ಗ್ರಾಮೀಣ ಜನರ ಆರೋಗ್ಯದ ಕುರಿತು ಜಾಗೃತಿ

KannadaprabhaNewsNetwork |  
Published : Aug 23, 2026, 02:00 AM IST
21ಎಚ್ಎಸ್ಎನ್5 :  | Kannada Prabha

ಸಾರಾಂಶ

ಗ್ರಾಮೀಣ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಮೂಲಭೂತ ಆರೋಗ್ಯ ತಪಾಸಣಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಸುಮಾರು ೮೦ ಗ್ರಾಮಸ್ಥರು ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ವಿವಿಧ ಆರೋಗ್ಯ ತಪಾಸಣಾ ಸೌಲಭ್ಯಗಳ ಪ್ರಯೋಜನ ಪಡೆದರು. ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಆಯೋಜಕರು ಹಾಗೂ ವೈದ್ಯಕೀಯ ತಂಡದ ಪ್ರಯತ್ನಗಳನ್ನು ಶ್ಲಾಘಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ದೊಡ್ಡಮತಿಘಟ್ಟ ಗ್ರಾಮದ ಬರಗೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮೀಣ ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಹಾಗೂ ಮೂಲಭೂತ ಆರೋಗ್ಯ ತಪಾಸಣಾ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಶಿಬಿರದಲ್ಲಿ ಗ್ರಾಮಸ್ಥರಿಗೆ ರಕ್ತದೊತ್ತಡ, ರಕ್ತದಲ್ಲಿನ ಸಕ್ಕರೆ ಪ್ರಮಾಣ ಪರೀಕ್ಷೆ, ಕಣ್ಣಿನ ತಪಾಸಣೆ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಲಾಯಿತು. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮಹತ್ವ ಹಾಗೂ ಆರೋಗ್ಯ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯುವ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಲಾಯಿತು. ಕಣ್ಣಿನ ತಪಾಸಣೆಯ ಮೂಲಕ ದೃಷ್ಟಿ ಸಂಬಂಧಿತ ಸಮಸ್ಯೆಗಳನ್ನು ಗುರುತಿಸಿ ಅಗತ್ಯ ಆರೋಗ್ಯ ಸಲಹೆಗಳನ್ನು ನೀಡಲಾಯಿತು.ಶಿಬಿರದ ಅಂಗವಾಗಿ ರಕ್ತದಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದ್ದು, ಸ್ವಯಂಪ್ರೇರಿತ ರಕ್ತದಾನದ ಮಹತ್ವ ಹಾಗೂ ತುರ್ತು ಸಂದರ್ಭಗಳಲ್ಲಿ ರಕ್ತದಾನದ ಮೂಲಕ ಜೀವಗಳನ್ನು ಉಳಿಸುವ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಡಾ. ಭಾರತ್ ಕುಮಾರ್, ಡಾ. ಪ್ರಣಿತ್ ಕುಮಾರ್, ಡಾ. ಜಬಿಉಲ್ಲಾ, ನಾಗೇಂದ್ರ ಹಾಗೂ ಕುಮಾರ್ ಸ್ವಾಮಿ (ಶಾಲೆಯ ಹೆಚ್ ಎಂ )ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಗ್ರಾಮಸ್ಥರಿಗೆ ಆರೋಗ್ಯ ಸಂಬಂಧಿತ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.ಸುಮಾರು ೮೦ ಗ್ರಾಮಸ್ಥರು ಆರೋಗ್ಯ ಶಿಬಿರದಲ್ಲಿ ಭಾಗವಹಿಸಿ ವಿವಿಧ ಆರೋಗ್ಯ ತಪಾಸಣಾ ಸೌಲಭ್ಯಗಳ ಪ್ರಯೋಜನ ಪಡೆದರು. ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಆಯೋಜಕರು ಹಾಗೂ ವೈದ್ಯಕೀಯ ತಂಡದ ಪ್ರಯತ್ನಗಳನ್ನು ಶ್ಲಾಘಿಸಿದರು ಈ ಕಾರ್ಯಕ್ರಮದ ಮೂಲಕ ಗ್ರಾಮೀಣ ಸಮುದಾಯದಲ್ಲಿ ನಿಯಮಿತ ಆರೋಗ್ಯ ತಪಾಸಣೆ, ರಕ್ತದೊತ್ತಡ ಮತ್ತು ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಆರೋಗ್ಯ ಹಾಗೂ ರಕ್ತದಾನದ ಮಹತ್ವದ ಕುರಿತು ಉತ್ತಮ ಅರಿವು ಮೂಡಿಸಲಾಯಿತು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ವೈದ್ಯಕೀಯ ತಂಡ, ಗ್ರಾಮ ಪಂಚಾಯಿತಿ ಸದಸ್ಯರು, ಸ್ವಯಂಸೇವಕರು ಹಾಗೂ ಗ್ರಾಮಸ್ಥರಿಗೆ ಆಯೋಜಕರು ಕೃತಜ್ಞತೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಮಿಳುನಾಡಿಗೆ 24 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಖಂಡಿಸಿ ಪಂಜಿನ ಮೆರವಣಿಗೆ
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದ ಡಿ.ದೇವರಾಜ ಅರಸು: ಡಾ.ಬಿರಾದಾರ