ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ರಂಗಭೂಮಿಯ ಪರಿಚಯ ಮಾಡುವುದು ಹಾಗೂ ಅವರು ನಾಟಕಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸೖಜನಶೀಲತೆ ಬೆಳೆಯಲು ಸಾಧ್ಯವಾಗುವುದು ಎಂದು ಹಿರಿಯ ರಂಗಭೂಮಿ ಹಾಗೂ ಸಿನಿಮಾ ನಟ ಲಕ್ಷ್ಮಣ ಕುಮಾರ್ ಮಲ್ಲೂರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರಿನ ಅಶೋಕನಗರದ ಎಸ್.ಸಿ.ಎಸ್. ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಹತ್ತು ದಿನಗಳ ತುಳು ನಾಟಕ ಕಾರ್ಯಾಗಾರವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.ತುಳು ಅಕಾಡೆಮಿಯ ಸದಸ್ಯ ಹಾಗೂ ರಂಗ ನಿರ್ದೇಶಕ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ರಂಗಭೂಮಿಯ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕೆಗೂ ಸ್ಫೂರ್ತಿಯಾಗಲಿದೆ ಎಂದರು.
ಕನ್ನಡ ವಿಭಾಗದ ಮುಖ್ಯಸ್ಥೆ ಸುಪ್ರೀತಾ ಶೆಟ್ಟಿ ಸ್ವಾಗತಿಸಿದರು. ತುಳು ಸಂಘದ ಸಂಯೋಜಕಿ ದೀಕ್ಷಿತಾ ವಂದಿಸಿದರು. ವಿದ್ಯಾರ್ಥಿ ರಿತೇಶ್ ಪೂಜಾರಿ ನಿರೂಪಿಸಿದರು.