ಜಲ ಸಂರಕ್ಷಣೆ ಅರಿವು ಮೂಡಿಸುವುದು ಅವಶ್ಯ: ಸಂಸದ ಕ್ಯಾ. ಬ್ರಿಜೇಶ್ ಚೌಟ

KannadaprabhaNewsNetwork |  
Published : Jul 11, 2025, 11:48 PM IST
ಮಳೆನೀರು ಕೊಯ್ಲು ಯೋಜನೆ ಉದ್ಘಾಟಿಸಿದ ಸಂಸದ ಕ್ಯಾ.ಬ್ರಿಜೇಶ್‌ ಚೌಟ  | Kannada Prabha

ಸಾರಾಂಶ

ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ಸೇವಾ ಯೋಜನೆಯ ಅಂಗವಾಗಿ ಅರಿವು ಕೇಂದ್ರ, ಫಾರ್ಮ್ ಲ್ಯಾಂಡ್ ರೈನ್ ವಾಟರ್ ಹಾರ್ವೆಸ್ಟ್ ಚಿಕ್ಕಮಗಳೂರು ಇದರ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಳೆನೀರು ಕೊಯ್ಲು ಯೋಜನೆ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಳೆ ಕೊಯ್ಲಿನ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಜಿಲ್ಲೆಯ ಪ್ರತಿ ಮನೆ ಮನೆಗಳಲ್ಲೂ ಜಲ ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲು ಅಭಿಯಾನ ನಡೆಸುವ ಅಗತ್ಯವಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ಸೇವಾ ಯೋಜನೆಯ ಅಂಗವಾಗಿ ಅರಿವು ಕೇಂದ್ರ, ಫಾರ್ಮ್ ಲ್ಯಾಂಡ್ ರೈನ್ ವಾಟರ್ ಹಾರ್ವೆಸ್ಟ್ ಚಿಕ್ಕಮಗಳೂರು ಇದರ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಹಮ್ಮಿಕೊಂಡ ಮಳೆನೀರು ಕೊಯ್ಲು ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು.ಕೇಂದ್ರ ಸರ್ಕಾರದ ಸೌರ ಶಕ್ತಿ ಬಳಕೆಯ ಸೂರ್ಯ ಘರ್ ಯೋಜನೆಯ ಪ್ರಯೋಜನವನ್ನು ಜನತೆ ಪಡೆಯಬೇಕು. ಈ ‌ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕಾಗಿದೆ ಎಂದು ಅವರು ಹೇಳಿದರು.ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಅಧ್ಯಕ್ಷ ಭಾಸ್ಕರ ರೈ ಕಟ್ಟ, ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ‌ ಅಡ್ಕಸ್ಥಳ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಖಜಾಂಜಿ ಪುಷ್ಪರಾಜ್ ಬಿ.ಎನ್., ಅರಿವು ಕೇಂದ್ರದ ನಿರ್ದೇಶಕ ಡಾ.ಯು. ಪಿ.ಶಿವಾನಂದ, ಫಾರ್ಮ್ ಲ್ಯಾಂಡ್ ರೈನ್ ವಾಟರ್ ಹಾರ್ವೆಸ್ಟ್ ನಿರ್ದೇಶಕ ಮೈಕೆಲ್ ಬ್ಯಾಪ್ಟಿಸ್ಟ್, ಮನೋಜ್ ಸ್ಯಾಮ್ಯುಯೆಲ್ ಬ್ಯಾಪ್ಟಿಸ್ಟ್ , ಲಿನ್‌ಫೋರ್ಡ್ ಪಿಂಟೊ, ರೋಟರಿ ಅಸಿಸ್ಟೆಂಟ್ ಗವರ್ನರ್ ಚೆನ್ನಗಿರಿ ಗೌಡ, ಸಹಾಯಕ ಗವರ್ನರ್ ರವಿಶಂಕರ್ ರಾವ್, ಜಿಲ್ಲಾ ನಿರ್ಮಿತಿ ಕೇಂದ್ರದ ನಿರ್ದೇಶಕ ರಾಜೇಂದ್ರ ಕಲ್ಬಾವಿ, ರೋಟರಿ ಕ್ಲಬ್ ಝೋನಲ್ ಲೆಫ್ಟಿನೆಂಟ್ ರವಿ ಜಲನ್, ಗೀತಾ ರೈ ಮತ್ತಿತರರಿದ್ದರು.

ಇದೇ ಸಂದರ್ಭ ಮಂಗಳೂರು ಪ್ರೆಸ್ ಕ್ಲಬ್ ನಿವೃತ್ತ ಸಿಬ್ಬಂದಿ ಚಂಚಲಾಕ್ಷಿ ಅವರನ್ನು ರೋಟರಿ ಮಂಗಳೂರು ಸೆಂಟ್ರಲ್ ವತಿಯಿಂದ ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!
ಎಚ್‌ಎಎಲ್‌ ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ:ಸಚಿವ