ಕನ್ನಡಪ್ರಭ ವಾರ್ತೆ ಹಾಸನ
ತಾಲೂಕಿನ ಗೊರೂರಿನಲ್ಲಿ ನಾಡ್ಜ್ ಸಂಸ್ಥೆ ನಿರ್ವಹಿಸುತ್ತಿರುವ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ವತಿಯಿಂದ ಪ್ರಥಮ ಬಾರಿಗೆ ಆಯೋಜಿಸಿದ್ದ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭವನ್ನು ಗೊರೂರಿನ ಬಯಲು ರಂಗಮಂದಿರದಲ್ಲಿ ಉದ್ಘಾಟಿಸಿ ಅವರು ಮಾತನಾಡಿ, ವಿದ್ಯಾರ್ಥಿಗಳು ಆಯೋಜಿಸಿದ್ದ ಕಾರ್ಯಕ್ರಮವನ್ನು ಶ್ಲಾಘಿಸಿದ ಅವರು, ನಾಯಕತ್ವ ಎಂದರೆ ಕೇವಲ ಅಧಿಕಾರ ಅಥವಾ ಹುದ್ದೆಯಲ್ಲ. ಜವಾಬ್ದಾರಿಯನ್ನು ಅರಿತುಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ಸಂಪೂರ್ಣವಾಗಿ ದೂರವಿದ್ದು, ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಜಗದೀಶ್ ರಾಮಘಟ್ಟ ಮಾತನಾಡಿ, ನಾಯಕತ್ವವು ಕೇವಲ ಹೆಸರಿಗಷ್ಟೇ ಸೀಮಿತವಾಗಬಾರದು. ವಹಿಸಿಕೊಂಡ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ನಾಯಕತ್ವದ ಗುಣವನ್ನು ಸಾಬೀತುಪಡಿಸಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ಇಂತಹ ಜವಾಬ್ದಾರಿಗಳನ್ನು ನಿರ್ವಹಿಸುವ ಅವಕಾಶ ದೊರೆಯುವುದು ಭವಿಷ್ಯದಲ್ಲಿ ಉತ್ತಮ ನಾಯಕತ್ವ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು. ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಹೇಮರಾಜ್ ಜಿ. ಆರ್. ಮಾತನಾಡಿದರು.ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿ ಗಮನ ಸೆಳೆದವು. ಸಮಾರಂಭದಲ್ಲಿ ನಾಡ್ಜ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ತಬ್ರೇಜ್ ನದೀಮ್, ಅಕಾಡೆಮಿಕ್ ನಿರ್ದೇಶಕಿ ಹುಧಾ ಫಾತಿಮಾ ಡೆಲ್ವಿ, ಶಾಲಾ ಅಧ್ಯಕ್ಷ ರಾಜೀವ್, ಮುಖ್ಯ ಶಿಕ್ಷಕಿ ಶಬನ, ಶಾಲಾ ಆಡಳಿತಾಧಿಕಾರಿ ನವೀನ್ ಕುಮಾರ್ ಜಿ. ಆರ್., ಶಿಕ್ಷಕರಾದ ಗೀತಾ, ಶೃತಿ, ನರೇಶ್ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.