ಹರಿಹರದಲ್ಲಿ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆ ಕಾರ್ಯಕ್ರಮ- - - ಕನ್ನಡಪ್ರಭ ವಾರ್ತೆ ಹರಿಹರ ಕರೋಕೆ ಗಾಯನ ಮೂಲಕ ನಾಡಿನ ಜನಪದ ಸಂಸ್ಕೃತಿಯನ್ನು ಉಳಿಸಿ, ಇನ್ನಷ್ಟು ಅದ್ಭುತವಾಗಿ ಬೆಳೆಸುವ ಕಾರ್ಯ ನಿರಂತರ ನಡೆಯಬೇಕು ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದರು.
ಕರೋಕೆ ಗಾಯನದ ಮೂಲಕ ಅನೇಕ ಪ್ರತಿಭಾವಂತರು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಇದು ವೇದಿಕೆಯಾಗಿದೆ. ವಾಯ್ಸ್ ಆಫ್ ಪವರ್ ಹೆಸರಿನಲ್ಲಿ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆ ಏರ್ಪಡಿಸಿರುವುದು ಸಂತಸ ತಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಅನೇಕ ಕಲಾವಿದರು ಸ್ಪರ್ಧೆಗೆ ಬಂದಿದ್ದಾರೆ. ಈ ಸ್ಪರ್ಧೆಯಲ್ಲಿ ಹೆಚ್ಚು ಪ್ರತಿಭೆಗಳು ಹೊರಹೊಮ್ಮಿ ದೊಡ್ಡಮಟ್ಟದ ಯಶಸ್ಸು ಸಾಧಿಸುವಂತಾಗಲಿ ಎಂದು ಹಾರೈಸಿದರು.
ಆಯೋಜಕ ಅಣ್ಣಪ್ಪ ಅಜ್ಜೇರ್ ಮಾತನಾಡಿ, ನಗರದಲ್ಲಿ ಮೊಟ್ಟಮೊದಲ ಬಾರಿಗೆ ನಮ್ಮ ಸಂಸ್ಥೆಯಿಂದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆ ಏರ್ಪಡಿಸಿದ್ದೆವೆ ಎಂದರು.ರಾಜ್ಯದ ವಿವಿಧ ಜಿಲ್ಲೆಗಳಿಂದ 120 ಕಲಾವಿದರು ಭಾಗವಹಿಸಿದ್ದು, 52 ವಿಕಲಚೇತನ ಕಲಾವಿದರು ಆಗಮಿಸಿ ಪ್ರತಿಭೆ ಪ್ರದರ್ಶಿಸಿದರು. ತೀರ್ಪುಗಾರರಾಗಿ ಆನಂದ್ ಆರ್. ಪಾಟೀಲ್, ಕಲಾವತಿ ವಿಶ್ವನಾಥ್, ಕಾಂತರಾಜ್, ಕವಿತಾ ಸುಕನ್ಯ, ಬಿಎಸ್ಪಿ ಹನುಮಂತಪ್ಪ ಇತರರಿದ್ದರು.
- - - -23ಎಚ್‍ಆರ್‍ಆರ್02:ಹರಿಹರದಲ್ಲಿ ಪುನೀತ್ ರಾಜಕುಮಾರ ರವರ ನೆನಪಿಗಾಗಿ ಶ್ರೀ ಜನನಿ ಜನ್ಮದಾತೆ ಸಾಂಸ್ಕøತಿಕ ಕಲಾ ಟ್ರಸ್ಟ್ ನಗರದ ಗುರುಭವನದಲ್ಲಿ ಆಯೋಜಿಸಿದ ರಾಜ್ಯಮಟ್ಟದ ಕರೋಕೆ ಗಾಯನ ಸ್ಪರ್ಧೆ ಕಾರ್ಯಕ್ರಮವನ್ನು ಶಾಸಕ ಬಿ.ಪಿ. ಹರೀಶ್ ಉದ್ಘಾಟಿಸಿ ಅವರು ಮಾತನಾಡಿದರು.