ಕನ್ನಡಪ್ರಭ ವಾರ್ತೆ ಮುಧೋಳ
ಕ್ರೀಡೋ ಲ್ಯಾಬ್ ಉದ್ಘಾಟಿಸಿ ಮಾತನಾಡಿದ ಪ್ರೊ.ಬಸವರಾಜ ಕೊಣ್ಣೂರ ಅವರು, ಡಾ.ತಿಮ್ಮಣ್ಣ ಅರಳಿಕಟ್ಟಿ ಅವರು ಓರ್ವ ಕನಸುಗಾರ. ಅವರು ಬೇರೆ ಬೇರೆ ಶಾಲೆಗಳಿಗೆ ಭೇಟಿ ನೀಡಿದಾಗ ಅಲ್ಲಿರುವ ಸೌಲಭ್ಯ ಮತ್ತು ಸೌಕರ್ಯಗಳನ್ನು ಕಂಡು ತಮ್ಮ ಸ್ಕೂಲ್ ನಲ್ಲಿ ಅಳವಡಿಸಿಕೊಂಡು ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ವಿಶೇಷ. ವಿನೂತನ ಮಾದರಿಯ ಕ್ರೀಡಾ ಲ್ಯಾಬ್, ಮಕ್ಕಳ ಮಾನಸಿಕ ಚಟುವಟಿಕೆಗಳ ಮೂಲಕ ಮಕ್ಕಳಿಗೆ ವಿನೂತನ ಜ್ಞಾನ ನೀಡಲಾಗುತ್ತದೆ ಎಂದು ಹೇಳಿದರು.
ಅರಳಿಕಟ್ಟಿ ಫೌಂಡೇಶನ್ ಅಧ್ಯಕ್ಷ ಡಾ.ತಿಮ್ಮಣ್ಣ ಅರಳಿಕಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನರ್ಸರಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ದೈಹಿಕ ಚಟುವಟಿಕೆಗಳ ಜೊತೆಗೆ ಮಾನಸಿಕ ಚಟುವಟಿಕೆಗಳ ಮೂಲಕ ಶಿಕ್ಷಣ ಕಲಿಯಲು ಕ್ರೀಡೋ ಲ್ಯಾಬ್ ಹೆಚ್ಚು ಸಹಕಾರಿಯಾಗಲಿದೆ. ಕೋವಿಡ್ ಸಂದರ್ಭದಲ್ಲಿ ಆರಂಭವಾದ ಈ ಸ್ಕೂಲ್ ಇಂದು 1250ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹೊಂದಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದೇವೆ. ಇದಕ್ಕೆಲ್ಲ ಪಾಲಕರ ಸಹಕಾರ ಬಹುಮುಖ್ಯವಾಗಿದೆ ಎಂದರು.ರಾಯಲ್ ಸ್ಕೂಲ್ ಕಾರ್ಯದರ್ಶಿ ವಿನಾಯಕ ತಿಮ್ಮಣ್ಣ ಅರಳಿಕಟ್ಟಿ, ಪಿಎಸ್ಐ ಅಜೀತಕುಮಾರ ಹೊಸಮನಿ, ಆಡಳಿತಾಧಿಕಾರಿ ಇಂದಿರಾ ಸಾತನೂರ, ಪ್ರಾಂಶುಪಾಲ ಚಂದ್ರಶೇಖರ ಆರ್. ನಾಗವಾಂದ ವೇದಿಕೆ ಮೇಲೆ ಉಪಸ್ಥಿತರಿದ್ದರು.