ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಸಮಾವೇಶ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವ್ಯಸನ ಮುಕ್ತ ಭಾರತವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಕನಸು. ಸುಭದ್ರ ರಾಷ್ಟ್ರ ನಿರ್ಮಾಣ ಮಾಡುವ ಗುರಿ ಹೊತ್ತ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆ ಸೇವೆ ಶ್ಲಾಘನೀಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ತಾಲೂಕಿನ ಕರ್ತಿಕೆರೆ ಗ್ರಾಮದ ಅರಸು ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ತಾಲೂಕು ನವ ಜೀವನ ಸಮಿತಿ ಮತ್ತು ಶೌರ್ಯ ವಿಪತ್ತು ಘಟಕದಿಂದ ಆಯೋಜಿಸಿದ್ದ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಶ್ರೀ ಧರ್ಮಸ್ಥಳ ಟ್ರಸ್ಟ್‌ನ ಕಾರ್ಯಕ್ರಮಗಳು ಮಹಿಳೆಯರು ಸ್ವಾವಲಂಬಿ ಜೊತೆಗೆ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಂಡು ಸಮಾಜದ ಒಳಿತಿಗೆ ದುಡಿಯುತ್ತಿರುವುದು ಉತ್ತಮ ವಿಚಾರ. ಅಲ್ಲದೇ ಕುಟುಂಬಕ್ಕೆ ಮಾರಕವಾಗಿರುವ ಮದ್ಯವ್ಯಸನಿಗಳ ಬದುಕನ್ನು ಹಸನಗೊಳಿಸಲು ಶ್ರಮಿಸುತ್ತಿರುವ ಕಾರ್ಯ ಉತ್ತಮವಾಗಿದೆ ಎಂದು ತಿಳಿಸಿದರು.ಮಹಾತ್ಮ ಗಾಂಧಿಜೀ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಗಾಂಧಿಜೀ ಹಾದಿಯಲ್ಲಿ ನಡೆದು ಸಮಾಜವನ್ನು ದುಶ್ಚಟ ಮುಕ್ತವಾಗಿ ಕೊಂಡೊಯ್ಯುವಲ್ಲಿ ಶ್ರಮಿಸುತ್ತಿರುವ ವೀರೇಂದ್ರ ಹೆಗ್ಗಡೆಯವರ ಕಾರ್ಯ ಹೆಮ್ಮೆ ಪಡುವಂತಹದ್ದು ಎಂದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಟ್ರಸ್ಟ್‌ನ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಮಾತನಾಡಿ, ಧರ್ಮ ಸ್ಥಳದ ಅಣತೆ ಪ್ರತಿಯೊಬ್ಬರ ಮನೆಯಲ್ಲಿ ಬೆಳಗುವಂತಾಗಲೀ. ನಮ್ಮ ಧ್ವನಿ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಗೆ ಮುಟ್ಟಬೇಕು ಎಂದು ಹೇಳಿದರು.ಕಾರ್ಯಕ್ರಮಕ್ಕೂ ಮುನ್ನ ಗ್ರಾಪಂ ಅಧ್ಯಕ್ಷೆ ಭಾಗ್ಯ ನವಜೀವನ ಜಾಥಾಕ್ಕೆ ಚಾಲನೆ ನೀಡಿದರು. ಪಾನಮುಕ್ತರಾಗಿ ಹೊಸ ಜೀವನ ಕಟ್ಟಿಕೊಂಡ ಸದಸ್ಯರು ತಮ್ಮ ಅನಿಸಿಕೆ ಹಂಚಿಕೊಂಡವರಿಗೆ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಇದೇ ವೇಳೆ ಸಮಾವೇಶದ ಹಕ್ಕೋತ್ತಾಯಗಳನ್ನು ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯರು ಶಾಸಕರಿಗೆ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಕಾಫಿ ಬೆಳೆಗಾರ ದೇವರಾಜ್, ಸಂಪನ್ಮೂಲ ವ್ಯಕ್ತಿ ಮೋಹನ್ ರಾಜ್ ಅರಸ್, ತಾಪಂ ಮಾಜಿ ಅಧ್ಯಕ್ಷ ಕನಕರಾಜ್ ಅರಸ್, ಗ್ಯಾರಂಟಿ ಪ್ರಾಧಿಕಾರದ ಸದಸ್ಯ ನಾಗರಾಜ್ ಅರಸ್, ದಶರಥ ರಾಜ್ ಅರಸ್, ಜಿಲ್ಲಾ ಜನಜಾಗೃತಿ ಸದಸ್ಯರಾದ ಅನಿಲ್ ಆನಂದ್, ಕುಮಾರ್ ಶೆಟ್ಟಿ, ಮುಖಂಡರಾದ ರಾಮರಾಜ್ ಅರಸ್, ಆನಂದ ರಾಜ್ ಅರಸ್, ಮಲ್ಲೇಶ್ ಕೋಟೆ, ತಾಲೂಕು ಯೋಜನಾಧಿಕಾರಿ ರಮೇಶ್ ನಾಯ್ಕ್, ಮೇಲ್ವಿಚಾರಕಿ ರೂಪಾ ಉಪಸ್ಥಿತರಿದ್ದರು.
16 ಕೆಸಿಕೆಎಂ 2ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಅರಸು ಭವನದಲ್ಲಿ ಆಯೋಜಿಸಿದ್ದ ಗಾಂಧಿ ಸ್ಮೃತಿ ಮತ್ತು ಜನಜಾಗೃತಿ ಸಮಾವೇಶವನ್ನು ಶಾಸಕ ಎಚ್.ಡಿ. ತಮ್ಮಯ್ಯ ಉದ್ಘಾಟಿಸಿದರು.