ಅಪರಾಧಕ್ಕೆ ಕಾನೂನು ಅರಿವಿನ ಕೊರತೆ ಕಾರಣ

KannadaprabhaNewsNetwork |  
Published : Sep 20, 2025, 01:01 AM IST
4445 | Kannada Prabha

ಸಾರಾಂಶ

ಕಾನೂನು ಅರಿವಿನ ಕೊರತೆಯಿಂದ ಸಮಾಜದಲ್ಲಿ ಅನೇಕ ಅಪರಾಧಗಳು ಘಟಿಸುತ್ತಿದೆ. ಎಲ್ಲರೂ ತಮ್ಮ ಹಕ್ಕು ಮತ್ತು ಕಾನೂನುಗಳ ಬಗ್ಗೆ ಅರಿವು ಹೊಂದುವುದು ಅತ್ಯವಶ್ಯವಾಗಿದೆ.

ಯಲಬುರ್ಗಾ:

ಪ್ರತಿಯೊಬ್ಬರೂ ಕಾನೂನಿನ ಸಾಮಾನ್ಯ ಜ್ಞಾನ ಹೊಂದಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಜೆ. ರಂಗಸ್ವಾಮಿ ಹೇಳಿದರು.

ಪಟ್ಟಣದ ಬಾಬು ಜಗಜೀವನರಾಮ್ ಸಮುದಾಯ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪೌಷ್ಟಿಕ ಸಪ್ತಾಹ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಹಾಗೂ ಕಾಯಂ ಜನತಾ ನ್ಯಾಯಾಲಯ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾನೂನು ಅರಿವಿನ ಕೊರತೆಯಿಂದ ಸಮಾಜದಲ್ಲಿ ಅನೇಕ ಅಪರಾಧಗಳು ಘಟಿಸುತ್ತಿದೆ. ಎಲ್ಲರೂ ತಮ್ಮ ಹಕ್ಕು ಮತ್ತು ಕಾನೂನುಗಳ ಬಗ್ಗೆ ಅರಿವು ಹೊಂದುವುದು ಅತ್ಯವಶ್ಯವಾಗಿದೆ. ಶಿಕ್ಷಣ ಪಡೆದಾಗ ಕಾನೂನಿನ ಜ್ಞಾನ ಮೂಡುತ್ತದೆ. ಕಾರಣ ಸಮಾಜದಲ್ಲಿ ಶಾಂತಿ, ಸಹಬಾಳ್ವೆಯಿಂದ ಬದುಕಲು ಸಾಧ್ಯವಾಗುತ್ತದೆ ಎಂದರು.

ಸಿಡಿಪಿಒ ಬೆಟದೇಶ ಮಾಳೆಕೊಪ್ಪ ಮಾತನಾಡಿ, ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳ ಆರೋಗ್ಯ ದೃಷ್ಟಿಯಿಂದ ಮತ್ತು ಅವರಲ್ಲಿನ ಅಪೌಷ್ಟಿಕತೆ ನಿರ್ಮೂಲನೆಗೆ ಸರ್ಕಾರಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಹಲವಾರು ಯೋಜನೆ ಜಾರಿಗೊಳಿಸಿದೆ. ಯೋಜನೆ ಅನುಷ್ಠಾನಕ್ಕೆ ತರಲು ಪ್ರಯತ್ನಿಸಲಾಗಿದೆ ಎಂದು ಹೇಳಿದರು.

ಈ ವೇಳೆ ಪಪಂ ಸದಸ್ಯೆ ಬಸಮ್ಮ ಈರಪ್ಪ ಬಣಕಾರ, ಸಿವಿಲ್ ನ್ಯಾಯಾಧೀಶ ಸಂಜುಕುಮಾರ ಪಚ್ಚೆಪೂರೆ, ವಕೀಲರಾದ ಎಂ.ಎಸ್. ನಾಯ್ಕರ, ಮಹಾಂತೇಶ ಈ.ಟಿ., ಎ.ಎಸ್. ಪಾಟೀಲ್ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5-6 ತಿಂಗಳಿಂದ ನೀರು ಪೋಲು: ಕ್ರಮಕೈಗೊಳ್ಳದ ಅಧಿಕಾರಿಗಳು
ತಮ್ಮ ಮೇಲಿನ ಆರೋಪ ಸುಳ್ಳು, ಆಧಾರ ರಹಿತ : ಮುನೀಶ್‌ ಮೌದ್ಗಿಲ್‌