ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಿ: ಡಾ.ಅಪ್ಪಗೆರೆ ತಿಮ್ಮರಾಜು

KannadaprabhaNewsNetwork | Published : Apr 10, 2025 1:03 AM

ಸಾರಾಂಶ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜ್ಞಾನದ ಸಂಕೇತ. ನಿರಂತರ ಪರಿಶ್ರಮದಿಂದ ಸಮಾಜಕ್ಕೆ ಉತ್ತಮ ಸಂವಿಧಾನ ನೀಡಿದ್ದಾರೆ. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಓದಿ ಬದುಕು ಸಾರ್ಥಕಗೊಳಿಸಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪ್ರಶಿಕ್ಷಣಾರ್ಥಿಗಳು ಶಿಸ್ತು ಸಮಯ ಪಾಲನೆ ಜೊತೆಗೆ ಪುಸ್ತಕ ಓದುವ ಹವ್ಯಾಸವನ್ನು ರೂಢಿಸಿಕೊಂಡು ಜ್ಞಾನ ಬೆಳೆಸಿಕೊಳ್ಳಸಬೇಕು ಎಂದು ಅಂತಾರಾಷ್ಟ್ರೀಯ ಜಾನಪದ ಕಲಾವಿದ ಡಾ.ಅಪ್ಪಗೆರೆ ತಿಮ್ಮರಾಜು ಕರೆ ನೀಡಿದರು.

ಪಟ್ಟಣದ ಭಗವಾನ್ ಬುದ್ಧ ಮಹಾವಿದ್ಯಾಲಯದಲ್ಲಿ ನಡೆದ ಪ್ರಥಮ ವರ್ಷದ ಬಿಇಡಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿ, ಬದುಕಿನ ಹಾದಿಯಲ್ಲಿ ಶ್ರೇಷ್ಠತೆ ಪಡೆದುಕೊಳ್ಳಲು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಶಿಕ್ಷಣಾರ್ಥಿಗಳು ಮಾತು ಮತ್ತು ನಡವಳಿಕೆಯಲ್ಲಿ ಎಚ್ಚರಿಕೆ ವಹಿಸಿ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಬೇಕೆಂದು ಸಲಹೆ ನೀಡಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜ್ಞಾನದ ಸಂಕೇತ. ನಿರಂತರ ಪರಿಶ್ರಮದಿಂದ ಸಮಾಜಕ್ಕೆ ಉತ್ತಮ ಸಂವಿಧಾನ ನೀಡಿದ್ದಾರೆ. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಓದಿ ಬದುಕು ಸಾರ್ಥಕಗೊಳಿಸಿಕೊಳ್ಳಬೇಕೆಂದು ಹೇಳಿದರು.

ಭಗವಾನ್ ಬುದ್ಧ ಮಹಾವಿದ್ಯಾಲಯ ಸಂಸ್ಥಾಪಕ ಅಧ್ಯಕ್ಷ ಯಮದೂರು ವೈ.ಎಸ್ ಸಿದ್ದರಾಜು ಮಾತನಾಡಿ, ವಿದ್ಯಾರ್ಥಿಗಳು ಗುರು ಹಿರಿಯರಿಗೆ ಗೌರವ ನೀಡಬೇಕು. ಮೌಢ್ಯತೆ ದೂರಮಾಡಿ ವೈಜ್ಞಾನಿಕ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕೆಂದರು.

ಭಗವಾನ್ ಬುದ್ಧ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ಯಮದೂರು ಸಿದ್ದರಾಜು ಹಾಗೂ ಡಾ.ಅಪ್ಪಗೆರೆ ಪುಟ್ಟರಾಜು ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಕಸಾಪ ತಾಲೂಕು ಅಧ್ಯಕ್ಷ ಚೇತನ್‌ಕುಮಾರ್, ಪ್ರಾಂಶುಪಾಲರಾದ ಸುಬ್ರಮಣ್ಯ, ಕೃಷ್ಣಪ್ಪ, ಶಿವಶಂಕರ್ ಸೇರಿದಂತೆ ಇತರರು ಇದ್ದರು.

14ರಂದು ಡಾ.ಬಿ.ಆರ್ ಅಂಬೇಡ್ಕರ್‌ ಜನ್ಮ ದಿನಾಚರಣೆ

ಮಂಡ್ಯ: ನಗರದಲ್ಲಿ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮ ದಿನಾಚರಣೆ ಅಂಗವಾಗಿ ಬೆಳಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದ ಉದ್ಯಾನವನದಲ್ಲಿರುವ ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೆಳಗ್ಗೆ 10.45 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ.ನಾಡಿದ್ದು ವಿದ್ಯತ್ ವ್ಯತ್ಯಯ

ಮಂಡ್ಯ: 220/66/11 ಕೆ.ವಿ. ತಾಲೂಕಿನ ತೂಬಿನಕೆರೆ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕಾಳೇನಹಳ್ಳಿ ಮತ್ತು ರಾಗಿಮುದ್ದನಹಳ್ಳಿ ಫೀಡರ್‌ಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏಪ್ರಿಲ್ 12 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕಾಳೇನಹಳ್ಳಿ ಫೀಡರ್ (ತೂಬಿನಕೆರೆ ವಿದ್ಯುತ್ ವಿತರಣಾಕೇಂದ್ರ)ದ ನೊದಕೊಪ್ಪಲು, ತೂಬಿನಕೆರೆ, ಉರಮಾರಕಸಲಗೆರೆ, ಯಲಿಯೂರು, ಯಲಿಯೂರು ಸರ್ಕಲ್, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳ್ಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

Share this article