ಜೀವನದಲ್ಲಿ ಸೇವಾ ಮನೋಭಾವ ರೂಢಿಸಿಕೊಳ್ಳಿ: ಗುರುಸಿದ್ಧ ಪಟ್ಟದಾರ್ಯ ಶ್ರೀ

KannadaprabhaNewsNetwork |  
Published : May 26, 2026, 03:00 AM IST
ಪೌರತ್ವ ತರಬೇತಿ ಶಿಬಿರ | Kannada Prabha

ಸಾರಾಂಶ

ಭವಿಷ್ಯದಲ್ಲಿ ಶಿಕ್ಷಕರಾಗುವ ಪ್ರಶಿಕ್ಷಣಾರ್ಥಿಗಳು ಸೇವಾ ಮನೋಭಾವನೆ ರೂಢಿಸಿಕೊಂಡು ಸಮಾಜದ ಉನ್ನತಿಗೆ ಶ್ರಮಿಸಬೇಕೆಂದು ಪಟ್ಟಣದ ಗುರುಸಿದ್ದೇಶ್ವರ ಬೃಹನ್ಮಠದ ಗುರುಸಿದ್ಧ ಪಟ್ಟದಾರ್ಯ ಶ್ರೀಗಳು ಹೇಳಿದರು.

ಕನ್ನಡಪ್ರಭ ವಾರ್ತೆ ಗುಳೇದಗುಡ್ಡ

ಭವಿಷ್ಯದಲ್ಲಿ ಶಿಕ್ಷಕರಾಗುವ ಪ್ರಶಿಕ್ಷಣಾರ್ಥಿಗಳು ಸೇವಾ ಮನೋಭಾವನೆ ರೂಢಿಸಿಕೊಂಡು ಸಮಾಜದ ಉನ್ನತಿಗೆ ಶ್ರಮಿಸಬೇಕೆಂದು ಪಟ್ಟಣದ ಗುರುಸಿದ್ದೇಶ್ವರ ಬೃಹನ್ಮಠದ ಗುರುಸಿದ್ಧ ಪಟ್ಟದಾರ್ಯ ಶ್ರೀಗಳು ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಹಾಗೂ ಗುರುಸಿದ್ದೇಶ್ವರ ಮಹಿಳಾ ಶಿಕ್ಷಣ(ಬಿ.ಇಡಿ) ಮಹಾವಿದ್ಯಾಲಯದ ಆಶ್ರಯದಲ್ಲಿ ಸೋಮವಾರ ತಾಲೂಕಿನ ಸಬ್ಬಲಹುಣಸಿ ಗ್ರಾಮದಲ್ಲಿ ಜರುಗಿದ 2025-26ನೇ ಸಾಲಿನ ಪೌರತ್ವ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಗ್ರಾಮಗಳಲ್ಲಿ ಸ್ವಚ್ಛತೆ, ಶೌಚಾಲಯ ನಿರ್ಮಾಣ, ಅದರ ಉಪಯೋಗ, ಸಸಿಗಳ ನೆಡುವಿಕೆ, ಉತ್ತಮ ಪರಿಸರದ ಕುರಿತು ಗ್ರಾಮದಲ್ಲಿ ಜಾಗೃತಿ ಮೂಡಿಸುವ ಮೂಲಕ ಮಾದರಿ ಕಾರ್ಯ ಮಾಡಬೇಕೆಂದರು.

ಗುರುಸಿದ್ದೇಶ್ವರ ವಿದ್ಯಾವರ್ಧಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಚೇರ್ಮನ್ ರಾಜು ಜವಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಪರಿಸರ ಅಸಮತೋಲನವಾಗಿದೆ. ಇಂಗು ಗುಂಡಿಗಳನ್ನು ತೊಡುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಬಹುದು. ಹಿರಿಯರಲ್ಲಿ ಹಲವು ಮೌಲ್ಯಗಳಿವೆ. ಗ್ರಾಮದಲ್ಲಿರುವ ಹಿರಿಯರ ಮಾರ್ಗದರ್ಶನ ಪಡೆದುಕೊಂಡು ಶಾಲಾ ಮೈದಾನ ಸ್ವಚ್ಛತೆ, ಸಾಮಾಜಿಕ ಪರಿಸರ ಸ್ವಚ್ಛಗೊಳಿಸುವ ಮೂಲಕ ಸೇವಾ ಮನೋಧರ್ಮ ಹೊಂದಬೇಕೆಂದು ಹೇಳಿದರು.

ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಸುರೇಶ ಘಂಟಿ ಮಾತನಾಡಿ, ಶಿಕ್ಷಣದಿಂದ ಮಾತ್ರ ಗ್ರಾಮಗಳು ಅಭಿವೃದ್ಧಿ ಹೊಂದುತ್ತವೆ. ಪ್ರಶಿಕ್ಷಣಾರ್ಥಿಗಳು ಗ್ರಾಮದಲ್ಲಿ ಜಾಗೃತಿ ಮೂಡಿಸುವ ಮೂಲಕ ಗ್ರಾಮಗಳ ಜನರಿಗೆ ಮೌಲ್ಯಗಳ ಕುರಿತು ತಿಳಿವಳಿಕೆ ಮೂಡಿಸಬೇಕೆಂದರು. ಆಡಳಿತಾಧಿಕಾರಿ ರಂಗಪ್ಪ ಶೇಬಿನಕಟ್ಟಿ, ಎಸ್.ಸಿ, ಗದ್ದಿಗೌಡರ ಮಾತನಾಡಿದರು. ಪ್ರಾಚಾರ್ಯ ಡಾ. ಎಚ್.ಎಸ್.ಘಂಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ರೇಣವ್ವ ನಡೆಶೇಸಿ, ಪೌರತ್ವ ತರಬೇತಿ ಶಿಬಿರದ ಸಂಯೋಜಕಿ ಸಕ್ಕೂಬಾಯಿ ನೆಲ್ಲೂರು, ಮಾಜಿ ಗ್ರಾಪಂ ಸದಸ್ಯ ದ್ಯಾವಪ್ಪ ನರಹಟ್ಟಿ ,ಶಿವಪ್ಪ ಘಂಟಿ, ಪರಸಪ್ಪ ನಡಶೇಶಿ, ರಾಯಪ್ಪ ಘಂಟಿ, ಯಲಗುರ್ದಪ್ಪ ನಡಶೇಸಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ವೈ.ಆರ್. ತಳವಾರ, ಶಿಕ್ಷಕ ಸಿದ್ದಾರೂಢ ಪರಗಿ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿನ ಬಿಲ್‌ ಪಾವತಿಗೆ ಆಗ್ರಹಿಸಿ ರೈತರ ಧರಣಿ
ಉಪನೋಂದಣಿ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವ