ಸ್ಥಳೀಯ ಕಲೆಗಳ ಬೆಳೆಸಲು ಸಾಂಸ್ಕೃತಿಕ ಕಾರ್ಯಕ್ರಮ ಸಹಕಾರಿ: ನಟ ಡಾ.ಶಿವರಾಜ ಕುಮಾರ್

KannadaprabhaNewsNetwork |  
Published : Feb 07, 2026, 01:30 AM IST
ಶಾಸಕ ಬೇಳೂರು ಉದ್ಘಾಟಿಸಿದರು | Kannada Prabha

ಸಾರಾಂಶ

ಜಾತ್ರೆ ಸಂದರ್ಭದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ಥಳೀಯ ಕಲೆಗಳನ್ನು ಉಳಿಸಿ ಬೆಳೆಸಲು ಸಹಕಾರಿ ಎಂದು ಖ್ಯಾತ ಚಲನಚಿತ್ರ ನಟ ಡಾ.ಶಿವರಾಜ ಕುಮಾರ್ ಅಭಿಪ್ರಾಯಪಟ್ಟರು.

ಸಾಗರ: ಜಾತ್ರೆ ಸಂದರ್ಭದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಸ್ಥಳೀಯ ಕಲೆಗಳನ್ನು ಉಳಿಸಿ ಬೆಳೆಸಲು ಸಹಕಾರಿ ಎಂದು ಖ್ಯಾತ ಚಲನಚಿತ್ರ ನಟ ಡಾ.ಶಿವರಾಜ ಕುಮಾರ್ ಅಭಿಪ್ರಾಯಪಟ್ಟರು.

ಮಾರಿಜಾತ್ರೆಯ ಅಂಗವಾಗಿ ಶ್ರೀಮಾರಿಕಾಂಬಾದೇವಿ ನ್ಯಾಸ ಪ್ರತಿಷ್ಠಾನ ಆಯೋಜಿಸಿರುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತ್ರೆಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪರಂಪರೆಯಿದೆ. ರಾಜ - ಮಹಾರಾಜರ ಕಾಲದಲ್ಲಿಯೂ ಜಾತ್ರೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿತ್ತು ಎಂದು ನೆನಪಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಜಾತ್ರೆ ಸಂದರ್ಭದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ಊರಿನ ಕಲಾಪರಂಪರೆ ಬಿಂಬಿಸುತ್ತವೆ. ಜಾತ್ರಗೆ ಬರುವವರು ಸಾಂಸ್ಕೃತಿಕ ಕಾರ್ಯಕ್ರಮಗಳ ಸೊಗಡನ್ನೂ ಸವಿಯಬೇಕು ಎಂದರು.

ಜಾತ್ರೆ ಸಂದರ್ಭದಲ್ಲಿ ಸಣ್ಣಪುಟ್ಟ ದೂರುಗಳು ಇರಬಹುದು. ನಮ್ಮೂರಿನ ಜನರಿಗೆ ಅಮ್ಮನವರ ದರ್ಶನ ಸುಲಭವಾಗಿ ಸಿಗಬೇಕು ಎನ್ನುವ ಉದ್ದೇಶದಿಂದ ಪೊಲೀಸ್ ಇಲಾಖೆ ಒಂದಷ್ಟು ಕಠಿಣ ಕ್ರಮವನ್ನು ತೆಗೆದುಕೊಂಡಿದೆ. ಇಲಾಖೆಗೆ ಭಕ್ತರು ಸಹಕಾರ ನೀಡಬೇಕು. ಅಮ್ಮನವರ ದರ್ಶನಕ್ಕೆ ಭಕ್ತರು ಸುಮಾರು ೧೦ಗಂಟೆ ಕಾಲ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದರೂ ಎಲ್ಲಿಯೂ ನೂಕುನುಗ್ಗಲು ಆಗದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಿದೆ ಎಂದು ಹೇಳಿದರು.

ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಅಧ್ಯಕ್ಷತೆ ವಹಿಸಿದ್ದರು. ಗೀತಾ ಶಿವರಾಜ ಕುಮಾರ್, ಹುಲಿ ಕಾರ್ತಿಕ್, ಭರತ್ ಸಾಗರ್, ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ಎಎಸ್ಪಿ ಡಾ. ಬೆನಕ ಪ್ರಸಾದ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಸಮಿತಿ ಉಪಾಧ್ಯಕ್ಷ ಸುಂದರ ಸಿಂಗ್, ಪ್ರಧಾನ ಕಾರ್ಯದರ್ಶಿ ಗಿರಿಧರ ರಾವ್, ಸಹ ಕಾರ್ಯದರ್ಶಿ ಎಸ್,ವಿ.ಕೃಷ್ಣಮೂರ್ತಿ, ಕೋಶಾಧ್ಯಕ್ಷ ನಾಗೇಂದ್ರ ಕುಮಟಾ, ಪ್ರಮುಖರಾದ ಪುರುಷೋತ್ತಮ, ರಾಮು, ಲೋಕೇಶ್ ಕುಮಾರ್, ಗಂಗಾಧರ ಜಂಬಿಗೆ, ಪುರುಷೋತ್ತಮ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರ ಶ್ರೀಗಳ ಜ್ಞಾನಮಾರ್ಗ ನಮಗೆ ಆದರ್ಶ
ಮುಂದಿನ ಪೀಳಿಗೆ ಧರ್ಮವಂತರಾಗಿಸೋದೆ ಜೈನ ಧರ್ಮದ ಉದ್ದೇಶ: ಜೈನಮುನಿ ಕುಲರತ್ನಭೂಷಣ ಮಹಾರಾಜರು