ಕನ್ನಡಪ್ರಭ ವಾರ್ತೆ ಸುರಪುರ
ನಗರದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದಡಿಯಲ್ಲಿ ನಡೆಯುತ್ತಿರುವ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕೋತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ ಹಾಗೂ ವಿಕಾಸ ಆಕಾಡೆಮಿ ಸುರಪುರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ದಿನಗಳಲ್ಲಿ ಭಾರತೀಯ ಶಿಕ್ಷಣ ವ್ಯವಸ್ಥೆ ಸರಿ ದಾರಿಯಲ್ಲಿ ಸಾಗುತ್ತಿಲ್ಲ. ಪಠ್ಯಪುಸ್ತಕದಲ್ಲಿ ಬೇತಾಳದ ಕಥೆಗಳಿದ್ದು, ಮಕ್ಕಳ ಮೇಲೆ ನಾನಾ ರೀತಿ ಕೆಟ್ಟ ಪರಿಣಾಮ ಬೀರುತ್ತಿದೆ ಎಂದರು.
ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಥಳ ನಿಗದಿ ಮಾಡಿದಂತೆ ಸರಕಾರ ಶಿಕ್ಷಣ ನೀಡಲು ಜನ ಸಂದಣಿಯಿಂದ 20 ಕಿ.ಮೀ. ದೂರದಲ್ಲಿ ಪ್ರತಿ ಊರು, ನಗರಗಳಿಗೆ ವಿದ್ಯಾ ಕೇಂದ್ರ ಪ್ರಾರಂಭವಾಗಬೇಕು. ಇಡೀ ಜಗತ್ತಿನಲ್ಲಿ ಭಾರತೀಯರ ರಕ್ತದಲ್ಲಿ ಅತೀ ಬುದ್ದಿವಂತಿಕೆ ಅನುವಂಶೀಯವಾಗಿ ಬಂದಿದೆ. ಇದನ್ನು ಜೀವನದಲ್ಲಿ ಅಳವಡಿಸಿಕೊಂಡು ಯಶಸ್ವಿಯಾಗಬೇಕು. ಅಮೆರಿಖ, ಇಂಗ್ಲಂಡ್, ರಷ್ಯಾ, ಪ್ರಾನ್ಸ್ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಅತೀ ಹೆಚ್ಚು ಅಂಕ ಪಡೆದ 10 ವಿದ್ಯಾರ್ಥಿಗಳು ಭಾರತೀಯರೇ ಆಗಿದ್ದಾರೆ ಎಂದು ತಿಳಿಸಿದರು.ಇಲ್ಲಿನ ತೋಟದಲ್ಲಿ ಗೋ ಶಾಲೆಯನ್ನು ಸಂಸ್ಥೆಯ ಕಾರ್ಯದರ್ಶಿ ಶರಣಬಸಪ್ಪ ನಿಷ್ಠಿ ಉದ್ಘಾಟಿಸಿದರು. ಸಂಸ್ಥೆಯ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ಎಸ್. ನಿಷ್ಠಿ ಅಧ್ಯಕ್ಷತೆ ವಹಿಸಿದ್ದರು. ನಿಷ್ಠಿ ಕಡ್ಲಪ್ಪನವರ ವಿರಕ್ತ ಮಠದ ಪ್ರಭುಲಿಂಗ ಮಹಾಸ್ವಾಮೀಜಿ, ಎಲ್ಲಾ ವಿಭಾಗದ ಪ್ರಾಂಶುಪಾಲರು, ಸಿಬ್ಬಂದಿ ಇದ್ದರು.