ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಸ್ನೇಹಿ ವಾತಾವರಣ ನಿರ್ಮಾಣ: ಬಿಇಒ

KannadaprabhaNewsNetwork |  
Published : May 27, 2025, 12:01 AM ISTUpdated : May 27, 2025, 12:02 AM IST
ಚಿತ್ರ :೨೬ಎಚ್‌ಬಿಎಚ್೧ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಶಾಲೆಯಲ್ಲಿ ನಡೆದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ ಬಿಇಒ ಮೈಲೇಶ್ ಬೇವೂರ್ ಮಾತನಾಡಿದರು. | Kannada Prabha

ಸಾರಾಂಶ

ತಾಲೂಕಿನ ತಂಬ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ತಂಬ್ರಹಳ್ಳಿಯಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಹಗರಿಬೊಮ್ಮನಹಳ್ಳಿ

ತಾಲೂಕಿನ ತಂಬ್ರಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಕಲಿಕಾ ಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟದ ಮೂಲಕ ಮಕ್ಕಳ ಸದೃಢತೆಗೆ ಪೌಷ್ಠಿಕ ಆಹಾರವನ್ನು ಶಾಲೆಯಲ್ಲಿ ನೀಡಲಾಗುತ್ತಿದೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ದಾಖಲಾತಿ ಹೆಚ್ಚಿಸಬೇಕು. ಖಾಸಗಿ ಶಾಲೆಯವರು ಅನಗತ್ಯವಾಗಿ ಅಧಿಕ ಶುಲ್ಕವನ್ನು ಪಡೆದರೆ ಅಂತಹ ಶಾಲೆಗಳ ಮಾನ್ಯತೆ ರದ್ದುಗೊಳಿಸಲಾಗುವುದು. ಸರ್ಕಾರಿ ಶಾಲೆಗಳ ಏಳಿಗೆಗೆ ಸಮುದಾಯಗಳು ಸಹಕರಿಸಬೇಕು ಎಂದರು.

ನರೇಗಾ ಯೋಜನೆಯಡಿ ನಿರ್ಮಾಣವಾದ ಶಾಲೆಯ ಮಧ್ಯಾಹ್ನದ ಬಿಸಿಯೂಟದ ಕೊಠಡಿಯನ್ನು ಶಾಸಕ ಕೆ.ನೇಮರಾಜನಾಯ್ಕ ಉದ್ಘಾಟಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸೋಣ. ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು.

ತಾಪಂ ಇಒ ಡಾ. ಪರಮೇಶ್ವರಪ್ಪ, ಎಸ್‌ಡಿಎಂಸಿ ಅಧ್ಯಕ್ಷ ರಫಿ ಮಾತನಾಡಿದರು. ಸಿಆರ್‌ಪಿ ಕನಕಪ್ಪ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕುರಿತ ಪಿಪಿಟಿ ಪ್ರದರ್ಶಿಸಿದರು. ಈ ಸಂದರ್ಭ ಕ್ಷೇತ್ರ ಸಮನ್ವಯಾಧಿಕಾರಿ ಪ್ರಭಾಕರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜಕುಮಾರನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹ್ಯಾಟಿ ಲೋಕಪ್ಪ, ಮುಖ್ಯಗುರು ಜಿ.ಕೌಶಲ್ಯ, ಮುಖಂಡರಾದ ಚಿತ್ತವಾಡ್ಗಿ ಪ್ರಕಾಶ್, ಕನ್ನಿಹಳ್ಳಿ ಚಂದ್ರಶೇಖರ, ಕೊಟ್ರೇಶ, ಸಿದ್ದರಾಜು, ಗ್ರಾಪಂ ಅಧ್ಯಕ್ಷೆ ಪೂರ್ಣೀಮ, ಸದಸ್ಯರಾದ ಸಂಡೂರು ಮೆಹಬೂಬ್, ರುದ್ರಮ್ಮ, ಪಿಡಿಒ ಕೃಷ್ಣಮೂರ್ತಿ, ಸ್ನೇಹ ಸಂಸ್ಥೆಯ ಸಂತೋಷಕುಮಾರ, ಶಿವಕುಮಾರ, ಅಂಜೀಂ ಪ್ರೇಮ್‌ಜಿ ಪೌಂಡೇಶನ್‌ನ ಸಂತೋಷ, ಕ್ಲಸ್ಟರ್‌ನ ಮುಖ್ಯಗುರುಗಳು, ಎಸ್‌ಡಿಎಂಸಿ ಸದಸ್ಯರು, ಅಡುಗೆ ಸಿಬ್ಬಂದಿ ಇತರರಿದ್ದರು. ಕಾರ್ಯಕ್ರಮವನ್ನು ಶಿಕ್ಷಕರಾದ ಇಟಿಗಿ ಪ್ರಭಾಕರ, ಪ್ರದೀಪ್ ಗೂಡ್ಲಾನೂರು, ರುದ್ರಮ್ಮ ನಿರ್ವಹಿಸಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ