ಕನ್ನಡಪ್ರಭ ವಾರ್ತೆ ಹುಣಸಗಿ
ವೃದ್ಧೆಯನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ತಹಸೀಲ್ದಾರ್ ಎಂ.ಬಸವರಾಜ ಬೇಟಿ ನೀಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಸರಕಾರದಿಂದ ಬರುವ ಪರಿಹಾರವನ್ನು ನೀಡುವುದಾಗಿ ಭರವಸೆ ನೀಡಿದರು.
ಶಾಸಕ ರಾಜಾ ವೇಣುಗೋಪಾಲ ಭೇಟಿ : ತಾಲೂಕಿನ ಮದಲಿಂಗನಾಳ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಯುವಕನೊಬ್ಬನ ಕೊಲೆಯಾದ ಕುಟುಂಬಸ್ಥರಿಗೆ ಬೇಟಿಯಾಗಿ ಸಾಂತ್ವನ ಹೇಳಿ ಸರ್ಕಾರದಿಂದ ಬರುವ ಪರಿಹಾರವನ್ನು ಒದಗಿಸಲಾಗುತ್ತದೆ ಎಂದು ಧೈರ್ಯ ತುಂಬಿದರು.ಹಾಗೂ ಇದೇ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಕುಟುಂಬಕ್ಕೆ ಈಗಾಗಲೇ ಸರ್ಕಾರದಿಂದ ಪರಿಹಾರದ ಚೆಕ್ ವಿತರಿಸಲಾಗಿದೆ ಎಂದು ಹೇಳಿದರು.
ನಂತರ ತಾಲೂಕಿನಾದ್ಯಾಂತ ಸತತ ಮಳೆ ಸುರಿಯುತ್ತಿರುವುದರಿಂದ ನಾರಾಯಣಪುರ ಸೇರಿದಂತೆ ಇನ್ನಿತರ ಗ್ರಾಮಗಳ ಜಮೀನುಗಳಿಗೆ ಅಧಿಕಾರಿಗಳೊಂದಿಗೆ ಬೇಟಿ ನೀಡಿ ಬೆಳೆಗಳ ಹಾನಿಯನ್ನು ಪರಿಶೀಲನೆ ನಡೆಸಿದರು. ಹಾನಿಯಾದ ಎಲ್ಲಾ ರೈತರಿಗ ಸರ್ಕಾರದ ನಿಯಮಾನುಸಾರ ಪರಿಹಾರ ಒದಗಿಸಲು ತಹಸೀಲ್ದಾರ್ ಅವರಿಗೆ ಸೂಚಿಸಿದರು.