ಪುರಂದರ ದಾಸರ ಮಂಟಪ, ವಿಷ್ಣು ಮಂಟಪ, ರಾಜರ ತುಲಾಭಾರ ಸೇರಿದಂತೆ ವಿವಿಧ ಸ್ಮಾರಕಗಳನ್ನು ಪ್ರವಾಸಿಗರು ವೀಕ್ಷಿಸಿದರು.
ಹೊಸಪೇಟೆ: ವಿಶ್ವಪರಂಪರೆ ತಾಣ ಹಂಪಿಯತ್ತ ಪ್ರವಾಸಿಗರ ದಂಡು ಹರಿದು ಬರುತ್ತಿದ್ದು, ವೀಕೆಂಡ್ ಹಿನ್ನೆಲೆಯಲ್ಲಿ ಭಾನುವಾರ ಎಂಟು ಸಾವಿರಕ್ಕೂ ಅಧಿಕ ಪ್ರವಾಸಿಗರು ಆಗಮಿಸಿ ಹಂಪಿ ಸ್ಮಾರಕಗಳನ್ನು ವೀಕ್ಷಿಸಿದರು.
ಹಂಪಿಯ ಶ್ರೀ ವಿರೂಪಾಕ್ಷೇಶ್ವರ ದೇವಾಲಯ, ರಥಬೀದಿಯ ಸಾಲು ಮಂಟಪಗಳು, ಎದುರು ಬಸವಣ್ಣ ಮಂಟಪ, ಕೋದಂಡ ರಾಮದೇವಾಲಯ, ಅಚ್ಯುತರಾಯ ದೇವಾಲಯ, ಸೀತೆ ಸೆರಗು, ಸುಗ್ರೀವ ಗುಹೆ, ಕಡಲೆ ಕಾಳು ಗಣಪತಿ ಮಂಟಪ, ಸಾಸಿವೆ ಕಾಳು ಗಣಪತಿ ಮಂಟಪ, ಶ್ರೀಕೃಷ್ಣ ದೇವಾಲಯ, ಕೃಷ್ಣ ಬಜಾರ್, ಬಡವಿಲಿಂಗ, ಉಗ್ರ ನರಸಿಂಹ, ಉದ್ಧಾನ ವೀರಭದ್ರೇಶ್ವರ ದೇಗುಲ ಸೇರಿದಂತೆ ವಿವಿಧ ಸ್ಮಾರಕಗಳನ್ನು ವೀಕ್ಷಿಸಿದರು.
ಹಂಪಿಯ ರಾಣಿಸ್ನಾನ ಗೃಹ, ಕಮಲ ಮಹಲ್, ಗಜಶಾಲೆ, ಹಜಾರ ರಾಮ ದೇವಾಲಯ, ಮಹಾನವಮಿ ದಿಬ್ಬ, ಕಲ್ಲಿನತೇರು, ವಿಜಯ ವಿಠ್ಠಲ ದೇವಾಲಯ, ಪುರಂದರ ದಾಸರ ಮಂಟಪ, ವಿಷ್ಣು ಮಂಟಪ, ರಾಜರ ತುಲಾಭಾರ ಸೇರಿದಂತೆ ವಿವಿಧ ಸ್ಮಾರಕಗಳನ್ನು ಪ್ರವಾಸಿಗರು ವೀಕ್ಷಿಸಿದರು.
ಪ್ರವಾಸಿಗರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಿರುವುದರಿಂದ ಈ ಭಾಗದಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಚೇತರಿಕೆ ಕಂಡಿದೆ. ಪ್ರತ್ಯಕ್ಷ ಹಾಗೂ ಪರೋಕ್ಷ ಉದ್ಯೋಗ ಕೂಡ ಸೃಷ್ಟಿಯಾಗುತ್ತಿದೆ.
ಹಂಪಿಯ ಸ್ಮಾರಕಗಳನ್ನು ವೀಕ್ಷಣೆ ಮಾಡಲು ಆಗಮಿಸಿದ್ದ ಪ್ರವಾಸಿಗರ ದಂಡು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.