ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಪಂ ಸಭಾಂಗಣದಲ್ಲಿ ಕುಡಿಯುವ ನೀರಿನ ಸಂಬಂಧ ನಡೆದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸಕ್ತ ವರ್ಷ ನಿರ್ದಿಷ್ಟ ಪ್ರಮಾಣ ಮಳೆಯಾಗಿಲ್ಲ. ಇದರಿಂದಾಗಿ ಮುಂದಿನ 6 ತಿಂಗಳು ಕ್ಲಿಷ್ಟಕರ ನೀರಿನ ಸಮಸ್ಯೆ ಎದುರಿಸಬೇಕಾಗಿದೆ. ಆದ್ದರಿಂದ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ತಹಸೀಲ್ದಾರ್, ತಾಪಂ ಇಒ ನೇತೃತ್ವದಲ್ಲಿ ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ನೀರು, ಮೇವು ಸಂಬಂಧ ಬಗ್ಗೆ ಚರ್ಚೆ ನಡೆಸಿ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಯಾವ ರೀತಿ ವಹಿಸಬೇಕು ಎಂಬುವುದರ ಬಗ್ಗೆ ಒಮ್ಮತದ ನಿರ್ಧಾರ ತೆಗೆದುಕೊಳ್ಳಬೇಕು ಎಂದರು.ಹಣಕಾಸು ಹಾಗೂ ಇತರೆ ಸಮಸ್ಯೆಗಳ ಕಂಡು ಬಂದರೇ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಗಮನಕ್ಕೆ ತಂದು ತಮ್ಮಗಳ ಸಹಕಾರವನ್ನು ಅವರಿಗೆ ನೀಡಿದರೆ ಬರ ನಿರ್ವಹಣೆಯಲ್ಲಿ ಯಶಸ್ವಿಯಾಗಲು ಸಾಧ್ಯ. ತಿಂಗಳಿಗೆ 2 ಭಾರಿ ಕುಡಿಯುವ ನೀರಿನ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ತಾಲೂಕಿನ ನೀರಿನ ಸಮಸ್ಯೆ ಬಗೆಹರಿಸಲು ಕೈಜೋಡಿಸಲಿದ್ದಾರೆ ಎಂದರು.
ಸ್ವಂತ ಮನೆ ಇಲ್ಲದೇ ನಿವೇಶನಕ್ಕಾಗಿ ಸಲ್ಲಿಸಿರುವ ಅರ್ಜಿಗಳನ್ನು ಗ್ರಾಪಂ ಅಧಿಕಾರಿಗಳು ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ತಹಸೀಲ್ದಾರ್ ಸರ್ಕಾರಿ ಜಾಗವನ್ನು ಗುರುತಿಸಿ ಕೊಟ್ಟರೇ ಬಡಾವಣೆ ಮಾಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು. ಅಧಿಕಾರಿಗಳ ಜನೋಪಯೋಗಿ ಚಿಂತನೆಯೊಂದಿಗೆ ಸಾರ್ವಜನಿಕರ ಹಿತಕ್ಕೆ ಪ್ರತಿಯೊಬ್ಬರು ತಯಾರಾಗಬೇಕು ಎಂದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಪ್ರಮೋದ್, ಜಿಲ್ಲಾ ಯೋಜನಾಧಿಕಾರಿ ಧನುಷ್, ತಹಸೀಲ್ದಾರ್ ಲೊಕೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.