ಕನ್ನಡಪ್ರಭ ವಾರ್ತೆ ಗದಗ
ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ (ಹಾಕಿ ಮತ್ತು ವಾಲಿಬಾಲ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲೇ ನಮ್ಮ ಜಿಲ್ಲೆಯು ಇತರ ಜಿಲ್ಲೆಗಳಿಗಿಂತ ಹೆಚ್ಚಿನ ಮತ್ತು ಅತ್ಯುತ್ತಮ ಕ್ರೀಡಾ ಸೌಲಭ್ಯಗಳನ್ನು ಹೊಂದಿರುವ ಜಿಲ್ಲೆಯಾಗಿದೆ. ಪ್ರಸ್ತುತ ವಿಭಾಗ ಮಟ್ಟದ ವಾಲಿಬಾಲ್ ಹಾಗೂ ಹಾಕಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿದ್ದು, ಮುಂದಿನ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಿನ ಕ್ರೀಡೆಗಳನ್ನು ಈ ಜಿಲ್ಲೆಯಲ್ಲಿ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಈ ವಿಭಾಗ ಮಟ್ಟದ ಪಂದ್ಯಾವಳಿಗಳು ರಾಜ್ಯ ಮಟ್ಟದ ಮೈಸೂರು ದಸರಾ ಕ್ರೀಡಾಕೂಟಕ್ಕೆ ಪೂರಕವಾಗಿವೆ. ಇಲ್ಲಿ ಗೆದ್ದ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಬೆಳಗಾವಿ ವಿಭಾಗವನ್ನು ಪ್ರತಿನಿಧಿಸಲಿದ್ದಾರೆ. ಹೀಗಾಗಿ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ವಿಭಾಗಕ್ಕೆ ಕೀರ್ತಿ ತರಬೇಕು ಎಂದರು.
ಈ ವೇಳೆ ಸರ್ಪರಾಜ ಶೇಖ್, ರಾಷ್ಟ್ರೀಯ ರೆಫರಿ ವೈ.ಕೆ. ಚೌಡಾಪುರ, ಮಾಜಿ ರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ಇಕ್ಬಾಲ್ ಮುಲ್ಲಾ ಸೇರಿ ವಿವಿಧ ಜಿಲ್ಲೆಯ ಕ್ರೀಡಾಪಟುಗಳು, ತಂಡದ ವ್ಯವಸ್ಥಾಪಕರು, ದೈಹಿಕ ತರಬೇತುದಾರರು ಇದ್ದರು. ವೆಂಕಟೇಶ್ ಆಲ್ಕೋಡ ಹಾಗೂ ತಂಡ ರಾಷ್ಟಗೀತೆ ಮತ್ತು ನಾಡಗೀತೆ ಪ್ರಸ್ತುತ ಪಡಿಸಿದರು. ಎಂ.ಎಸ್. ಕುಚಬಾಳ ನಿರೂಪಿಸಿದರು. ಚಂದ್ರಶೇಖರ ಮೇಲಿನಮನಿ ವಂದಿಸಿದರು.