ಬಿಜೆಪಿಯಿಂದ ಮೊಸಳೆ ಕಣ್ಣೀರು: ಸಚಿವೆ ಹೆಬ್ಬಾಳಕರ್‌

KannadaprabhaNewsNetwork |  
Published : Apr 22, 2024, 02:18 AM IST
ಲಕ್ಷ್ಮೀ ಹೆಬ್ಬಾಳಕರ್ | Kannada Prabha

ಸಾರಾಂಶ

ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಿದ್ದು, ಇದರಲ್ಲೂ ರಾಜಕೀಯ ಮಾಡಲು ಮುಂದಾಗಿರುವುದು ತುಂಬಾ ನಾಚಿಗೇಡಿತನದ ಸಂಗತಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ವಿಚಾರದಲ್ಲಿ ಬಿಜೆಪಿ ಮೊಸಳೆ ಕಣ್ಣೀರು ಸುರಿಸುತ್ತಿದ್ದು, ಇದರಲ್ಲೂ ರಾಜಕೀಯ ಮಾಡಲು ಮುಂದಾಗಿರುವುದು ತುಂಬಾ ನಾಚಿಗೇಡಿತನದ ಸಂಗತಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಜಾಣ ಕುರುಡರು, ಜಾಣ ಕಿವುಡರು ಕೂಡ. ಅವರು ಬೇಕಾದಾಗ ಮೊಸಳೆ ಕಣ್ಣೀರು ಸುರಿಸ್ತಾರೆ. ಬೇಡವಾದಾಗ ಕಿವುಡತನ ಇದ್ದ ಹಾಗೆ ವರ್ತಿಸುತ್ತಾರೆ. ಬಿಜೆಪಿಯವರು ಈ ಘಟನೆ ಇಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದಾರೆ. ಚುನಾವಣೆ ಇರುವುದರಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಚುನಾವಣೆ ಮುಗಿದ ಮರುಕ್ಷಣವೇ ಅವರಿಗೆ ನೇಹಾ ಯಾರು ಎಂದೇ ಗೊತ್ತಿರುವುದಿಲ್ಲ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

ನೇಹಾ ನಮ್ಮ ಸಮಾಜದ ಮಗಳು, ನಮ್ಮ ಮಗಳು ಇದ್ದ ಹಾಗೆ. ಹತ್ಯೆಯಾದ ತಕ್ಷಣವೇ ಖಂಡನೆ ಮಾಡಿದ್ದೇನೆ. ತಕ್ಷಣವೇ ನೇಹಾ ತಂದೆ - ತಾಯಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿ ಬಂದಿದ್ದೇನೆ. ಅವಳು ನಿಮ್ಮ ಮಗಳಷ್ಟೇ ಅಲ್ಲ, ನಮ್ಮ ಸಮಾಜದ ಮಗಳು. ಜವಾಬ್ದಾರಿ ಸ್ಥಾನದಲ್ಲಿ ಇರುವುದರಿಂದ, ಸಚಿವೆ ಆಗಿ ಸರ್ಕಾರದ ಕಡೆಯಿಂದ ಹೋಗಿ ಸಾಂತ್ವನ ಹೇಳಿ ಅತ್ಯಂತ ಕಠಿಣ ಶಬ್ಧಗಳಿಂದ ಖಂಡಿಸಿದ್ದೇನೆ ಎಂದರು.

ಬಿಜೆಪಿಯವರು ಇದರಲ್ಲೂ ಕೂಡ ರಾಜಕೀಯ ಮಾಡುವ ಪರಿಸ್ಥಿತಿ ಬಂದಿದೆ ಎಂದರೆ, ತುಂಬಾ ನಾಚಿಕೆಗೇಡು. ದೇಶದಲ್ಲಿ ಇಂತಹ ಪ್ರಕರಣಗಳು ಎಷ್ಟೆಲ್ಲ ಆಗಿವೆ. ಈ ಬಗ್ಗೆ ಅವರ ನಿಲುವೇನು? ಎನ್ನುವುದನ್ನು ಸ್ಪಷ್ಟಪಡಿಸಬೇಕು. ನಮ್ಮ ಮಗಳಿಗೆ ಇಂತಹ ಅನ್ಯಾಯ ಆಗಬಾರದಿತ್ತು, ಆಗಿದೆ. ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಕಠಿಣ ಶಿಕ್ಷೆ ಕೊಡಿಸುತ್ತೇವೆ. ಅದರಲ್ಲಿ ಎರಡು ಮಾತಿಲ್ಲ. ಆದರೆ, ಬಿಜೆಪಿಯವರು ಬೇಕಾದಾಗ ಮಾತ್ರ ಖಂಡನೆ ಮಾಡೋದಾ..!? ಎಂದು ಪ್ರಶ್ನಿಸಿದ ಸಚಿವರು, ಇದಕ್ಕೆಲ್ಲ ಜನರೇ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ