ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕಳೆದ 3-4 ದಿನಗಳಿಂದ ನಡೆಯುತ್ತಿರುವ ನಾಟಕವನ್ನು ಸಾವರ್ಜನಿಕರು ನಂಬು ವುದಿಲ್ಲ. ವಿಧಾನಪರಿಷತ್ ಸದಸ್ಯರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ನಡವಳಿಕೆ ಖಂಡನೀಯ. ಇದಕ್ಕೆ ಜನರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆಗೆ ಶಾಸಕ ತಮ್ಮಯ್ಯ ಭೇಟಿ ನೀಡಿದ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಸಿ.ಟಿ ರವಿ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆಗೆ ಮುಂದಾಗಿರುವುದು ಎಂದು ಆರೋಪಿಸಿದರು.ಗವನಹಳ್ಳಿ ವಾರ್ಡ್‌ನ ನಗರಸಭೆ ಸದಸ್ಯ ಪರಮೇಶ್ ರಾಜ್ ಅರಸ್ ಮತ್ತು ತಂಡದವರು ಗೋ-ಬ್ಯಾಕ್ ರವಿ ಎಂದು ಘೋಷಣೆ ಕೂಗಿರುವುದು ಅಕ್ಷಮ್ಯ ಅಪರಾಧ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಜನತೆ ಶಾಂತಿಪ್ರಿಯರಾಗಿದ್ದು ಮುಂದೆ ಇಂತಹ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು. ಕಾಂಗ್ರೆಸ್ ಕುತಂತ್ರಕ್ಕೆ ಬೆಂಬಲವಾಗಿ ದೂರು ದಾಖಲಿಸಿದರೆ ಮುಂದೆ ಬಿಜೆಪಿ ಉಗ್ರ ಹೋರಾಟ ರೂಪಿಸಲಿದೆ ಎಂದು ಎಚ್ಚರಿಸಿದರು.ನಗರ ಮಂಡಲ ಅಧ್ಯಕ್ಷ ಕೆ.ಎಸ್ ಪುಷ್ವರಾಜ್ ಮಾತನಾಡಿ, ಕಳೆದ 20 ವರ್ಷದಿಂದ ಕ್ಷೇತ್ರದ ಶಾಸಕರಾಗಿದ್ದ ಸಿ.ಟಿ.ರವಿ ಕಾಮಗಾರಿ ವೀಕ್ಷಣೆಗೆ ತೆರಳಿದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿ ಪಡಿಸಿ ಗೂಂಡಾ ವರ್ತನೆ ತೋರುತ್ತಾರೆ. ಇನ್ನೂ ಕಾಂಗ್ರೆಸ್ ಮುಖಂಡರು ಸುಳ್ಳು ಆರೋಪ ಮಾಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
---ಬಾಕ್ಸ್---
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂದಿಸಿದಂತೆ ಸುಪ್ರೀಂ ಕೋರ್ಟ್ ತೆಗೆದುಕೊಳ್ಳುವ ಯಾವುದೇ ತೀರ್ಮಾನ ಮತ್ತು ಆದೇಶವನ್ನು ಜಿಲ್ಲಾ ಬಿಜೆಪಿ ಸ್ವಾಗತ್ತಿಸುತ್ತದೆ ಎಂದು ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಹೇಳಿದರು.