ಕನ್ನಡಪ್ರಭ ವಾರ್ತೆ ಮಂಗಳೂರು
ನಗರದ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025ರ ಪ್ರಯುಕ್ತ ‘ಜ್ಞಾನ ಸಂಗಮ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಂಥಗಳನ್ನು ಓದಿ ವಿಭಿನ್ನ ವಿಷಯಗಳ ಬಗ್ಗೆ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಜ್ಞಾನ ಮಾರ್ಗದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು. ಗ್ರಂಥಗಳು ನಮ್ಮ ವ್ಯಕ್ತಿತ್ವ ರೂಪಿಸಲು ಸಹಕಾರಿಯಾಗುತ್ತದೆ ಎಂದರು.ಉಪನ್ಯಾಸ ನೀಡಿದ ಬಾರ್ಕೂರು ದಾಮೋದರ ಶರ್ಮ, ಗ್ರಂಥಗಳು ಯುವ ಜನತೆಯನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳಿಸುವ ಸಾಧನವಾಗಿವೆ. ವಿದ್ಯಾರ್ಥಿಗಳು ಪಾಠ ಪುಸ್ತಕಗಳ ಜತೆಗೆ, ಸಾಧಕರ ಬದುಕಿನ ಕಥೆಗಳನ್ನು ಸಾರುವ, ಉತ್ತಮ ಸಂದೇಶಗಳನ್ನು ನೀಡುವ ಪುಸ್ತಕಗಳನ್ನು ಓದಿಕೊಂಡು, ಯೋಗ್ಯ ಯೋಚನೆಯೊಂದಿಗೆ ಬದುಕಿನಲ್ಲಿ ಹೆಜ್ಜೆಗಳನ್ನಿಡಬೇಕು ಎಂದು ಹೇಳಿದರು.
ಈ ಸಂದರ್ಭ ಸಿಬ್ಬಂದಿ ಸೇವಾ ಪುರಸ್ಕಾರ ಹಾಗೂ ಉತ್ತಮ ಓದುಗ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗ್ರಂಥಪಾಲಕಿ ಪ್ರಣಿತ ನಿರೂಪಿಸಿದರು. ಪಾರ್ವತಿ .ಎಂ ವಂದಿಸಿದರು.