ಕನ್ನಡಪ್ರಭ ವಾರ್ತೆ, ಚಿತ್ರದುರ್ಗ
ಮುಸುಕಿನ ಜೋಳ (ನೀರಾವರಿ) (ಮಳೆಯಾಶ್ರಿತ), ಜೋಳ (ನೀರಾವರಿ) (ಮಳೆಯಾಶ್ರಿತ), ಸಜ್ಜೆ (ಮಳೆಯಾಶ್ರಿತ), ಸಾವೆ (ಮಳೆಯಾಶ್ರಿತ), ತೊಗರಿ (ಮಳೆಯಾಶ್ರಿತ), ಹುರುಳಿ (ಮಳೆಯಾಶ್ರಿತ), ಸೂರ್ಯಕಾಂತಿ (ನೀರಾವರಿ) (ಮಳೆಯಾಶ್ರಿತ), ಎಳ್ಳು (ಮಳೆಯಾಶ್ರಿತ), ಶೇಂಗಾ (ನೀರಾವರಿ) (ಮಳೆಯಾಶ್ರಿತ), ಹತ್ತಿ (ನೀರಾವರಿ)(ಮಳೆಯಾಶ್ರಿತ), ಟೊಮ್ಯಾಟೋ, ಈರುಳ್ಳಿ (ಮಳೆಯಾಶ್ರಿತ), ಕೆಂಪು ಮೆಣಸಿನಕಾಯಿ (ಮಳೆಯಾಶ್ರಿತ) ಬೆಳೆಗಳಿಗೆ ವಿಮೆ ನೊಂದಣಿಗೆ 2024ರ ಜುಲೈ 31 ಕೊನೆಯ ದಿನವಾಗಿದೆ.
ಭತ್ತ (ನೀರಾವರಿ) ರಾಗಿ(ನೀರಾವರಿ) (ಮಳೆಯಾಶ್ರಿತ), ನವಣೆ (ಮಳೆಯಾಶ್ರಿತ) ಬೆಳೆಗಳ ವಿಮಾ ನೊಂದಣಿಗೆ 2024ರ ಆಗಸ್ಟ್ 16 ಕೊನೆಯ ದಿನವಾಗಿದೆ. ಈ ಬೆಳೆಗಳಿಗೆ ವಿಮೆ ಮಾಡಿಸಲು ಸಂಬಂಧಪಟ್ಟ ಕೃಷಿ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಗೆ ಒಳಪಡಿಸಲಾಗುವುದು. ಬೆಳೆ ಸಾಲ ಪಡೆದ ರೈತರು ಯೋಜನೆಯಲ್ಲಿ ಭಾಗವಹಿಸಲು ಇಚ್ಛೆ ಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.
ಚಿತ್ರದುರ್ಗ ಜಿಲ್ಲೆಗೆ Agriculture Insurance Company of India Limited ಅನುಷ್ಠಾನ ಸಂಸ್ಥೆಯಾಗಿರುತ್ತದೆ. ನೋಂದಣಿಗಾಗಿ ಕಡ್ಡಾಯವಾಗಿ FRUITS ID (FID) ಹೊಂದಿರಬೇಕು.ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಬೇಕು. ಅಂತಿಮ ಸಮಯದಲ್ಲಿ ಜನದಟ್ಟಣೆಯಿಂದಾಗಿ ನೋಂದಣಿಯಲ್ಲಿ ತಪ್ಪುಗಳು ಸಂಭವಿಸಿ, ವಿಮೆ ಪರಿಹಾರ ಬಾರದಿರುವ ಸಂಭವವಿರುತ್ತದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.