ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಖ್ಯಮಂತ್ರಿಗಳು ಅಂಜುಮಾನ್ ಸಂಘಟನೆಗಳ ಬೇಡಿಕೆಯಂತೆ ಶಾದಿ ಮಹಲ್ ನಿರ್ಮಾಣಕ್ಕೆ 1 ಕೋಟಿ ರು.ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಮುಡಿಗುಂಡ ಸೇತುವೆಗೆ 15 ಕೋಟಿ ರು., ನೀರಾವರಿಗೆ ನೂರಾರು ಕೋಟಿ ರು., ಅಗರ ಮದ್ದೂರು ಕೆರೆ ನೀರು ತುಂಬಿಸುವ ಯೋಜನೆಗೆ 839 ಕೋಟಿ ರು., ಜಿಲ್ಲಾಸ್ಪತ್ರೆ ನಿರ್ಮಾಣ, ಅಗ್ನಿ ಶಾಮಕ ಠಾಣೆ, ಎಳನೀರು ಮಾರುಕಟ್ಟೆ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳಿಗೆ ಮುಖ್ಯಮಂತ್ರಿಗಳು ಇಂದು ಚಾಲನೆ ನೀಡಿದ್ದಾರೆ ಎಂದರು.ಎಲ್ಲ ಭವನಗಳಲ್ಲೂ ಗ್ರಂಥಾಲಯ, ಕೋಚಿಂಗ್ ತರಗತಿ:
ಜ್ಞಾನಾರ್ಜನೆ ಹೆಚ್ಚಳ, ಓದಿಗೆ ಪೂರಕ ವಾತಾವರಣ ನಿರ್ಮಿಸಲು ಸರ್ಕಾರ ಗಂಬೀರ ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಸಚಿವ ಪುಟ್ಟರಂಗಶೆಟ್ಟಿ ಮಾತನಾಡಿ, ಮುಖ್ಯಮಂತ್ರಿಗಳು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿರುವುದು ಸಂತಸ ತಂದಿದೆ. ಅವರಿಗೆ ದೇವರು ಮತ್ತು ಗುರುಗಳಮೇಲೆ ಅಪಾರ ಭಕ್ತಿ ಇದೆ.
ಸಚಿವರಾದ ಚಲುವರಾಯಸ್ವಾಮಿ, ಡಾ.ಅಜಯ್ ಸಿಂಗ್, ಡಾ.ಯು.ಟಿ.ಖಾದರ್, ಅಂಬೇಡ್ಕರ್ ನಿಗಮದ ಅಧ್ಯಕ್ಷ ನರೇಂದ್ರ, ಹನೂರು ಶಾಸಕ ಎಂ.ಆರ್.ಮಂಜುನಾಥ್, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್. ಮಾಜಿ ಶಾಸಕರಾದ ನರೇಂದ್ರ, ಜಿ.ಎನ್.ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ರೂಪ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಯೋಗೀಶ್, ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ಹೊಂಗನೂರು ಚಂದ್ರು, ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ತೋಟೇಶ್, ರಾಜೇಂದ್ರ, ಪ್ರಭುಪ್ರಸಾದ್, ಜಿ ಎನ್ ಲೋಕೇಶ್ ಇದ್ದರು.