ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಬಾಲಕಿಯರ ಶಾಲೆಗೆ ಕಲಿಸು ಫೌಂಡೇಶನ್ ಹಾಗೂ ಕ್ಯೂಬರ್ ಲೂಬ್ರಿಕೇಷನ್ ಸಂಸ್ಥೆಗಳ ಸಹಯೋಗದಲ್ಲಿ ಉಚಿತವಾಗಿ ನಿರ್ಮಿಸಿರುವ ನೂತನ ಗ್ರಂಥಾಲಯವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ಹಾಗೂ ಜ್ಞಾನದ ದಾಹವನ್ನು ಹೆಚ್ಚಿಸುವ ಉದ್ದೇಶದಿಂದ ನಿರ್ಮಿಸಲಾಹಿಗೆ, ಗ್ರಂಥಾಲಯವು ಶಾಲೆಯ ಶೈಕ್ಷಣಿಕ ಬೆಳವಣಿಗೆಗೆ ಮಹತ್ವವಾಗಿದೆ. ವಿದ್ಯಾರ್ಥಿಗಳು ಓದುವ ಅಭ್ಯಾಸ ಬೆಳೆಸಿಕೊಳ್ಳುವ ಜೊತೆಗೆ ನಾಯಕತ್ವ ಗುಣಗಳನ್ನು ರೂಢಿಸಿಕೊಂಡು ತಾವು ಪಡೆದ ಜ್ಞಾನವನ್ನು ಇತರರೊಂದಿಗೆ ಹಂಚಿಕೊಳ್ಳುವ ಮನೋಭಾವ ಹೊಂದಬೇಕು ಎಂದರು.ಮುಖ್ಯ ಶಿಕ್ಷಕ ನಾಗಣ್ಣ ಮಾತನಾಡಿ, ಶಿಕ್ಷಣದ ಜೊತೆಗೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪುಸ್ತಕಗಳ ಓದುವ ಹವ್ಯಾಸ ಅತ್ಯಗತ್ಯ. ಗ್ರಂಥಾಲಯವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜ್ಞಾನ ಮಂದಿರವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಜ್ಞಾನ ಪಡೆದುಕೊಳ್ಳಬೇಕು ಎಂದರು.
ಶ್ರೀಮಹಾಲಕ್ಷ್ಮೀ ದೇವಾಲಯದಲ್ಲಿ ಆ.21ಕ್ಕೆ ವರಮಹಾಲಕ್ಷ್ಮಿ ಪೂಜೆ
ಆ.21ರ ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಪಂಚಾಮೃತಾಭಿಷೇಕ, ಹೂ ತೋಮಾಲೆ ಅಲಂಕಾರ ಪೂಜೆ, ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ. ಬಳಿಕ ಎಂ.ವೈ.ಕುಮಾರ್ ತಂಡದಿಂದ ಸ್ಯಾಕ್ಸೋಫೋನ್ ವಾದನ, ನಂತರ ಎಂ.ಎನ್.ಯೋಗೇಶ್, ನಂದೀಶ್ ಮತ್ತು ತಂಡದವರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ನಡೆಯಲಿದೆ.ಸಂಜೆ 6.30ಕ್ಕೆ ದಾಸವಾಣಿ ಸಿ.ಕೆ.ಮಂಜುನಾಥ್, ಪಿಟೀಲು ಗುರುಮೂರ್ತಿ ತಂಡದಿಂದ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀಮಹಾಲಕ್ಷ್ಮಿದೇವಿ ದೇವಸ್ಥಾನ ಟ್ರಸ್ಟ್ ಪ್ರಕಟಣೆ ತಿಳಿಸಿದೆ.