30 ದಿನಗಳ ಅವಧಿಯಲ್ಲಿ 2.36 ಕೋಟಿ ರು. ಸಂಗ್ರಹ

KannadaprabhaNewsNetwork |  
Published : Jul 21, 2025, 01:30 AM IST
30 ದಿನಗಳ ಅವಧಿಯಲ್ಲಿ 2.36ಕೋಟಿ ರು. ಸಂಗ್ರಹ | Kannada Prabha

ಸಾರಾಂಶ

ತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರು. ಸಂಗ್ರಹವಾಗಿದೆ

ಕನ್ನಡಪ್ರಭ ವಾರ್ತೆ ಹನೂರುತಾಲೂಕಿನ ಶ್ರೀ ಮಲೆಮಹದೇಶ್ವರ ಬೆಟ್ಟದಲ್ಲಿ ಇತ್ತೀಚೆಗೆ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರು. ಸಂಗ್ರಹವಾಗಿದೆ.ಈ ಕುರಿತು ಮಾಹಿತಿ ನೀಡಿದ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು, ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 7.ರವರೆಗೆ ಗಂಟೆಯವರೆಗೂ ಜರುಗಿತು. 30 ದಿನಗಳ ಅವಧಿಯಲ್ಲಿ 2,36,73,185 ರೂಪಾಯಿ ಹುಂಡಿ ಸಂಗ್ರಹವಾಗಿದೆ.ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು, ಶ್ರೀ ಕ್ಷೇತ್ರ ಮಾದಪ್ಪನ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಅಮಾವಾಸ್ಯೆ ಹಾಗೂ ವೀಕೆಂಡ್ ರಜಾದಿನಗಳಲ್ಲೂ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳು ಹಾಗೂ ನಿಷೇಧಿತ 2,000 ಮುಖಬೆಲೆಯ 14 ನೋಟುಗಳನ್ನು ಭಕ್ತರು ಹುಂಡಿಗೆ ಹಾಕಿದ್ದಾರೆ. ಹುಂಡಿಗಳ ಎಣಿಕೆಯಲ್ಲಿ 70 ಗ್ರಾಂ ಚಿನ್ನ, 1ಕೆಜಿ 712 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರುಗಳಾದ ಮರಿಸ್ವಾಮಿ ಕಾಗಲವಾಡಿ, ಭಾಗ್ಯಮ್ಮ, , ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರ ಮಹದೇವು.ಸಿ, ಉಪ ಕಾರ್ಯದರ್ಶಿ ಶ್ರೀ ಚಂದ್ರಶೇಖರ.ಜಿ.ಎಲ್‌, ಲೆಕ್ಕಧೀಕ್ಷಕ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಚೇರಿ.ಶ್ವೇತ, ಪ್ರಾಧಿಕಾರದ ಸಿಬ್ಬಂದಿಗಳು, ಹಾಜರಿದ್ದರು...

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?