ಸಾಂಸ್ಕೃತಿಕ ಕಾರ್ಯಕ್ರಮಗಳು ಜೀವನ ಮೌಲ್ಯ ಕಲಿಸುತ್ತವೆ: ಪ್ರೊ.ಎ.ಟಿ. -ರಾಮಚಂದ್ರನಾಯಕ್‌

KannadaprabhaNewsNetwork |  
Published : Nov 07, 2026, 01:45 AM IST
ಚಿತ್ರ 6ಬಿಡಿಆರ್‌2ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ನಡೆದ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಝೆಂಕಾರ – 2026ರ ಸಮಾರೋಪದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. | Kannada Prabha

ಸಾರಾಂಶ

ಸಾಂಸ್ಕೃತಿಕ ಕಾರ್ಯಕ್ರಮಗಳು ಜೀವನದ ಮೌಲ್ಯಗಳನ್ನು ಕಲಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಎ.ಟಿ. ರಾಮಚಂದ್ರನಾಯಕ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೀದರ್‌

ಸಾಂಸ್ಕೃತಿಕ ಕಾರ್ಯಕ್ರಮಗಳು ಜೀವನದ ಮೌಲ್ಯಗಳನ್ನು ಕಲಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಎ.ಟಿ. ರಾಮಚಂದ್ರನಾಯಕ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ವಿವಿಯ ಮಹಾವಿದ್ಯಾಲಯದ ನಂದಿನಗರ ಆವರಣದಲ್ಲಿ ನವೆಂಬರ್‌ 3ರಿಂದ 5ರ ವರೆಗೆ ಆಯೋಜಿಸಲಾಗಿದ್ದ 20ನೇ ವಿಶ್ವವಿದ್ಯಾಲಯದ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಝೆಂಕಾರ- 2026ರ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಮತ್ತಷ್ಟು ಪ್ರತಿಭಾವಂತರಾಗಲಿ ಎಂದು ಹಾರೈಸಿದರು.

ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಬಸವರಾಜ ಭತಮುರಗೆ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸ್ಪರ್ಧೆಯಲ್ಲಿ ಸೋತವರು ನಿರಾಶರಾಗಬಾರದು. ಸ್ಪರ್ಧೆಯಲ್ಲಿ ಭಾಗವಹಿಸುವುದು ಮತ್ತು ಅನುಭವ ಪಡೆಯುವದು ಅತೀ ಮುಖ್ಯ ಎಂದು ಹೇಳಿದರು. ಮತ್ತೋರ್ವ ಆಡಳಿತ ಮಂಡಳಿ ಸದಸ್ಯರಾದ ವಿಜಯಕುಮಾರ ಎಸ್‌. ಪಾಟೀಲ್‌ ಗಾದಗಿ ಅವರು ಯುವಜನೋತ್ಸವಗಳು ಭವಿಷ್ಯದ ನಾಯಕತ್ವ ಗುಣಗಳನ್ನು ಬೆಳೆಸುವ ಪ್ರಮುಖ ವೇದಿಕೆಗಳಾಗಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯದ ವಿವಿಧ ಭಾಗಗಳಿಂದ ಒಂಬತ್ತು ಮಹಾವಿದ್ಯಾಲಯಗಳ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರರ್ಶಿಸಿ ದರು. ಯುವ ಜನೋತ್ಸವದಲ್ಲಿ ಸಂಗೀತ, ಲಲಿತಕಲೆ, ಕನ್ನಡ ಸಾಹಿತ್ಯ, ಆಂಗ್ಲ ಸಾಹಿತ್ಯ, ಜಾನಪದ ನೃತ್ಯ ಹಾಗೂ ರಂಗಭೂಮಿ ವಿಭಾಗಗಳಲ್ಲಿ ಒಟ್ಟು 21 ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಲಘು ಸಂಗೀತ, ಸಮೂಹ ಗೀತೆ, ದೇಶಭಕ್ತಿ ಗೀತೆ, ಸ್ಥಳದಲ್ಲಿಯೇ ಚಿತ್ರಕಲೆ, ವ್ಯಂಗ್ಯಚಿತ್ರ, ಕೊಲಾಜ್‌, ಮಣ್ಣಿನ ಕಲಾಕೃತಿ, ರಂಗೋಲಿ, ಪೋಸ್ಟರ್‌ ತಯಾರಿಕೆ, ಕನ್ನಡ ಮತ್ತು ಆಂಗ್ಲ ಭಾಷಣ, ಆಶುಭಾಷಣ, ಚರ್ಚಾಸ್ಪರ್ದೆ, ಏಕಾಂಕ ನಾಟಕ, ಪ್ರಹಸನ, ಮೈಮ್, ಏಕಪಾತ್ರಾಭಿನಯ ಹಾಗೂ ಜಾನಪದ ನೃತ್ಯ ಸೇರಿದಂತೆ ವಿವಿಧ ಸ್ಪರ್ದೆಗಳಲ್ಲಿ ವಿದ್ಯಾರ್ಥಿಗಳು ಸೃಜನಶೀಲತೆ ಮತ್ತು ಕಲಾತ್ಮಕ ಪ್ರತಿಭೆಗೆ ವೇದಿಕೆಯಾದವು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಶು ವೈದ್ಯಕೀಯ ಮಹಾವಿದ್ಯಾಲಯ, ಬೀದರ್‌ನ ಡೀನ್‌ ಡಾ. ಎಂಕೆ ತಾಂದಳೆ ಅವರು ಎಲ್ಲ ತಂಡಗಳನ್ನು ಅಭಿನಂದಿಸಿ ವಂದಿಸಿದರು.

ವಿಶ್ವವಿದ್ಯಾಲಯದ ಶಿಕ್ಷಕರ ಸಂಘದ ಅಧ್ಯಕ್ಷ ಡಾ.ಎಚ್‌.ಸಿ.ಇಂದರೇಶ ಅವರು ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಅಧಿಕಾರಿಗಳಾದ ಡಾ.ದಿಲೀಪಕುಮಾರ್‌, ಡಾ. ಶ್ರೀಕಾಂತ ಕುಲಕರ್ಣಿ, ಡಾ. ಸತೀಶಚಂದ್ರ ಬಿರಾದಾರ್‌, ದಾಮೋದರ್‌, ಬೋಧಕೇತರ ನೌಕರರ ಸಂಘದ ಅಧ್ಯಕ್ಷ ನಾಗಭೂಷಣ ಹುಗ್ಗೆ, ಕರ್ನಾಟಕ ಪಶುವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಯಲಗೋಡ, ಡಾ. ಸವಿತಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಯುವಜನೋತ್ಸವದ ಸಂಘಟನಾ ಕಾರ್ಯದರ್ಶಿ ಡಾ. ಚಿಕ್ಕಗೌಡರ ಕೊಟ್ರೆಶ್‌ ಪ್ರಸಾದ್ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಡಾ. ಸಂಜೀವಕುಮಾರ್‌ ಸ್ವಾಗತಿಸಿ ಡಾ. ಎನ್‌.‌ ಆನಂದಕುಮಾರ, ಡಾ.ರವೀಂದ್ರ ಡೊಂಬಾರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು. ವಿವಿಧ ಸ್ಪರ್ದೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.---

ಬಾಕ್ಸ್‌:

ಬೀದರ್‌ ಪಶು ವೈದ್ಯ ಕಾಲೇಜಿಗೆ ಸಮಗ್ರ ವೀರಾಗ್ರಣಿ

ಸಮಗ್ರ ವಿರಾಗ್ರಣಿ ಪ್ರಶಸ್ತಿಯನ್ನು ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ್‌ ಪಡೆದರೆ, ಪ್ರಥಮ ರನ್ನರ್‌ ಅಪ್‌ ಪ್ರಶಸ್ತಿಯನ್ನು ಪಶುವೈದ್ಯಕೀಯ ಮಹಾವಿದ್ಯಾಲಯ, ಹಾಸನ ಮತ್ತು ಪಶುವೈದ್ಯಕೀಯ ಮಹಾವಿದ್ಯಾಲಯ, ಹೆಬ್ಬಾಳ ಹಂಚಿಕೊಂಡಿತು. ದ್ವಿತೀಯ ರನ್ನರ್‌ ಅಪ್‌ ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಪಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ