಬೇಕಾಗಿದೆ. ಪರಿಸರ ಸ್ನೇಹಿ ಅಭ್ಯಾಸ ರೂಢಿಗತಗೊಳಿಸಿಕೊಳ್ಳಿ, ಪರಿಸರ ಸಂರಕ್ಷಣೆ ಮೂಲಕ ಆರೋಗ್ಯಕರ ಹಾಗೂ ಸುಸ್ಥಿರ ಭವಿಷ್ಯವನ್ನು ಗಟ್ಟಿಗೊಳಿಸಿಕೊಳ್ಳೋಣ ಎಂದು ಹೇಳಿದರು.ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಾತನಾಡಿ, ನಮ್ಮ ಪೂರ್ವಜರು ಆರೋಗ್ಯಯುತ ಜೀವನ ನಮಗೆ ಮಾದರಿಯಾಗಿದೆ. ಅಂದಿನ ಸ್ವಚ್ಛಂದ ಪರಿಸರ ಇಂದು ನಾವು ಕಾಣುತ್ತಿಲ್ಲ, ಪ್ಲಾಸ್ಟಿಕ್ ಎನ್ನುವುದು ಬಂದು ವಸ್ತು ಇದನ್ನು ಇಂದು ನಾವೆಲ್ಲರೂ ಹೇರಳವಾಗಿ ಬಳಸುತ್ತಿರುವುದರಿಂದ ಪರಿಸರ ಸಾಕಷ್ಟು ಹಾನಿಯಾಗುತ್ತಿದೆ. 

ಪ್ಲಾಸ್ಟಿಕ್ ಬಳಕೆ ಮಾಡದೇ ಪರಿಸರ ರಕ್ಷಣೆಗೆ ಮುಂದಾಗಬೇಕು. ಪರಿಸರ ಸ್ನೇಹಿ ವಸ್ತುಗಳ ಬಳಸಲು ಆದ್ಯತೆ ನೀಡೋಣ. ಐತಿಹಾಸಿಕ ನಗರದ ಸ್ವಚ್ಛತೆಗೆ ಸಾರ್ವಜನಿಕರು ಸಹಕಾರ ನೀಡಬೇಕು. ಎಲ್ಲೆಂದರಲ್ಲಿ ಕಸ ಎಸೆಯುವುದನ್ನು ಮಾಡದೇ ಆರೋಗ್ಯಯತ ಜೀವನ ನಡೆಸಲು ಪರಿಸರ ಕಾಪಾಡಿಕೊಳ್ಳಲು ಸಹಕರಿಸಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವದ ಕುರಿತು ಅನೇಕ ಕಾರ್ಯಚಟುವಟಿಕೆಗಳನ್ನು ಆಯೋಜಿಸಿ ಅವರಲ್ಲಿ ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ತಮ್ಮ ನೆರೆಹೊರೆಯವರಿಗೆ ಈ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಹೇಳಿದರು.

ರಾಜ್ಯ ಜಲ ಬಿರಾದಾರಿ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್ ಪರಿಸರ ಮಹತ್ವದ ಕುರಿತಾಗಿ ಉಪನ್ಯಾಸ ನೀಡಿದರು. ಮಹಾನಗರ ಪಾಲಿಕೆ ಆವರಣದಿಂದ ಗಾಂಧಿ ಭವನದವರೆಗೆ ಪರಿಸರ ಜಾಥಾ ನಡೆಸಲಾಯಿತು.

 ಇದೇ ಸಂದರ್ಭದಲ್ಲಿ ಪರಿಸರದ ಮಹತ್ವ ಮತ್ತು ಸಂರಕ್ಷಣೆ ಕುರಿತು ಶಾಲಾ ಕಾಲೇಜಿನ ವಿದ್ಯಾಥಿಗಳಿಗೆ ಆಯೋಜಿಸಲಾದ ಚಿತ್ರಕಲೆ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಸಸಿ, ಬಟ್ಟೆ ಚೀಲಗಳ ವಿತರಣೆಯೊಂದಿಗೆ ಪ್ರಮಾಣ ಪತ್ರ ನೀಡಲಾಯಿತು.ಹಿರಿಯ ಸಿವಿಲ್ ನ್ಯಾಯಾದೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಜಿಲ್ಲಾ ನ್ಯಾಯವಾದಿ ಸಂಘದ ಅಧ್ಯಕ್ಷ ಡಿ.ಜಿ ಬಿರಾದಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ವಿವೇಕ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ ವಿದ್ಯಾವತಿ ಅಂಕಲಗಿ, ಪ್ರೇಮಾನಂದ ಬಿರಾದಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

PREV
Read more Articles on

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ