- ಪಪ್ಪಾಯಿ, ಅಡಕೆ, ಬಾಳೆ, ತರಕಾರಿ ಮತ್ತಿತರ ಬೆಳೆಗಳು ಹಾನಿ, ಲಕ್ಷಾಂತರ ರು. ನಷ್ಟ
ಕನ್ನಡಪ್ರಭ ವಾರ್ತೆ ದಾವಣಗೆರೆ
ಭಾನುವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಅಡಕೆ, ಬಾಳೆ, ತರಕಾರಿ ಸೇರಿದಂತೆ ಅನೇಕ ಬೆಳೆಗಳು ನೆಲಕ್ಕುರುಳಿವೆ. ಇದರಿಂದ ರೈತರಿಗೆ ಲಕ್ಷಾಂತರ ನಷ್ಟ ಸಂಭವಿಸಿದೆ. ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ತಾಲೂಕಿನ ಅಣಜಿ, ಕಿತ್ತೂರು, ಹೆಮ್ಮನಬೇತೂರು, ಚಿಕ್ಕವ್ವನಾಗತಿಹಳ್ಳಿ, ಕುರುಡಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಭಾನುವಾರ ರಾತ್ರಿ ಭಾರೀ ಮಳೆಯಾಗಿದೆ. ಪರಿಣಾಮ ಪಪ್ಪಾಯಿ, ಬಾಳೆ, ಅಡಕೆ ಹಾಗೂ ತರಕಾರಿ ಸೇರಿದಂತೆ ಅನೇಕ ಬೆಳೆಗಳು ನೆಲಕ್ಕಪ್ಪಳಿಸಿವೆ.
ಸುದ್ದಿ ತಿಳಿದು ಶಾಸಕ ಕೆ.ಎಸ್.ಬಸವಂತಪ್ಪ ಅವರು ಅಣಜಿ, ಕಿತ್ತೂರು, ಹೆಮ್ಮನಬೇತೂರು, ಚಿಕ್ಕವ್ವನಾಗತಿಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ರೇಷ್ಮಾ ಫರ್ವೀನ್, ಕಂದಾಯ ಇಲಾಖೆ ಅಧಿಕಾರಿಗಳ ನಿಯೋಗದೊಂದಿಗೆ ಶಾಸಕರು ಭೇಟಿ ನೀಡಿ, ಮಳೆ ಹಾನಿಗಳನ್ನು ಪರಿಶೀಲನೆ ನಡೆಸಿದರು.
ಈ ಸಂದರ್ಭ ಕಂದಾಯ ಅಧಿಕಾರಿ ಚಂದ್ರಪ್ಪ, ಅಮಿತ್, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್.ಕೆ.ಚಂದ್ರಣ್ಣ, ತಾಪಂ ಮಾಜಿ ಸದಸ್ಯ ಶಂಬಣ್ಣ, ಪ್ರಕಾಶ್, ರೇವಣಸಿದ್ದಯ್ಯ ಹಾಗೂ ಗ್ರಾಮಸ್ಥರು ಹಾಜರಿದ್ದರು.
-21ಕೆಡಿವಿಜಿ40: